Homeಮುಖಪುಟಪಂಜಾಬ್‌ನ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಜೀವ ಕಳೆದುಕೊಂಡ ಕೇರಳ ಮೂಲದ ವಿದ್ಯಾರ್ಥಿ; ಭುಗಿಲೆದ್ದ ಪ್ರತಿಭಟನೆ

ಪಂಜಾಬ್‌ನ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಜೀವ ಕಳೆದುಕೊಂಡ ಕೇರಳ ಮೂಲದ ವಿದ್ಯಾರ್ಥಿ; ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪಂಜಾಬ್‌‌ನ ಜಲಂಧರ್ ಬಳಿಯ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ಕೇರಳದ ವಿದ್ಯಾರ್ಥಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.  ಕೇರಳ ಮೂಲದ ಡಿಸೈನಿಂಗ್‌ನ ಪ್ರಥಮ ವರ್ಷದ ವಿದ್ಯಾರ್ಥಿ ಅಗ್ನಿ ಎಸ್. ದಿಲೀಪ್ (21) ಮಂಗಳವಾರ ತಡರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಯ ಕೊಠಡಿಯಿಂದ ವಶಪಡಿಸಿಕೊಂಡ ಡೆತ್‌ ನೋಟ್‌ನಲ್ಲಿ, ತಾನು ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆಯ ನಂತರ ನಿನ್ನೆ ತಡರಾತ್ರಿ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಹತ್ತು ದಿನಗಳಲ್ಲಿ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಎರಡನೇ ಆತ್ಮಹತ್ಯೆ ಇದಾಗಿದೆ. ಮುಚ್ಚಿದ ಬಾಗಿಲಿನ ಹಿಂದೆ ವಿವಾದವನ್ನು ಪರಿಹರಿಸಿದ್ದರಿಂದ ಇದು ವರದಿಯಾಗಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಎರಡೂ ಆತ್ಮಹತ್ಯೆ ಪ್ರಕರಣಗಳ ಹಿಂದಿನ ಕಾರಣಗಳನ್ನು ತಿಳಿಯಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ವಿಶ್ವವಿದ್ಯಾಲಯದ ಆಡಳಿತವು ಈ ವಿಷಯದ ಬಗ್ಗೆ ಮೌನವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳ ಆರೋಪವನ್ನು ಮುನ್ಸಿಪಲ್ ಮತ್ತು ಪೊಲೀಸರು ನಿರಾಕರಿಸಿದ್ದಾರೆ.

ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ.

ಕಪುರ್ತಲದ ಹಿರಿಯ ಪೊಲೀಸ್ ಅಧೀಕ್ಷಕ ನವನೀತ್ ಸಿಂಗ್ ಬೈನ್ಸ್ ಅವರು ಡೆತ್‌ನೋಟ್‌ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವೈಯಕ್ತಿಕ ಕಾರಣಗಳು ಆತ್ಮಹತ್ಯೆಗೆ ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು TNIE ವರದಿ ಹೇಳಿದೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಬೈನ್ಸ್ ಪೊಲೀಸರು ಪ್ರಕರಣವನ್ನು ಸರಿಯಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಾರೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ‘400% ಶುಲ್ಕ ಹೆಚ್ಚಳ’: ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಂದ ಬೃಹತ್ ಪಂಜಿನ ಮೆರವಣಿಗೆ

ವಿದ್ಯಾರ್ಥಿಯ ಸಾವಿನಿಂದ ದುಃಖಿತವಾಗಿರುವ ವಿಶ್ವವಿದ್ಯಾನಿಲಯವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ದುರದೃಷ್ಟಕರ ಘಟನೆಯಿಂದ ಎಲ್‌ಪಿಯು ಸಹೋದರರು ದುಃಖಿತರಾಗಿದ್ದಾರೆ. ಪೊಲೀಸರ ಆರಂಭಿಕ ತನಿಖೆ ಮತ್ತು ಆತ್ಮಹತ್ಯೆ ಪತ್ರದ ವಿಷಯಗಳು ಮೃತರ ವೈಯಕ್ತಿಕ ಸಮಸ್ಯೆಗಳತ್ತ ಗಮನ ಹರಿಸುತ್ತವೆ. ವಿಶ್ವವಿದ್ಯಾನಿಲಯವು ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಯ ನಷ್ಟಕ್ಕೆ ಸಂತಾಪ ವ್ಯಕ್ತಪಡಿಸುತ್ತದೆ” ಎಂದು ದುಃಖಿತ ಕುಟುಂಬಕ್ಕೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...