Homeಕರ್ನಾಟಕಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ.ಸುಬ್ಬಯ್ಯ ಅಸ್ತಂಗತ

ಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಸಾಕ್ಷಿಪ್ರಜ್ಞೆ ಎ.ಕೆ.ಸುಬ್ಬಯ್ಯ ಅಸ್ತಂಗತ

- Advertisement -
- Advertisement -

ಹಿರಿಯ ರಾಜಕಾರಣಿ, ಸಾಮಾಜಿಕ ಚಿಂತಕ ಮತ್ತು ಹೋರಾಟಗಾರರಾದ ಎ.ಕೆ.ಸುಬ್ಬಯ್ಯನವರು ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ 2 ವರ್ಷದಿಂದ ಗಂಟಲು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಶಸ್ತ್ರಚಿಕಿತ್ಸೆ ಮತ್ತು ಇನ್ನಿತರ ಚಿಕಿತ್ಸೆಗಳನ್ನು ನೀಡಲಾಗಿತ್ತು. ಆದರೂ, ಸಾಮಾಜಿಕ ಚಟುವಟಿಕೆಗಳಲ್ಲಿ ಉತ್ಸಾಹದಿಂದಲೇ ಪಾಲ್ಗೊಳ್ಳುತ್ತಿದ್ದ ಅವರು ಎಂದಿನಂತೆ ಪ್ರಖರ ಭಾಷಣಗಳನ್ನು ಮಾಡುತ್ತಲೂ ಇದ್ದರು. ಈಗ ಇಹಲೋಕ ತ್ಯಜಿಸಿದ್ದಾರೆ.

ಈ ಮಧ್ಯೆ ಕಳೆದ 1 ವರ್ಷದಿಂದ ಕಿಡ್ನಿ ತೊಂದರೆಯನ್ನು ಅನುಭವಿಸುತ್ತಿದ್ದು ಡಯಾಲಿಸಿಸ್ ನಿರಂತರವಾಗಿ ನಡೆಯುತ್ತಲಿತ್ತು. ಅವರು ತೀರಾ ಈಚೆಗೆ ಕೋಮಾಗೆ ಜಾರುವವರೆಗೂ ಸಾಮಾಜಿಕ ಕಳಕಳಿ, ಸಮಕಾಲೀನ ವಿದ್ಯಮಾನಗಳ ಕುರಿತು ಕಾಳಜಿಯಲ್ಲಿ ಎಳ್ಳಷ್ಟೂ ಬದಲಾವಣೆ ಬಂದಿಲ್ಲ. ಆಸ್ಪತ್ರೆ ಸೇರುವ ಮುಂಚೆಯೂ ಹೋರಾಟಗಾರ ಮಿತ್ರರಿಗೆ ಫೋನ್ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದರು.

ಆದರೆ ಈ ಸಾರಿ ಆಸ್ಪತ್ರೆಗೆ ಸೇರಿರುವಾಗ ಪರಿಸ್ಥಿತಿ ಗಂಭೀರವಾಗಿತ್ತು. ಇಂದು ಮಧ್ಯಾಹ್ನ ಕೊನೆಯುಸಿರೆಳೆದ್ದಾರೆ. ಈ ಹಿನ್ನೆಲೆಯಲ್ಲಿ ಕೆನಡಾ ದೇಶದಲ್ಲಿರುವ ಅವರ ಮಕ್ಕಳು ಅಲ್ಲಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಹಿರಿಯ ಪುತ್ರ ಕಾರ್ಯಪ್ಪ ಮತ್ತು ರಾಜ್ಯದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಇನ್ನೊಬ್ಬ ಪುತ್ರ ಪೊನ್ನಣ್ಣ ಆಸ್ಪತ್ರೆಯಲ್ಲಿ ಜೊತೆಗಿದ್ದರು.

ಎ.ಕೆ ಸುಬ್ಬಯ್ಯನವರ ಅಂತ್ಯಕ್ರಿಯೆ ಗೋಣಿಕೊಪ್ಪದಲ್ಲಿ ನಡೆಯಲಿದ್ದು ಪಾರ್ಥಿವ ಶರೀರವನ್ನು ಗೋಣಿಕೊಪ್ಪಗೆ ಸಾಗಿಸಲು ಸಿದ್ದತೆ ನಡೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

0
ಲೋಕಸಭೆ ಚುನಾವಣೆಗೆ "ದೇವರು ಮತ್ತು ಪೂಜಾ ಸ್ಥಳಗಳ" ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ...