Homeಕರ್ನಾಟಕನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

ನಾಳೆ ಬೈಕ್ ಜಾಥಾಕ್ಕೆ ತೆರೆ, ಅದ್ದೂರಿ ಸ್ವಾಗತ: ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗೋಣ ಬನ್ನಿ; ತಾರಾ ರಾವ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯುತ್ತಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಮಹತ್ವವನ್ನು ತಿಳಿಸುವುದಕ್ಕಾಗಿ ಏ.14ರಿಂದ ಪ್ರಾರಂಭವಾಗಿರುವ ದೇಶಪ್ರೇಮಿ ಯುವಾಂದೋಲನ ಬೈಕ್ ಜಾಥಾದ ಕೊನೆ ದಿನವಾದ ನಾಳೆ (ಏ.25) ದಾವಣಗೆರೆ ಪ್ರವೇಶಿಸಲಿದ್ದು, ಅಲ್ಲಿನ ಯುವಕ-ಯುವತಿಯರು ಅದ್ದೂರಿ ಸ್ವಾಗತ ಕೊರಲಿದ್ದಾರೆ ಎಂದು ಎದ್ದೇಳು ಕರ್ನಾಟಕದ  ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರಾದ ತಾರ ರಾವ್ ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ಏ.14ರಿಂದ ಈ ಜಾಥಾದಲ್ಲಿ ಭಾಗವಹಿಸಿದ ಯುವಕ-ಯುವತಿಯರ ಜೊತೆ ದಾವಣಗೆರೆಯ ಹಲವಾರು ಯುವಕ ಯುವತಿಯರು ಜೊತೆಗೂಡಿ ನಗರದಾದ್ಯಂತ ನಾಳೆ (ಏ.25) ಬೃಹತ್ ಬೈಕ್ ರ್ಯಾಲಿ ನಡೆಸಲಿದ್ದು 26ರಂದು ನಡೆಯುವ ಸಂವಿಧಾನ ಸಂರಕ್ಷಕರ ಸಮಾವೇಶದ ಕುರಿತು ಪ್ರಚಾರ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗದಿಂದ ಸುಮಾರು 10,000ಕ್ಕೂ ಹೆಚ್ಚು ಸಂವಿಧಾನ ಸಂರಕ್ಷಕ ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಸಮಾವೇಶದ ಕುರಿತು ಜನರಿಗೆ ಮಾಹಿತಿ ಮತ್ತು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಇದೇ ಏ.14ರಿಂದ  ಬೈಕ್ ಯಾನವು  ಅಂಬೇಡ್ಕರ್ ಭೇಟಿ ನೀಡಿದ ಸ್ಥಳವಾದ ಗುಲ್ಬರ್ಗ ಜಿಲ್ಲೆಯ ವಾಡಿಯಿಂದ ಪ್ರಾರಂಭವಾಗಿದ್ದು ಅದೀಗ ಅದು ರಾಜ್ಯದ ಸುಮಾರು 20 ಜಿಲ್ಲೆಗಳ ಮೂಲಕ ಹಾದು, ಸರಿ ಸುಮಾರು 2000 ಕಿ.ಮೀ. ಕ್ರಮಿಸಿ ನಾಳೆ ದಾವಣಗೆರೆಗೆ ಆಗಮಿಸಲಿದೆ ಎಂದಿದ್ದಾರೆ.

ಜಾಥಾದಲ್ಲಿ ಹೇಮಂತ ಹಾಸನ, ಗೀತಾ ಗುಲ್ಬರ್ಗ, ಕೌಶಲ್ಯ ಮಂಡ್ಯ, ಸರೋವರ ಬೆಂಗಳೂರು, ಮರಿಸ್ವಾಮಿ ಕಟ್ಟಿಮನಿ ಬೆಂಗಳೂರು, ರವಿ ನವಲಹಳ್ಳಿ ರಾಯಚೂರು ಜಿಲ್ಲೆ, ಉಮೇಶ್ ಬಡಗಿ ಕೊಪ್ಪಳ, ಶರಣು ಈಳಿಗನೂರು (ಕೊಪ್ಪಳ), ಯಮುನಾ ಚಳ್ಳೂರು(ಕೊಪ್ಪಳ), ಯಮನೂರ ಈಳಿಗನೂರು(ಕೊಪ್ಪಳ), ದುರ್ಗೆಶ್ ಕೆ. ಬರಗೂರು(ಕೊಪ್ಪಳ), ರಾಜೇಂದ್ರ ರಾಜವಾಳ (ಗುಲ್ಬರ್ಗಾ), ಶಾಂತಾ ಗುಲ್ಬರ್ಗಾ, ಕೇಶವ್ ಕೋಲಾರ ಭಾಗವಹಿಸಿದ್ದು, ಇವರೆಲ್ಲರಿಗೂ ಎದ್ದೇಳು ಕರ್ನಾಟಕವು ಹೃದಯತುಂಬಿ ವಂದಿಸುತ್ತದೆ ಮತ್ತು ನಾಳಿನ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ನಾವು ಹಲವರು ಭಾಗಿಯಾಗಿ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗುತ್ತೇವೆ ಎಂದು ಅವರು ತಿಳಿಸಿದರು.

ಜಾಥಾವು ದಾರಿಯುದ್ದಕ್ಕೂ ಕಾರ್ಯಕ್ರಮದ ಬಗ್ಗೆ ಮಾತ್ರ ಜನರಲ್ಲಿ ಜಾಗೃತಿ ಮೂಡಿಸಲಿಲ್ಲ, ಬದಲಾಗಿ ಇಂದಿನ ಯುವಕರು–ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿತು ಮತ್ತು ಅದರ ಪರಿಹಾರಕ್ಕೆ ಹೋರಾಟವೊಂದೇ ದಾರಿ ಎಂದು ಜನರಿಗೆ ತಿಳಿಸಿತು. ಇಂದಿನ ಶಿಕ್ಷಣವು ಅನುಕೂಲಸ್ಥರಿಗೆ ಸಿಗುವ ಐಶಾರಿಮಿ ವಸ್ತುವಲ್ಲ, ಬದಲಿಗೆ ದೇಶದ ಎಲ್ಲರಿಗೂ ಸಿಗಬೇಕಾದ ಮೂಲಭೂತ ಹಕ್ಕು. ಆದರೆ ಈಗ ಶಿಕ್ಷಣದ ಕನಸು ಕಮರುತ್ತಿದೆ. ಸರಕಾರಿ ಶಾಲಾ ಕಾಲೇಜುಗಳು ಮುಚ್ಚುತ್ತಿವೆ. ಫೀಸು ಡೊನೇಷನ್ ಎಂಬ ಭೂತವು ಅಡ್ಡಾದಿಡ್ಡಿಯಾಗಿ ಕುಣಿಯುತ್ತಿದೆ. ಅದರ ಕಾಲ ಕೆಳಗೆ ಸಿಕ್ಕು ದಮನಿತರು ಬಡವರು ನರಳುತ್ತಿದ್ದಾರೆ ಎಂಬುದನ್ನು ಜಾಥಾವು ಜನರಿಗೆ ತಿಳಿಸಿತು ಎಂದು ತಾರಾ ರಾವ್ ಹೇಳಿದರು.

ಹಾಗೆಯೇ  ಶಿಕ್ಷಣದ ವ್ಯಾಪಾರದ ಚಕ್ರವ್ಯೂಹವನ್ನು ಬೇಧಿಸಿ, ವಿದ್ಯಾರ್ಥಿಗಳು ಉದ್ಯೋಗ ಸಿಗುತ್ತದೆಂಬ ಬಹುನಿರೀಕ್ಷೆಯಿಂದ ತಮ್ಮ ಪದವಿಯನ್ನು ಮುಗಿಸುತ್ತಿದ್ದಾರೆ. ಆದರೆ ಭಾರತದಲ್ಲಿ 45 ವರ್ಷದಲ್ಲೇ ಐತಿಹಾಸಿಕ ನಿರುದ್ಯೋಗ ಏರಿಕೆ ಕಂಡಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ 60 ಸಾವಿರ ಉದ್ಯೋಗ ನೇಮಕಾತಿಯ ಕರೆಗೆ 48 ಲಕ್ಷಕ್ಕೂ  ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಪಂಚದ ಅತ್ಯಂತ ಹೆಚ್ಚು ಯುವಜನರನ್ನು ಹೊಂದಿರುವ ಭಾರತದ ಯುವಜನರ ಕೌಶಲ್ಯ, ಶ್ರಮ ಮತ್ತು ಪ್ರತಿಭೆಗಳು ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಸಮಾಜದಲ್ಲಿ ದ್ವೇಷಕ್ಕೆ ಬದಲಾಗಿ ಪ್ರೀತಿ ಹಂಚೋಣ ಎಂದು ಕರೆ ನೀಡಿತು. ನಾವು ಬರೀ ಮಾತನಾಡುತ್ತಿಲ್ಲ. ಉಚಿತ ಗುಣಮಟ್ಟದ ಶಿಕ್ಷಣಕ್ಕಾಗಿ, ಸುಭದ್ರ ಉದ್ಯೋಗ, ಸುಸ್ಥಿರ ಪರಿಸರಕ್ಕಾಗಿ ಪ್ರೀತಿ ಮತ್ತು ನೆಮ್ಮದಿ ತುಂಬಿದ ನಾಡಿಗಾಗಿ ರಚನಾತ್ಮಕ ಕೆಲಸವನ್ನು ಮಾಡುತ್ತಿದ್ದೇವೆ. ಇದು ಒಂದು ದಿನದ ಹೋರಾಟವಲ್ಲ, ಯುವಜನರ ಭವಿಷ್ಯಕ್ಕಾಗಿನ ಬದ್ಧತೆ ಇದಾಗಿದೆ. ನೀವು ನಮ್ಮೊಡನೆ ಸೇರಿದಾಗ ನಮ್ಮ ದನಿ ದೊಡ್ಡದಾಗುತ್ತದೆ. ನಾವು ಒಟ್ಟಿಗೆ ಕೂಗಿದಾಗ ದೇಶದ ಉದ್ದಗಲಕ್ಕೂ ದನಿ ಪ್ರತಿಧ್ವನಿಯಾಗುತ್ತದೆ ಎಂದು ಜನತೆಗೆ ಜಾಥಾವು ಕರೆ ಕೊಟ್ಟಿತು ಎಂದು ಅವರು ಹೇಳಿದರು.

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...