Homeಕರ್ನಾಟಕಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಮೃತ ದೇಹದ ಅವಶೇಷಗಳನ್ನು ಕೈಚೀಲದಲ್ಲಿ ಹಾಕಿಕೊಟ್ಟ ಅಧಿಕಾರಿಗಳು

- Advertisement -
- Advertisement -

ಆಗಸ್ಟ್ 6 ರಂದು ರಾತ್ರಿ ಬೆಳಗಾವಿ ಜಿಲ್ಲೆಯ ನವಗೆ ಎಂಬಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಯುವಕನ ಶವದ ಅವಶೇಷಗಳನ್ನು ಜಿಲ್ಲಾಡಳಿತ ಕೈಚೀಲದಲ್ಲಿ ಹಾಕಿಕೊಟ್ಟಿರುವ ಅಮಾನವೀಯ ಘಟನೆಗೆ ಈ ಪ್ರಕರಣ ಸಾಕ್ಷಿಯಾಗಿದೆ.

ಮೃತ ಕಾರ್ಮಿಕ 20 ವರ್ಷದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಎಂಬುವವರಾಗಿದ್ದು, ಅವರ ಶವದ ಅವಶೇಷಗಳನ್ನು ಕೈಚೀಲದಲ್ಲಿ ತುಂಬಿಸಿ ತಂದೆಗೆ ಹಸ್ತಾಂತರಿಸಲಾಗಿದೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದ, ಶವ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದ ಜಿಲ್ಲಾಡಳಿತದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಹಿನ್ನೆಲೆ:

ಟೇಪ್ ತಯಾರಿಸುವ ಸ್ನೇಹಾ ಇಂಡಸ್ಟ್ರೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಲವು ಕಾರ್ಮಿಕರು ದೂರಿದ ನಂತರ ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಬೆಳಗಾವಿಯ ಹೊರವಲಯದಲ್ಲಿರುವ ನಾವಜ್ ಇಂಡಸ್ಟ್ರಿಯಲ್ ಏರಿಯಾಕ್ಕೆ ಧಾವಿಸಿದರು. ಎಲಿವೇಟರ್ ಶಾಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಇದು ಕಾರ್ಖಾನೆಯಲ್ಲಿ ಹರಡಿದ್ದು, ಎಲ್ಲಾ ದಹಿಸುವ ವಸ್ತುಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. ಹೆಚ್ಚಿನವರು ಹೊರಗೆ ಧಾವಿಸಿದರು. ಆದರೆ ಕೆಲವರು ಸಿಕ್ಕಿಬಿದ್ದು ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಶಂಕಿತ ಶಾರ್ಟ್ ಸರ್ಕ್ಯೂಟ್‌ನಿಂದ ಲಿಫ್ಟ್ ಶಾಫ್ಟ್‌ನಲ್ಲಿ ಕಿಡಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವು ಲಿಫ್ಟ್‌ನಲ್ಲಿ ಸಿಲುಕಿದ್ದ ಯಲ್ಲಪ್ಪ ಗುಂಡ್ಯಗೋಳ್ ಅವರ ಸುಟ್ಟ ಅವಶೇಷಗಳನ್ನು ಪತ್ತೆ ಮಾಡಿದೆ. ಇತರ ಮೂವರು- ಕಾವಲವಾಡಿಯ ಮಾರುತಿ ನಾರಾಯಣ ಕರವೇಕರ (32), ಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಾಲಗೂಡು, 35 ಮತ್ತು ರಾಜವಾಡಿಯ ರಂಜಿತ್ ದಶರತ್ ಪಾಟೀಲ್, 39 ಗಂಭೀರ ಗಾಯಗೊಂಡಿದ್ದರಿಂದ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕನಿಷ್ಠ 74 ಮಂದಿ ಕೆಲಸ ಮಾಡುತ್ತಿದ್ದರು. ಬೆಂಕಿಯ ಸಮಯದಲ್ಲಿ ಸುಮಾರು 20 ಮಂದಿ ಓಡಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..’; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0
ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ...