Homeಕರ್ನಾಟಕಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಅವರ ಅಂತಿಮ ಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಬುಧವಾರ ಸಂಜೆ ನಡೆಯಿತು. ಅವರ ಸಂಬಧಿಕರು, ಆಪ್ತರು ಮತ್ತು ರಾಜ್ಯ ಸರ್ಕಾರದ ಉನ್ನತ ಪೊಲೀಸ್ ಅಧಿಕಾರಗಳು ಸೇರಿದಂತೆ ಹಲವರು ಅವರ ಅಂತಿಮ ದರ್ಶನವನ್ನು ಪಡೆದು ನಮನ ಸಲ್ಲಿಸಿದರು.

ಇತ್ತೀಚೆಗಷ್ಟೇ ಕೊರೊನಾದಿಂದ ಚೇತರಿಸಿಕೊಂಡಿದ್ದ ಅವರನ್ನು ಉಸಿರಾಟದ ಕಾರಣಕ್ಕೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 1 ಗಂಟೆಗೆ ಆಸ್ಪತ್ರೆಯಲ್ಲೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು.

ಸರ್ಕಾರಿ ಗೌರವಗಳೊಂದಿಗೆ ಅಂತಿನ ನಮನ. ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.

ದೊರೆಸ್ವಾಮಿಯವರು ಈ ಮೊದಲೇ ತಾವು ನಿಧನರಾದ ನಂತರ ತಮ್ಮ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಬೇಕೆಂದು ಬಯಸಿ ಒಪ್ಪಿಗೆ ಪತ್ರವನ್ನು ಸಹ ನೀಡಿದ್ದರು. ಆದರೆ ಅವರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕು ಅವರಿಗೆ ತಗುಲಿದ್ದರಿಂದ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಹಿಂದೂ ರುದ್ರ ಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರವನ್ನು ನಡೆಸಲಾಯಿತು.

ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವು ಮಧ್ಯಾಹ್ನವೆ ಅಧಿಸೂಚನೆಯನ್ನು ಹೊರಡಿಸಿತ್ತು. ಅದರಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...