Homeಮುಖಪುಟಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ...

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

- Advertisement -
- Advertisement -

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ ವಡೋದರಾ ಮಹಾನಗರ ಪಾಲಿಕಯಿಂದ ಅಗತ್ಯ ಆದೇಶಗಳನ್ನು ಹೊರಡಿಸಲಾಗಿದ್ದು, ಪಠಾಣ್‌ ತಮ್ಮ ಮನೆಯ ಪಕ್ಕದಲ್ಲಿರುವ ಸರ್ಕಾರಿ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಸುಗಮಗೊಳಿಸುವ ಅಂತಿಮ ಅನುಮೋದನೆಯು ಸದ್ಯ ಬಾಕಿ ಉಳಿದಿದೆ ಎಂದು ವರದಿಯಾಗಿದೆ.

ವಿಶೇಷವೆಂದರೆ, ಪಠಾಣ್ ಮತ್ತು ಇತರ 19 ಸಂಸದರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಿಂದ ಹೊರಬಂದು, ನೋಂದಾಯಿತ ಆದರೆ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (ಎನ್‌ಸಿಪಿಐ) ಜೊತೆ ವಿಲೀನಗೊಳ್ಳುವ ಮೂಲಕ ಮಮತಾ ಬ್ಯಾನರ್ಜಿ ವಿರುದ್ಧ ಬಂಡಾಯವೆದ್ದ ಕೆಲವು ತಿಂಗಳುಗಳ ನಂತರ ಈ ಬೆಳವಣಿಗೆ ನಡೆದಿದೆ.

ಪಠಾಣ್ ಅವರ ವಡೋದರಾದ ಮನೆಯ ಸಮೀಪವಿರುವ ಸರ್ಕಾರಿ ನಿವೇಶನವನ್ನು ಅವರಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯು 14 ವರ್ಷಗಳ ಕಾಲ ಸ್ಥಗಿತಗೊಂಡಿತ್ತು. ಈ 978 ಚದರ ಮೀಟರ್ ವಿಸ್ತೀರ್ಣದ ನಿವೇಶನದ ಅಂತಿಮ ಮೌಲ್ಯವನ್ನು 20.53 ಕೋಟಿ ರೂಪಾಯಿ (ಪ್ರತಿ ಚದರ ಮೀಟರ್‌ಗೆ 2.10 ಲಕ್ಷ ರೂಪಾಯಿ) ಎಂದು ಅಂದಾಜಿಸಲಾಗಿದೆ.

ಹರಾಜಿಗಾಗಿ ಕನಿಷ್ಠ ಮೂಲ ಬೆಲೆಯನ್ನು ನಿರ್ಧರಿಸಿದ ನಂತರ, ಪಠಾಣ್ ಅವರಿಗೆ ಈ ನಿವೇಶನವನ್ನು ಹಂಚಿಕೆ ಮಾಡುವ ಪ್ರಸ್ತಾವನೆಯನ್ನು ಸ್ಥಳೀಯ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಮುಂದೆ ಮಂಡಿಸಲಾಗುವುದು ಎಂದು ವರದಿಗಳು ಹೇಳಿವೆ.

ವಡೋದರಾ ಮಹಾನಗರ ಪಾಲಿಕೆಯ ಕಮಿಷನರ್ ಅರುಣ್ ಬಾಬು ಅವರು ಈ ಕುರಿತು ಮಾತನಾಡಿ, ಇದಕ್ಕೆ ರಾಜ್ಯ ಸರ್ಕಾರದ ಅನುಮೋದನೆ ದೊರೆತಿದ್ದು, ಈಗ ಈ ಪ್ರಸ್ತಾವನೆಯನ್ನು ಸಮಿತಿಯ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಸಮಿತಿಯ ಅನುಮೋದನೆ ದೊರೆತ ನಂತರ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಆದಾಗ್ಯೂ, ಈ ನಿವೇಶನಕ್ಕಾಗಿ ಪಠಾಣ್ ಪಾವತಿಸಬೇಕಾದ ನಿಖರವಾದ ಮೊತ್ತವನ್ನು ಇನ್ನು ಅಂತಿಮಗೊಳಿಸಲಾಗಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಪರಿಶೀಲಿಸಿದ ನಂತರ ಸ್ಥಳೀಯ ಮಹಾನಗ ಪಾಲಿಕೆಯು ಈ ಮೊತ್ತವನ್ನು ನಿರ್ಧರಿಸಲಿದೆ.

2012ರಲ್ಲಿ, ಪಠಾಣ್ ಅವರು ವಡೋದರಾದ ತಾಂಡಲ್ಜಾ ಪ್ರದೇಶದಲ್ಲಿರುವ ತಮ್ಮ ಬಂಗಲೆಗೆ ಹೊಂದಿಕೊಂಡಿರುವ 978 ಚದರ ಮೀಟರ್ ವಿಸ್ತೀರ್ಣದ ನಿವೇಶನವನ್ನು ತಮಗೆ ಹಂಚಿಕೆ ಮಾಡುವಂತೆ ಕೋರಿ ವಡೋದರಾ ಮಹಾನಗರ ಪಾಲಿಕೆಗೆ ಪತ್ರ ಬರೆದಿದ್ದರು.

ಆ ವರ್ಷದ ಮಾರ್ಚ್ 30 ಮತ್ತು ಜೂನ್ 8 ರಂದು ನಡೆದ ಸಭೆಗಳಲ್ಲಿ ಈ ನಿವೇಶನ ಹಂಚಿಕೆಯ ಪ್ರಸ್ತಾವನೆಗಳ ಕುರಿತು ಚರ್ಚಿಸಲಾಗಿತ್ತು. ನಂತರ ಮಹಾನಗರ ಪಾಲಿಕೆಯು ಸಾರ್ವಜನಿಕ ಹರಾಜು ಇಲ್ಲದೆಯೇ ಈ ಜಮೀನನ್ನು ಪಠಾಣ್ ಅವರಿಗೆ 99 ವರ್ಷಗಳ ಅವಧಿಗೆ ಗುತ್ತಿಗೆಗೆ (ಲೀಸ್) ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು.

ಆದಾಗ್ಯೂ, 2014ರಲ್ಲಿ ಸಾರ್ವಜನಿಕ ಹರಾಜು ಇಲ್ಲದೆಯೇ ಈ ನಿವೇಶನವನ್ನು ಹಂಚಿಕೆ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿತ್ತು.

2024ರಲ್ಲಿ, ನಿವೇಶನ ಹಂಚಿಕೆಯ ಪ್ರಸ್ತಾವನೆಯ ತಿರಸ್ಕಾರವನ್ನು ಉಲ್ಲೇಖಿಸಿ, ಮಹಾನಗರ ಪಾಲಿಕೆಯು ಆ ಜಮೀನಿನಲ್ಲಿ ಮಾಡಲಾಗಿರುವ ಅತಿಕ್ರಮಣವನ್ನು ತೆರವುಗೊಳಿಸಲು ತಕ್ಷಣದ ಕ್ರಮಕ್ಕೆ ಆದೇಶಿಸಿತ್ತು. ಪಠಾಣ್ ಅವರು ಈ ನಿರ್ಧಾರವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಆಗಸ್ಟ್ 21, 2025ರಂದು ನ್ಯಾಯಾಲಯವು ಅವರ ಅರ್ಜಿಯನ್ನು ವಜಾಗೊಳಿಸಿತ್ತು. ತರುವಾಯ, ಪಠಾಣ್ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಜೂನ್ 8, 2026ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್, ಈ ಸರ್ಕಾರಿ ಜಮೀನನ್ನು ಕಾನೂನುಬದ್ಧವಾಗಿ ಹಂಚಿಕೆ ಮಾಡದಿದ್ದಾಗ ಮತ್ತು ಅದಕ್ಕೆ ಅಗತ್ಯವಾದ ಪಾವತಿಯನ್ನು ಮಾಡದಿದ್ದಾಗ ಅದನ್ನು ಹೇಗೆ ಆಕ್ರಮಿಸಿಕೊಳ್ಳಲಾಗಿದೆ ಎಂದು ಪ್ರಶ್ನಿಸಿತ್ತು.

ವಿಷಯಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳ ಪಾತ್ರದ ಕುರಿತಾಗಿಯೂ ನ್ಯಾಯಾಲಯವು ಪ್ರಶ್ನೆಗಳನ್ನು ಎತ್ತಿತ್ತು.

ಅಂತಾರಾಷ್ಟ್ರೀಯ ಕ್ರಿಕೆಟಿಗರಿಗೆ ಜಮೀನು ಹಂಚಿಕೆ ಮಾಡುವ ವಿಷಯದಲ್ಲಿ ರಾಜ್ಯ ಸರ್ಕಾರ ಹೊಂದಿರುವ ನೀತಿಯನ್ನು ಉಲ್ಲೇಖಿಸಿದ ಪಠಾಣ್ ಪರ ವಕೀಲರು, ಹೆಚ್ಚಿನ ವಾದಗಳನ್ನು ಮಂಡಿಸಲು ಸಮಯಾವಕಾಶ ಕೋರಿದ್ದರು.

ಈ ವರ್ಷದ ಆಗಸ್ಟ್ 31ರಂದು ಪಠಾಣ್ ಅವರು ಹೈಕೋರ್ಟ್‌ನಲ್ಲಿದ್ದ ತಮ್ಮ ಮೇಲ್ಮನವಿಯನ್ನು ಹಿಂಪಡೆದಿದ್ದರು.

































 

 




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...

‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ!

ಕಾಕ್‌ರೋಚ್ ಜನತಾ ಪಾರ್ಟಿಯ ಯುವ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸುತ್ತಿರುವ ಕಸ್ಟಡಿ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಪ್ರಜಾಪ್ರಭುತ್ವವಾದಿ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ...

ಯೇಸುವಿನ ದರ್ಶನದ ಹೆಸರಲ್ಲಿ 191 ಜನರ ಮಾರಣಹೋಮ : ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಸೇರಿ 29 ಮಂದಿ ತಪ್ಪಿತಸ್ಥರು ಎಂದ ನ್ಯಾಯಾಲಯ  

ಬರೋಬ್ಬರಿ 191 ಜನರ ಸಾವಿಗೆ ಕಾರಣನಾದ ಕೀನ್ಯಾದ ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಮತ್ತು ಆತನ ಸಹಚರರನ್ನು ಸೋಮವಾರ (ಅಕ್ಟೋಬರ್ 19) ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನವೆಂಬರ್ 6ರಂದು ಶಿಕ್ಷೆ ಪ್ರಮಾಣ...

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...