Homeಮುಖಪುಟಕೊರೊನಾ ಚಿಕಿತ್ಸೆಗೆ ದರ ನಿಗದಿ: ಇನ್ಮುಂದೆ ಖಾಸಗಿ ಆಸ್ಪತ್ರೆಗಳು ಹೆಚ್ಚು ವಸೂಲಿ ಮಾಡುವಂತಿಲ್ಲ

ಕೊರೊನಾ ಚಿಕಿತ್ಸೆಗೆ ದರ ನಿಗದಿ: ಇನ್ಮುಂದೆ ಖಾಸಗಿ ಆಸ್ಪತ್ರೆಗಳು ಹೆಚ್ಚು ವಸೂಲಿ ಮಾಡುವಂತಿಲ್ಲ

- Advertisement -
- Advertisement -

ಕೇಂದ್ರ ಗೃಹ ಸಚಿವಾಲಯ ರಚಿಸಿದ ಉನ್ನತ ಮಟ್ಟದ ಸಮಿತಿಯು ದೆಹಲಿಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ಚಿಕಿತ್ಸೆಗೆ ಈಗಿರುವ ದರಗಳಲ್ಲಿ ಮೂರನೇ ಎರಡಷ್ಟು ಕಡಿಮೆ ಮಾಡಲು ಶಿಫಾರಸು ಮಾಡಿದೆ.

ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪಾಲ್ ನೇತೃತ್ವದ ಸಮಿತಿಯು ಖಾಸಗಿ ಆಸ್ಪತ್ರೆಗಳಲ್ಲಿ ಈಗಿರುವ ದರಗಳಲ್ಲಿ ಶೇ.30ರಷ್ಟು ಕಡಿತಗೊಳಿಸಿದೆ. ವೆಂಟಿಲೇಟರ್ ಮತ್ತು ಪತ್ಯೇಕ ಹಾಸಿಗೆಗಳು ಮತ್ತು ಐಸಿಯು ಹಾಸಿಗಳ ದರವನ್ನು ನಿಗದಿಪಡಿಸಿದೆ.

ಈಗ ಪ್ರತ್ಯೇಕ ಹಾಸಿಗೆಗಳಿಗೆ 24-25 ಸಾವಿರ ರೂ ಇದೆ. ಅದನ್ನು 8-10 ಸಾವಿರ ರೂಪಾಯಿಗೆ ಇಳಿಸಲಾಗಿದೆ. ವೆಂಟಿಲೇಟರ್ ಇಲ್ಲದ ಐಸಿಯು ಹಾಸಿಗೆಗಳಿಗೆ 34-35 ಸಾವಿರ ಇದ್ದು ಈ ದರವನ್ನು 13-15 ಸಾವಿರಗಳಿಗೆ ಇಳಿಕೆ ಮಾಡಲಾಗಿದೆ.

ವೆಂಟಿಲೇಟರ್ ಜೊತೆ ಐಸಿಯು ಹಾಸಿಗೆಗಳು ಸೇರಿ ಒಂದು ದಿನಕ್ಕೆ 44-45 ಸಾವಿರ ರೂ ನಿಗದಿಪಡಿಸಲಾಗಿತ್ತು. ಈಗ 15-18 ಸಾವಿರಕ್ಕೆ ಶಿಫಾರಸು ಮಾಡಲಾಗಿದೆ. ಈ ದರಗಳು ಪಿಪಿಇ ವೆಚ್ಚವನ್ನು ಒಳಗೊಂಡಿರುತ್ತವೆ ಎಂದು ಸಮಿತಿ ಹೇಳಿದೆ.

ಈ ಮೊದಲು ಆಸ್ಪತ್ರೆಗಳು ಪಿಪಿಇ ಕಿಟ್ ಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿದ್ದವು. ಮುಂದಿನ ಕ್ರಮಕ್ಕಾಗಿ ವರದಿಯನ್ನು ದೆಹಲಿ ಸರ್ಕಾರಕ್ಕೆ ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರಸ್ ವರದಿ ಮಾಡಿದೆ.

ಆದೇಶ ಹೊರಡಿಸುವ ಮೊದಲು ದೆಹಲಿ ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯವಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ದೆಹಲಿ ಆರೋಗ್ಯ ಸಚಿವರಿಗೆ ಪ್ಲಾಸ್ಮಾ ಚಿಕಿತ್ಸೆ 

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ? 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...