Homeಕರ್ನಾಟಕಡಿಕೆಶಿಗೆ ಅದ್ಧೂರಿ ಸ್ವಾಗತ: ಅವರೇನು ಯುದ್ಧ ಗೆದ್ದು ಬಂದಿದ್ದಾರಾ ಎಂದ ಆರ್.ಅಶೋಕ್...

ಡಿಕೆಶಿಗೆ ಅದ್ಧೂರಿ ಸ್ವಾಗತ: ಅವರೇನು ಯುದ್ಧ ಗೆದ್ದು ಬಂದಿದ್ದಾರಾ ಎಂದ ಆರ್.ಅಶೋಕ್…

- Advertisement -
- Advertisement -

50 ದಿನಗಳ ತಿಹಾರ್ ಜೈಲುವಾಸ ಮುಗಿಸಿ, ಇಂದು ಬೆಂಗಳೂರಿಗೆ ಬಂದಿಳಿದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಡಿಕೆಶಿ ಅವರನ್ನು ಕರೆತರಲಾಯಿತು. ಬಹುದೊಡ್ಡ ಪ್ರಮಾಣದಲ್ಲಿ ನೆರೆದಿದ್ದ ಜನ ಡಿಕೆಶಿ ಅವರನ್ನು ಬರಮಾಡಿಕೊಂಡರು. 7 ಕಿ.ಮೀ ದೂರದವರೆಗೆ ನಡೆದ ಮೆರವಣಿಗೆಯಲ್ಲಿ ಡಿಕೆಶಿ ಮೇಲೆ ಹೂವಿನ ಹಾರ ಮತ್ತು ಹೂಗಳ ಸುರಿಮಳೆಗೈದರು. ತೆರೆದ ವಾಹನದಲ್ಲಿ ಬಂದ ಡಿಕೆಶಿ ಜನರತ್ತ ಕೈ ಬೀಸಿದರು.

ಸಾದಹಳ್ಳಿ ಗೇಟ್‍ ನಲ್ಲಿ ಮಾತನಾಡಿದ ಡಿಕೆಶಿ, ಇದು ಅಂತ್ಯವಲ್ಲ, ಆರಂಭ ಎಂದು ಹೇಳುವ ಮೂಲಕ ಜೈಲು ಶಿಕ್ಷೆ ನಂತರವೂ ತಮ್ಮ ಖದರ್ ಮತ್ತು ವರ್ಚಸ್ಸು ಕಡಿಮೆಯಾಗಿಲ್ಲ ಎನ್ನುವುದನ್ನು ತೋರಿಸಿದರು. ನಾನು ಅಳುವ ಮಗ ಅಲ್ಲ, ಆಳುವ ಮಗ. ನಾಉ ಅತ್ತಿದ್ದರೆ ಅದು ನೋವಿನಿಂದ ಅಲ್ಲ, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಸೋತು ಕಣ್ಣೀರು ಹಾಕಿದ್ದೇನೆ ಎಂದರು.  ನಂತರ ನೇರವಾಗಿ ಕೆಪಿಸಿಸಿ ಕಚೇರಿಯತ್ತ ಹೆಜ್ಜೆ ಹಾಕಿದರು.

ಕನ್ನಡ ಸಂಘಟನೆಗಳ ಪ್ರಮುಖರು, ಕಾಂಗ್ರೆಸ್ ನ ಕೃಷ್ಣಬೈರೇಗೌಡ, ಮುನಿಯಪ್ಪ, ಡಿ.ಕೆ.ಸುರೇಶ್ ಸೇರಿದಂತೆ ಹಲವು ಮುಖಂಡರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇತ್ತ ಡಿಕೆಶಿ ಅವರನ್ನು ಮೆರವಣಿಗೆ ಮೂಲಕ ಕರೆತಂದಿರುವುದನ್ನು ಬಿಜೆಪಿ ಖಂಡಿಸಿದೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬಿಜೆಪಿ ಸಚಿವ ಆರ್‍.ಅಶೋಕ್ ಮಾತನಾಡಿ, ಡಿಕೆಶಿ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದು ಸರಿಯಲ್ಲ. ಅವರೇನು ಯುದ್ಧ ಗೆದ್ದು ಬಂದಿದ್ದಾರಾ ಎಂದು ಪ್ರಶ್ನಿಸಿದರು. ಡಿಕೆಶಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಹೀಗಿರುವಾಗ  ಅವರಿಗೆ ಅದ್ಧೂರಿ ಸ್ವಾಗತ ಮತ್ತು ಮೆರವಣಿಗೆಯಲ್ಲಿ ಕರೆತಂದಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...