Homeಅಂತರಾಷ್ಟ್ರೀಯCAA ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸ್ವರಾಷ್ಟ್ರಕ್ಕೆ ತೆರಳುವ ಶಿಕ್ಷೆ ಪಡೆದ ಜರ್ಮನ್‌ ವಿದ್ಯಾರ್ಥಿ..

CAA ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಸ್ವರಾಷ್ಟ್ರಕ್ಕೆ ತೆರಳುವ ಶಿಕ್ಷೆ ಪಡೆದ ಜರ್ಮನ್‌ ವಿದ್ಯಾರ್ಥಿ..

- Advertisement -
- Advertisement -

ಐಐಟಿ ಮದ್ರಾಸ್‌ನಲ್ಲಿ ಓದುತ್ತಿರುವ ಜರ್ಮನ್ ವಿದ್ಯಾರ್ಥಿಯನ್ನು ಪೌರತ್ವ ಕಾನೂನು ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಜರ್ಮನಿಗೆ ವಾಪಸ್ ಕಳಿಸಲಾಗಿದೆ ಎಂದು ವರದಿಯಾಗಿದೆ.

ಮದ್ರಾಸ್‌ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಭೌತಶಾಸ್ತ್ರದ ಸ್ನಾತಕೋತ್ತರ ವಿದ್ಯಾರ್ಥಿ ಜಾಕೋಬ್ ಲಿಂಡೆಂಥಾಲ್‌ ಸೋಮವಾರ ಆಮ್‌ಸ್ಟಾರ್‌ಡ್ಯಾಮ್‌ಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ಚೆನ್ನೈನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಭಾರತವನ್ನು ತೊರೆಯಲು ಮೌಖಿಕ ಆದೇಶಗಳನ್ನು ಬಂದಿದ್ದವು ಎಂದು ಆತ ಇಂಡಿಯನ್ ಎಕ್ಸ್ ಪ್ರೆಸ್‌ಗೆ ತಿಳಿಸಿದ್ದಾಗಿ ವರದಿಯಾಗಿದೆ.

24 ವರ್ಷದ ಜಾಕೋಬ್ ಜರ್ಮನಿಯ ಡ್ರೆಸ್ಡೆನ್ ಮೂಲದವನಾಗಿದ್ದು ಕಳೆದ ವಾರ ನಡೆದ ಹಲವು ಪ್ರತಿಭಟನೆಗಳಲ್ಲಿ ಅವರು ಭಾಗವಹಿಸಿದ್ದಾರೆ. ಅವರು “ಏಕರೂಪದ ಅಪರಾಧಿಗಳು = ಅಪರಾಧಿಗಳು” ಎಂದು ಬರೆಯುವ ಫಲಕವನ್ನು ಹಿಡಿದಿರುವ ಫೋಟೊ ವೈರಲ್ ಆಗಿತ್ತು. ಜೊತೆಗೆ ಅವರು ಎತ್ತಿ ಹಿಡಿದ ಮತ್ತೊಂದು ಫಲಕದಲ್ಲಿ “1933-1945 ನಾವು ಅಲ್ಲಿದ್ದೇವೆ” ಎಂದು ಬರೆಯಲಾಗಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಅವರ ವೀಸಾ ನಿಯಮಗಳ ಉಲ್ಲಂಘನೆಯಾಗಿದೆ ಅದಕ್ಕಾಗಿ ಅವರು ತಕ್ಷಣ ಭಾರತವನ್ನು ತೊರೆಯಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಐಟಿ ಮದ್ರಾಸ್ ಅಥವಾ ಕೇಂದ್ರ ಸರ್ಕಾರವೇ ಅವರನ್ನು ವಾಪಸ್‌ ಕಳುಹಿಸಲು ನಿರ್ಧರಿಸಿದೆಯೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಐಐಟಿ ಮದ್ರಾಸ್ ವಿದ್ಯಾರ್ಥಿಗಳು ಅಂತಹ ನಿರ್ಧಾರವನ್ನು ತೆಗೆದುಕೊಂಡಿದ್ದು “ಅವಮಾನ” ಎಂದು ಕರೆದಿದ್ದಾರೆ. ಪೌರತ್ವ ವಿರೋಧಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳಲ್ಲದೆ, ರಾಜಕೀಯ ಮುಖಂಡರು ಕೂಡ ತಮ್ಮ ಖಂಡನೆಯನ್ನು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಶಿಕ್ಷಣ ಸಚಿವ ಆರ್.ಪಿ. ನಿಶಾಂಕ್ ಅವರನ್ನು ಟ್ಯಾಗ್ ಮಾಡುವ ಮೂಲಕ ಟ್ವೀಟ್ ನಲ್ಲಿ ಹೇಳಿದ್ದಾರೆ: ಇದು ನಿರಾಶಾದಾಯಕವಾಗಿದೆ. ನಾವು ಹೆಮ್ಮೆಯ ಪ್ರಜಾಪ್ರಭುತ್ವವಾಗಿದ್ದೇವೆ. ಆ ಮೂಲಕ ಜಗತ್ತಿಗೆ ಒಂದು ಉದಾಹರಣೆಯಾಗಿದ್ದೆವು. ಯಾವುದೇ ಪ್ರಜಾಪ್ರಭುತ್ವವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಶಿಕ್ಷಿಸುವುದಿಲ್ಲ. ಉಚ್ಛಾಟನೆಯನ್ನು ಹಿಂತೆಗೆದುಕೊಳ್ಳಲು ಮತ್ತು ಶೈಕ್ಷಣಿಕ ಜಗತ್ತಿನಲ್ಲಿ ಭಾರತವು ತಲೆ ಎತ್ತುವಂತೆ ಮಾಡುವುದಕ್ಕಾಗಿ ಐಐಟಿ ಮದ್ರಾಸ್‌ಗೆ ಸೂಚನೆ ನೀಡಲು ನಾನು ಆರ್.ಪಿ. ನಿಶಾಂಕ್‌ಗೆ ಕರೆ ನೀಡುತ್ತೇನೆ.” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಭಾರತದ ಮರ್ಯಾದೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...