Homeಕರ್ನಾಟಕಕೊಡಗು| ತೋಟದಲ್ಲಿ ಹಲಸು ಕಿತ್ತಿದ್ದಕ್ಕೆ ಪರಿಶಿಷ್ಟ ಜಾತಿ ಯುವಕನ ಗುಂಡಿಕ್ಕಿ ಕೊಲೆ

ಕೊಡಗು| ತೋಟದಲ್ಲಿ ಹಲಸು ಕಿತ್ತಿದ್ದಕ್ಕೆ ಪರಿಶಿಷ್ಟ ಜಾತಿ ಯುವಕನ ಗುಂಡಿಕ್ಕಿ ಕೊಲೆ

- Advertisement -
- Advertisement -

ಯರವ ಸಮುದಾಯದ (ಪರಿಶಿಷ್ಟ ಪಂಗಡ) 23 ವರ್ಷದ ಯುವಕನನ್ನು ತೋಟದಲ್ಲಿ ಹಲಸು ಕಿತ್ತಿದ್ದಕ್ಕಾಗಿ ಪ್ರಬಲ ಜಾತಿಗೆ (ಕೊಡವ) ಸೇರಿದ ವ್ಯಕ್ತಿ ಗುಂಡಿಕ್ಕಿ ಕೊಂದಿದ್ದಾನೆ.

ಡಿಸೆಂಬರ್ 27 ರಂದು ಕೊಡಗು ಜಿಲ್ಲೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಪಣಿಯೆರವರ ಪೊನ್ನಣ್ಣ ಅವರು ಪೊರುಕೊಂಡ ಚಿನ್ನಪ್ಪ ಅವರ ಕುಟುಂಬದ ಒಡೆತನದ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದರು. ಚಿನ್ನಪ್ಪ ಅವರು ಪೊನ್ನಣ್ಣನ ಮೇಲೆ ಡಬಲ್ ಬ್ಯಾರಲ್ ಶಾಟ್‌ಗನ್‌ನಿಂದ ಗುಂಡು ಹಾರಿಸುವ ಮೊದಲು ಜಾತಿ ನಿಂದನೆ ಮಾಡಿದ್ದಾರೆ.

ಎಫ್‌ಐಆರ್‌ ಪ್ರಕಾರ, ಪೊನ್ನಣ್ಣ ಮತ್ತು ಅವರ ಪತ್ನಿ ಗೀತಾ ತೋಟದಲ್ಲಿ ಪ್ರತಿ ದಿನದ ಕೆಲಸ ಮಾಡುತ್ತಿದ್ದು. ಕೆಲಸದ ಬಳಿಕ ಹಲಸು ಕೀಳುತ್ತಿದ್ದಾಗ ಚಿನ್ನಪ್ಪ ಡಬಲ್ ಬ್ಯಾರೆಲ್ ಶಾಟ್‌ಗನ್‌ನೊಂದಿಗೆ ಅವರ ಬಳಿಗೆ ಬಂದಿದ್ದಾನೆ; ಹಲಸು ಕಿತ್ತಿದ್ದಕ್ಕೆ ಪೊನ್ನಣ್ಣನಿಗೆ ಕೊಲೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಪೊನ್ನಣ್ಣ ಹಲಸಿನ ಮರದಿಂದ ಬಿದ್ದಿದ್ದು, ಆತನಿಗೆ ಮಾರಣಾಂತಿಕ ಗಾಯಗಳಾಗಿವೆ.

ಪನ್ನಣ್ಣ ಮರದಿಂದ ಬಿದ್ದರೂ ಚಿಣ್ಣಪ್ಪ ಅವರು ಸಹಾಯ ಮಾಡದೆ ಸ್ಥಳದಿಂದ ಹೊರಟಿದ್ದಾನೆ. ತೋಟದ ಮಾಲೀಕ ಪೋರುಕೊಂಡ ಬನ್ಸಿ ಪೂಣಚ್ಚ ಅವರು ಪೊನ್ನಣ್ಣನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ತಲುಪುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸರು ಚಿನ್ನಪ್ಪನನ್ನು ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) (ಕೊಲೆ), ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) (ಎಸ್‌ಸಿ/ಎಸ್‌ಟಿ ವ್ಯಕ್ತಿಯ ವಿರುದ್ಧದ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತು ಸೆಕ್ಷನ್ 3 (ಪರವಾನಗಿ ಇಲ್ಲದೆ ಬಂದೂಕು ಒಯ್ಯುವುದು) ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯಿದೆಯ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳಿಗೆ ಸಂಬಂಧಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ ಲೆನಿನಿಸ್ಟ್) ರಾಜ್ಯ ಸಮಿತಿಯು ಘಟನೆಯನ್ನು ಕ್ರೂರ ದೌರ್ಜನ್ಯ ಮತ್ತು ಪ್ರಜಾಸತ್ತಾತ್ಮಕ ತತ್ವಗಳ ಉಲ್ಲಂಘನೆ ಎಂದು ಖಂಡಿಸಿದೆ. “ಕಾನೂನಿನ ಆಡಳಿತವನ್ನು ಗಾಳಿಗೆ ತೂರಲಾಗಿದೆ. ಆದಿವಾಸಿಗಳಿಗೆ ಸಂವಿಧಾನ ನೀಡಿರುವ ವಿಶೇಷ ಸ್ಥಾನಮಾನವನ್ನು ಅನಗತ್ಯಗೊಳಿಸಲಾಗಿದೆ.

ಇದೇ ವೇಳೆ ಸಿಪಿಐ(ಎಂಎಲ್) ಮುಖಂಡರು ಹಾಗೂ ಆದಿವಾಸಿ ಸಂಘರ್ಷ ಮೋರ್ಚಾದ ಸದಸ್ಯರು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜು, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್, ಜಿಲ್ಲಾ ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಅವರನ್ನು ಭೇಟಿ ಮಾಡಿ ಪೊನ್ನಣ್ಣ ಕುಟುಂಬಕ್ಕೆ ಹಾಗೂ ಯರವ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಬೇಡಿಕೆಗಳ ಪಟ್ಟಿಯನ್ನು ಮಂಡಿಸಿದರು. ಚಿನ್ನಪ್ಪನ ಅಪರಾಧ ಸಾಬೀತುಪಡಿಸಲು ತ್ವರಿತ ತನಿಖೆ ಮತ್ತು ವಿಚಾರಣೆ, ಪೊನ್ನಣ್ಣನ ಕುಟುಂಬಕ್ಕೆ ₹20 ಲಕ್ಷ ಪರಿಹಾರ, ಪೊನ್ನಣ್ಣನ ಪತ್ನಿ ಗೀತಾಗೆ ಸರ್ಕಾರಿ ಉದ್ಯೋಗ, ಕುಟುಂಬಕ್ಕೆ ವಸತಿ ಮತ್ತು ಪೊನ್ನಣ್ಣನ ಕಿರಿಯ ಸಹೋದರನಿಗೆ ಶಿಕ್ಷಣದ ಬೆಂಬಲ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...