Homeಮುಖಪುಟಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಗಾಝಿಯಾಬಾದ್: ಪುತ್ರಿಯರ ಮುಂದೆಯೇ ಗುಂಡೇಟಿಗೊಳಗಾಗಿದ್ದ ಪತ್ರಕರ್ತ ನಿಧನ

ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ.

- Advertisement -
- Advertisement -

ಜೂನ್ 20 ರಂದು ಗಾಝಿಯಾಬಾದ್‌ನ ತಮ್ಮ ನಿವಾಸದ ಬಳಿ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆಯ ಸಾಕ್ಷ್ಯ ಸಂಗ್ರಹಿಸಿ ಈ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಹಾಗೂ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಜೋಶಿಯನ್ನು ಮೇಲ್ವಿಚಾರಣೆ ಮಾಡುವ ವೈದ್ಯರು, ಬುಲೆಟ್ ಗಾಯದಿಂದಾಗಿ ತಲೆಯಲ್ಲಿರುವ ರಕ್ತನಾಳಗಳು ತೀವ್ರವಾಗಿ ಹಾನಿಗೊಳಗಾಗಿದ್ದವು ಎಂದು ಹೇಳಿದ್ದಾರೆ. ಗಾಯಗೊಂಡ ನಂತರ ಗಾಜಿಯಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಜೋಶಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿತ್ತು.

ಉತ್ತರ ಪ್ರದೇಶದ ಗಾಝಿಯಾಬಾದ್‌ನ ವಿಜಯ್ ನಗರ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಜೋಶಿ ತನ್ನ ಹೆಣ್ಣುಮಕ್ಕಳೊಂದಿಗೆ ಬೈಕನ್ನು ಓಡಿಸುತ್ತಿರುವುದನ್ನು ಕಾಣಬಹುದು.

ಜುಲೈ 16 ರಂದು ಜೋಶಿ ತನ್ನ ಸೋದರ ಸೊಸೆಗೆ ಕಿರುಕುಳ ನೀಡುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ದೂರಿನಲ್ಲಿ ಜೋಶಿ ಅವರ ಕುಟುಂಬ ಛೋಟು, ರವಿ ಮತ್ತು ಆಕಾಶ್ ಬಿಹಾರಿ ಎಂಬ ಮೂರು ಜನರನ್ನು ಹೆಸರಿಸಿದೆ. ಮೂವರು ಆರೋಪಿಗಳು ಪತ್ರಕರ್ತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಪಾದಿತ ಎಫ್‌ಐಆರ್ ತಿಳಿಸಿದೆ.

ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಈ ಮೂವರನ್ನು ಹೆಸರಿಸಲಾಗಿದೆ.

ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ಬುಧವಾರ ಬೆಳಿಗ್ಗೆ ಈ ಘಟನೆಯನ್ನು ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ. “ಗಾಜಿಯಾಬಾದ್ ಪ್ರದೇಶದಲ್ಲಿ ಆಘಾತಕಾರಿ ಜಂಗಲ್ ರಾಜ್. ಪತ್ರಕರ್ತ ಜೋಶಿ ದೂರು ನೀಡಿರುವ ವ್ಯಕ್ತಿಯ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಾಗಿತ್ತು. ತನ್ನ ಹೆಣ್ಣುಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಹೋಗುವಾಗ ಗುಂಡಿಗೆ ಬಲಿಯಾಗಿದ್ದಾರೆ. ಹೆಣ್ಣುಮಕ್ಕಳಿಗೆ ಗುಂಡು ಬೀಳದ್ದಿಲ್ಲ” ಎಂದು ಅವರು ತನ್ನ ಟ್ವೀಟ್‌‌ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದವನದನು ಟೀಕಿಸಿದ್ದಾರೆ. ಈ ಘಟನೆಯು “ಜಂಗಲ್ ರಾಜ್” ನಲ್ಲಿ ಸಾಮಾನ್ಯ ಜನರಿಗೆ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ ಎಂದಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...