Homeಕರ್ನಾಟಕಬೆಂಗಳೂರು: ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆ ಕತ್ತು ಕೊಯ್ದುಕೊಂಡ ವ್ಯಕ್ತಿ

ಬೆಂಗಳೂರು: ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆ ಕತ್ತು ಕೊಯ್ದುಕೊಂಡ ವ್ಯಕ್ತಿ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಹೆಚ್‌ ಪಿ ಪ್ರಭಾಕರ್‌ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಈ ಘಟನೆ ನಡೆದಿದೆ.

ನ್ಯಾಯಪೀಠದಲ್ಲಿ ಎಂದಿನಂತೆ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಮಧ್ಯಾಹ್ನ 1.15ರ ಸಮಯ ಕ್ರಮ ಸಂಖ್ಯೆ 26ರ ಪ್ರಕರಣವನ್ನು ಕೋರ್ಟ್‌ ಆಫಿಸರ್ ಕೂಗಿದ್ದಾರೆ. ಈ ವೇಳೆ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲ್‌ಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ತಾನು ತಂದಿದ್ದ ಹರಿತವಾದ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡಿದ್ದಾರೆ.

ತಕ್ಷಣ ಪೊಲೀಸರನ್ನು ಕರೆದ ಮುಖ್ಯ ನ್ಯಾಯಮೂರ್ತಿಗಳು, ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಪೊಲೀಸರು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಭದ್ರತಾ ಲೋಪಕ್ಕೆ ನ್ಯಾಯಮೂರ್ತಿ ಅಸಮಾಧಾನ:

ಕೋರ್ಟ್ ಹಾಲ್ ಒಳಗಡೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ನ್ಯಾಯಮೂರ್ತಿ ಪ್ರಭಾಕರ್ ಶಾಸ್ತ್ರಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಗಿ ಭದ್ರತೆ ಇದ್ದರೂ ವ್ಯಕ್ತಿ ಹೇಗೆ ಬ್ಲೇಡ್ ತಂದರು? ಎಂದು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ 10 ಪಕ್ಷಗಳ ಬೆಂಬಲ ಪಡೆಯಲು ಚರ್ಚೆ; ಡಿಕೆ ಶಿವಕುಮಾರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...