Homeಕರ್ನಾಟಕಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

- Advertisement -
- Advertisement -

ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಸಂಭವಿಸಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಾಲಕಿ, ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಡುಗನೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಇಡಬಾರದು ಎಂದು ಕುಟುಂಬವು ಬಾಲಕಿಗೆ ಎಚ್ಚರಿಕೆ ನೀಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಾಲಕಿಯು ಪೋಷಕರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಪಿರಿಯಾಪಟ್ಟಣ ಪೊಲೀಸರು ಒಂದು ತಿಂಗಳ ಹಿಂದೆ ಮೈಸೂರಿನ ಸರ್ಕಾರಿ ಬಾಲಕಿಯರ ನಿಲಯಕ್ಕೆ ಬಾಲಕಿಯನ್ನು ಕಳುಹಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ಇದರ ನಂತರ ಪೋಷಕರು ಹದಿನೈದು ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಬಾಲಕಿತೆ ತೊಂದರೆ ನೀಡುವುದಿಲ್ಲ ಮತ್ತು ಅವರ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಮನೆಗೆ ಕರೆತಂದಿದ್ದರು.

ಬಾಲಕಿಯನ್ನು ಮನೆಗೆ ಕರೆತಂದ ನಂತರ, ತಂದೆ ಸುರೇಶ್ ಮತ್ತು ತಾಯಿ ಬೇಬಿ ಸೇರಿದಂತೆ ಕುಟುಂಬ ಸದಸ್ಯರು ಹುಡುಗನೊಂದಿಗೆ ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದಂತೆ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಬಾಲಕಿಯು ಮತ್ತೆ ಹುಡುಗನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಂಗಳವಾರ ಮುಂಜಾನೆ ಬಾಲಕಿ ಮತ್ತು ತಂದೆಯ ನಡುವೆ ಘರ್ಷಣೆ ಸಂಭವಿಸಿ, 2.30-3.00 ಗಂಟೆಯ ಸುಮಾರಿಗೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಾಲಕಿಯ ತಾಯಿ ಆಕೆಯ ಮೇಲೆ ನೀರು ಚಿಮುಕಿಸಿ ಬದುಕಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ನಂತರ ಪೋಷಕರು ಆಕೆಯ ಶವವನ್ನು ದ್ವಿಚಕ್ರ ವಾಹನದಲ್ಲಿ ಕೊಂಡೊಯ್ದು ಪಕ್ಕದ ಮೆಳ್ಳಹಳ್ಳಿ ಗ್ರಾಮಕ್ಕೆ ತೆರಳಿ ಶವವನ್ನು ರಸ್ತೆಬದಿ ಇಟ್ಟು ಮನೆಗೆ ಮರಳಿದ್ದಾರೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಈ ಘಟನೆಯ ನಂತರ ಬಾಲಕಿಯ ತಂದೆ ಸುರೇಶ್ ಪಿರಿಯಾಪಟ್ಟಣ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಪೊಲೀಸರು ಸುರೇಶ್ ಮತ್ತು ಆತನ ಪತ್ನಿ ಬೇಬಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದಲಿತರು ಇನ್ನೆಷ್ಟು ದಿನ ರೋಗ ಪೀಡಿತ ಸಮಾಜದಲ್ಲಿ ನರಳಬೇಕೋ ಏನೋ, ಈ ಜನ ಮನುಷ್ಯರು ಅನ್ನಿಸಿಕೊಳ್ಳೋಕೆ ನಾಲಾಯಕ್ ಅನ್ನಿಸತ್ತೆ, ಒಬ್ಬರಿಗೆ ಜೀವ ಕೊಡಲು ಸಾಧ್ಯವಿಲ್ಲ ವೆಂದಮೇಲೆ ಇವರಿಗೆ ಜೀವ ತೆಗೆಯುವ ಅಧಿಕಾರವೆಲ್ಲಿದೇ? ಆ ಹೆಣ್ಣು ಮಗಳಿಗೆ ಅದ ಸಾವಿಗೆ ಕನಿಷ್ಠ ನ್ಯಾಯ ಅಂದರೆ ಆ ಪಾಪಿಯನ್ನು ಸಹ ಕತ್ತು ಹಿಸುಕಿ ಕೊಲ್ಲುವ ಶಿಕ್ಷೆ ವಿಧಿಸಬೇಕು.

  2. ಎಂಥಾ ಪಾಪಿಗಳು ಇವರು. ಜಾತಿಯ ವಿಷ ಎಷ್ಟರಮಟ್ಟಿಗೆ ಇವರೊಳಗೆ ಹರಿಯುತ್ತಿದೆ ಎಂಬುದನ್ನು ಈ ಘಟನೆ ಸಾಕ್ಷಿಕರೀಸುತ್ತದೆ. ಹೆತ್ತವರು ಕೊಲೆ ಮಾಡುವ ನಿರ್ದಯಿ ಕಾರ್ಯಕ್ಕೆ ಎಂದೂ ಕೈಹಾಕಬಾರದು. ಆಯ್ಕೆ ಮಾಡಿರುವವರನ್ನ ಹರಸಿ ಸುಮ್ಮನಿದ್ದುಬಿಡಬೇಕು.

  3. ಈಗ ಮಗಳನ್ನ ಕಳೆದುಕೊಂಡ ದುಃಖ ಯಾರು ಅನುಭವಿಸಬೇಕು ???

    ನೋವು ಹೆತ್ತ ತಾಯಿಗೆ ತಾನೇ ???

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...