Homeಮುಖಪುಟಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

ಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ. ಸುಬ್ಬಯ್ಯ ಹುಟ್ಟುಹಬ್ಬ | ಕಿರು ಪರಿಚಯ

- Advertisement -
- Advertisement -

ಕರ್ನಾಟಕ ಕಂಡ ಧೀಮಂತ ನಾಯಕರಲ್ಲಿ ಒಬ್ಬರಾದ ಪ್ರಗತಿಪರ ಚಿಂತಕರು ಆಗಿದ್ದ ಎ.ಕೆ. ಸುಬ್ಬಯ್ಯ ಅವರು ಈಗಿಲ್ಲದಿರಬಹುದು, ಆದರೆ ಅವರು ಹಾಕಿಕೊಟ್ಟ ಮಾರ್ಗವಿದೆ, ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡ ಒಡನಾಡಿ ಮನಸ್ಸುಗಳು ರಾಜ್ಯದಾದ್ಯಂತ ಇವೆ. ಇಂದು ಅವರ ಹುಟ್ಟುಹಬ್ಬವಾಗಿದ್ದು ಅವರ ಕಿರು ಪರಿಚಯ ಇಲ್ಲಿದೆ.

ಅಜ್ಜಿಕುಟ್ಟಿರ ಕರಿಯಪ್ಪ ಸುಬ್ಬಯ್ಯನವರು 1934 ಆಗಸ್ಟ್‌ 9 ರಂದು ಕೊಡಗಿನ ವಿರಾಜಪೇಟೆಯಲ್ಲಿ ಜನಿಸಿದರು. ಅವರ ತಂದೆ ಕರಿಯಪ್ಪ, ತಾಯಿ ಚಿನ್ನವ್ವ. ಎಕೆ ಸುಬ್ಬಯ್ಯ ಅವರ ಕುಟುಂಬವೂ ಮೂಲತಃ ಕೃಷಿಕ ಕುಟುಂಬದವರಾಗಿತ್ತು. ಸುಬ್ಬಯ್ಯ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರಿಹರ ಹಳ್ಳಿಯಲ್ಲಿ ಆರಂಭಿಸಿ ಪ್ರೌಢಶಿಕ್ಷಣವನ್ನು ಶೆಟ್ಟಿಗೆರೆಯಲ್ಲಿ ಹಾಗೂ ವಿಜ್ಙಾನ ವಿಷಯದಲ್ಲಿ ಪದವಿಯನ್ನು ಮುಗಿಸಿ ನಂತರ 1963 ರಲ್ಲಿ ಮೈಸೂರಿನ ಶಾರದ ವಿಲಾಸ್ ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1963 ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ ಅವರು 1996 ರಲ್ಲಿ ಬಿಜೆಪಿಯ ಮಾತೃಪಕ್ಷ ಜನಸಂಘದ ಮೂಲಕ ರಾಜಕಾರಣಕ್ಕೆ ಕಾಲಿಟ್ಟರು. ಜನಸಂಘದ ಮೂಲಕ ಅವರು 1968 ಮತ್ತು 1974 ರಲ್ಲಿ ಮೈಸೂರು ಕೊಡಗು ಮಂಗಳೂರು ಪಧವೀಧರ ಕ್ಷೇತ್ರದಿಂದ ಆಯ್ಕೆಯಾಗಿ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾದರು.

1975 ರಲ್ಲಿ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ಪ್ರತಿಭಟಿಸಿ ಬಂಧನಕ್ಕೊಳಗಾದರು. ರಾಜಕೀಯ ಕೈದಿಯಾಗಿ 18 ತಿಂಗಳುಗಳಕಾಲ ಸೆರೆವಾಸ ಅನುಭವಿಸಿದ ಅವರು 1980 ರಲ್ಲಿ ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೆ ಬಿಜೆಪಿಯಿಂದ ಮೂರನೇ ಬಾರಿಗೆ  ವಿಧಾನ ಪರಿಷತ್ ಸದಸ್ಯರಾದರು.

ಇದನ್ನೂ ಓದಿ: ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಇದರ ನಂತರ ಅವರು ಬಿಜೆಪಿಯ ಪ್ರಮುಖ ನಾಯಕರಾಗಿ ಹೊರಹೊಮ್ಮಿದ ಅವರು ರಾಜ್ಯವನ್ನು ಸುತ್ತಿ ಪಕ್ಷವನ್ನು ಬಲಪಡಿಸಿದರು. ಅವರ ನಾಯಕತ್ವದಲ್ಲಿ 1983 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ 110 ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಗೆ ಭದ್ರ ತಂದುಕೊಟ್ಟಿದ್ದರು. ಆದರೆ ಆರೆಸ್ಸೆಸ್‌‌‌ ಮತ್ತು ಬಿಜೆಪಿ ಜೊತೆಗೆ ಸೈದ್ಧಾಂತಿಕ ವಿರೋಧದಿಂದಾಗಿ ಪಕ್ಷದಿಂದ ಹೊರ ಬಂದು ತಮ್ಮದೇ ಸ್ವಂತ “ಕನ್ನಡನಾಡು” ಪಕ್ಷವನ್ನು ಕಟ್ಟಿದರು. ಆದರೆ ಅದು ಉದ್ದೇಶಿತ ಗುರಿಯನ್ನು ಮುಟ್ಟದೆ ಇದ್ದಾಗ ಕಾಂಗ್ರೆಸ್ ಪಕ್ಷ ಸೇರಿ ನಾಲ್ಕನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದರು.

ಬಿಜೆಪಿಯಿಂದ ಹೊರ ಬಂದ ನಂತರ ಅವರು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್ಸ್‌‌ ಬಗ್ಗೆಗಿನ ಒಳಸುಳಿಗಳ ಬಗ್ಗೆ ಅವರು ನಿರಂತರವಾಗಿ ಬರೆಯುತ್ತಿದ್ದರು. ಅವರು ಬರೆದ “ಆರೆಸ್ಸೆಸ್‌ ಅಂತರಂಗ’’ ಎಂಬ ಪುಸ್ತಕ ಅವರ ಖ್ಯಾತ ಕೃತಿಯಾಗಿದೆ. ಇಷ್ಟೆ ಅಲ್ಲದೆ, ಬಿಜೆಪಿಯಿಂದ ಹೊರ ಬಂದ ನಂತರ ಅವರು ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ವಾಜಪೇಯಿಗೆ ಧೀರ್ಘ ಪತ್ರ ಬರೆದಿದ್ದರು. ಆ ಪತ್ರವನ್ನೇ ಇನ್ನಷ್ಟು ವಿಸ್ತರಿಸಿ “ಆರೆಸ್ಸೆಸ್ ದಿ ವಿ಼ಪ್ ಹ್ಯಾಂಡ್ ಆಫ್ ಬಿಜೆಪಿ” ಎಂಬ ಪುಸ್ತಕವಾಗಿ ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...