Homeಮುಖಪುಟಪ್ರಚೋದನಕಾರಿ ಉಡುಗೆ ಹಾಕಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಸಿಂಧುವಲ್ಲ ಎಂದಿದ್ದ ಕೇರಳದ ನ್ಯಾಯಾಧೀಶ ವರ್ಗಾವಣೆ

ಪ್ರಚೋದನಕಾರಿ ಉಡುಗೆ ಹಾಕಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಸಿಂಧುವಲ್ಲ ಎಂದಿದ್ದ ಕೇರಳದ ನ್ಯಾಯಾಧೀಶ ವರ್ಗಾವಣೆ

ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ತಿಳಿದೂ ಅವಳ ದೇಹವನ್ನು ಆರೋಪಿ ಸ್ಪರ್ಶಿಸುತ್ತಾನೆ ಎಂಬುದು ನಂಬಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು

- Advertisement -
- Advertisement -

ಮಹಿಳೆ ‘ಲೈಂಗಿಕ ಪ್ರಚೋದನಕಾರಿ’ ಉಡುಪುಗಳನ್ನು ಧರಿಸಿದಾಗ ಲೈಂಗಿಕ ಕಿರುಕುಳದ ಅಪರಾಧ ನಿಲ್ಲುವುದಿಲ್ಲ ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಕೃಷ್ಣ ಕುಮಾರ್ ಅವರನ್ನು ಕೊಲ್ಲಂ ಕಾರ್ಮಿಕ ನ್ಯಾಯಾಲಯದ ಅಧ್ಯಕ್ಷರಾಗಿ ವರ್ಗಾವಣೆ ಮಾಡಲಾಗಿದೆ. ಕೇರಳ ಹೈಕೋರ್ಟ್ ರಿಜಿಸ್ಟ್ರಾರ್‌ ಜನರಲ್ ಪಿ ಕೃಷ್ಣ ಕುಮಾರ್ ಅವರು ಮಂಗಳವಾರ ವರ್ಗಾವಣೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡು ಆಪಾದಿತ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡುವಾಗ ನ್ಯಾಯಾಧೀಶರ ಅವಲೋಕನಗಳು ಕೇರಳದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಿಳೆ ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ಸಂಪೂರ್ಣವಾಗಿ ತಿಳಿದಿರುವ ಆರೋಪಿ, ಅವಳ ದೇಹವನ್ನು ಸ್ಪರ್ಶಿಸುತ್ತಾನೆ ಎಂಬುದು ನಂಬಲು ಸಾಧ್ಯವಿಲ್ಲ” ಎಂದು ಮೊದಲ ಪ್ರಕರಣದಲ್ಲಿ ಸಿವಿಕ್ ಚಂದ್ರನ್‌ಗೆ ಜಾಮೀನು ನೀಡುವಾಗ ನ್ಯಾಯಾಧೀಶರು ಹೇಳಿದ್ದರು. ಈ ಹಿನ್ನಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿನ ಅಪರಾಧಗಳು ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ನಿಲ್ಲುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

ಎರಡನೇ ಪ್ರಕರಣದಲ್ಲಿ ನ್ಯಾಯಾಧೀಶರು, ಮಹಿಳೆ “ಲೈಂಗಿಕ ಪ್ರಚೋದನಕಾರಿ” ಉಡುಪುಗಳನ್ನು ಧರಿಸಿದಾಗ ಲೈಂಗಿಕ ಕಿರುಕುಳದ ಅಪರಾಧ ನಿಲ್ಲುವುದಿಲ್ಲ ಎಂದು ಹೇಳಿದ್ದರು.

IPC ಯ ಸೆಕ್ಷನ್ 354A ಅನ್ನು ಓದುತ್ತಾ ತನ್ನ ಮೌಖಿಕ ಅವಲೋಕನ ಮಾಡಿರುವ ನ್ಯಾಯಾಧೀಶರು, “ಈ ಸೆಕ್ಷಣ್ ಅಡಿಯಲ್ಲಿ ಪ್ರಕರಣ ದಾಖಲಾಗಲು, ದೈಹಿಕ ಸಂಪರ್ಕ ಮತ್ತು ಇಷ್ಟವಿಲ್ಲದ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಚೋದನೆಗಳಳು ಇರಬೇಕು. ಲೈಂಗಿಕ ಬೇಡಿಕೆ ಅಥವಾ ವಿನಂತಿಯನ್ನು ಹೊಂದಿರಬೇಕು. ಅಲ್ಲಿ ಲೈಂಗಿಕ ಹಿನ್ನಲೆಯ ಟೀಕೆಗಳಿರಬೇಕು” ಎಂದು ಹೇಳಿದ್ದರು.

ಈ ನಡುವೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬರಹಗಾರ ಸಿವಿಕ್ ಚಂದ್ರನ್ (74) ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಕೇರಳ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. “ಲೈಂಗಿಕ-ಪ್ರಚೋದನಕಾರಿ ಉಡುಗೆ” ಕುರಿತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅವಲೋಕನಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ನ್ಯಾಯಾಮೂರ್ತಿ ಕೌಸರ್ ಎಡಪ್ಪಗತ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ಆರೋಪಿಯ ವಯಸ್ಸನ್ನು ಪರಿಗಣಿಸಿ ತಕ್ಷಣ ಬಂಧಿಸದಂತೆ ಪೊಲೀಸರಿಗೆ ಸೂಚಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ಪರಿಶೀಲಿಸಲಿದೆ.

ಎರಡು ಪ್ರಕರಣಗಳಲ್ಲಿ ಚಂದ್ರನ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಧೀಶ ಎಸ್ ಕೃಷ್ಣಕುಮಾರ್ ಅವರ ಅವಲೋಕನಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ ಕೇರಳ ಸರ್ಕಾರವು ಕಳೆದ ವಾರ ನ್ಯಾಯಾಲಯದ ಮೆಟ್ಟಿಲೇರಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...