Homeಕರೋನಾ ತಲ್ಲಣಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

- Advertisement -

ಶನಿವಾರ ಕೋವಿಶೀಲ್ಡ್ ಲಸಿಕೆ ಪಡೆದಿದ್ದ ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ನೌಕರ ನಾಗರಾಜ ಬಾಳಪ್ಪ ಇಂದು (ಜನವರಿ 8) ಬೆಳಿಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದಾಗ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

“ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲಾಗಿದೆ. ವರದಿ ಬಂದ ನಂತರ ನಾಗರಾಜ ಅವರ ನಿಧನಕ್ಕೆ ನಿರ್ದಿಷ್ಟ ಕಾರಣ ತಿಳಿಯಲಿದೆ” ಎಂದು ಸಂಡೂರಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ರಾಮಶೆಟ್ಟಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಸಚಿವ ಸುಧಾಕರ್, “ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತರಾದರು ಎನ್ನುವುದು ವದಂತಿಯಷ್ಟೆ. ಅವರಿಗೆ ಮಧುಮೇಹ ತೊಂದರೆಯಿತ್ತು. ಜೊತೆಗೆ ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಅವರಿಗೆ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ. ಲಸಿಕೆಯ ಅಡ್ಡ ಪರಿಣಾಮದಿಂದ ಹೀಗಾಗಿದೆ ಎಂದು ನನಗೆ ಅನಿಸುತ್ತಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಸುಧಾಕರ್ ಅವರ ಹೇಳಿಕೆಯ ಕುರಿತು ಟ್ವೀಟ್ ಮಾಡಿರುವ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಕರ್ತೆ ರಂಜನಿ, “ಈ ಸಾವು ಲಸಿಕೆ ತೆಗೆದುಕೊಂಡಿದ್ದರಿಂದ ಸಂಭವಿಸಿದ್ದಲ್ಲ. ಬದಲಿಗೆ ಇದು ಹೃದಯ ಸಂಬಂಧಿ ತೊಂದರೆಯಿಂದಾದ ಸಾವು ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಲಸಿಕೆ ಪಡೆದ ನಂತರ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಮೊದಲ ಘಟನೆ ಇದು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಂಗನಾ ಪೋಸ್ಟ್‌ಗಳಿಗೆ ಸೆನ್ಸಾರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನಟಿ ಕಂಗನಾ ರಣಾವತ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್‌ಗಳನ್ನು ಇನ್ನು ಮುಂದೆ ಸೆನ್ಸಾರ್ ಮಾಡಬೇಕು ಎಂದು ಒತ್ತಾಯಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಬಾರ್ ಅಂಡ್‌‌ ಬೆಂಚ್ ವರದಿ...
Wordpress Social Share Plugin powered by Ultimatelysocial
Shares