Homeಮುಖಪುಟಜಾರ್ಖಂಡ್‌ನಲ್ಲಿ 15 ಲಕ್ಷ ರೂ. ಬಹುಮಾನ ಘೋಷಿತ ಮಾವೋವಾದಿ ಹತ್ಯೆ: ಪೊಲೀಸರು

ಜಾರ್ಖಂಡ್‌ನಲ್ಲಿ 15 ಲಕ್ಷ ರೂ. ಬಹುಮಾನ ಘೋಷಿತ ಮಾವೋವಾದಿ ಹತ್ಯೆ: ಪೊಲೀಸರು

- Advertisement -
- Advertisement -

ಗುಮ್ಲಾ (ಜಾರ್ಖಂಡ್): ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯಿಂದ ಚದುರಿದ ಸಂಘಟನೆಯಾದ ಪೀಪಲ್ಸ್ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ (PLFI) ದ ಕಮಾಂಡರ್ ಹತನಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಈ ಮಾವೋವಾದಿಯ ತಲೆಗೆ ₹15 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಕಾಮ್ದಾರಾ ಪೊಲೀಸ್ ಠಾಣಾ ವ್ಯಾಪ್ತಿಯ ಚಂಗಾಬಡಿ ಉಪರ್ತೋಲಿ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಭದ್ರತಾ ಪಡೆಗಳು ಚಂಗಾಬಡಿ ಉಪರ್ತೋಲಿಗೆ ತಲುಪಿದಾಗ, ಮಾವೋವಾದಿಗಳು ಗುಂಡು ಹಾರಿಸಲು ಪ್ರಾರಂಭಿಸಿದರು. ಭದ್ರತಾ ಸಿಬ್ಬಂದಿಯೂ ತಿರುಗೇಟು ನೀಡಿದ್ದು, ಈ ವೇಳೆ PLFI ಕಮಾಂಡರ್ ಮಾರ್ಟಿನ್ ಕೆರ್ಕೆಟ್ಟಾ ಹತನಾದನು. ಆತನಿಂದ ಒಂದು ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಗುಮ್ಲಾ ಪೊಲೀಸ್ ಅಧೀಕ್ಷಕ (SP) ಹರೀಶ್ ಬಿನ್ ಜಮಾನ್ ಪಿಟಿಐಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಕೆಲವು ಮಾವೋವಾದಿಗಳ ಇರುವಿಕೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರಂತೆ, ಕಾರ್ಯಾಚರಣೆ ನಡೆಸಲು ವಿಶೇಷ ತಂಡವನ್ನು ರಚಿಸಲಾಗಿತ್ತು ಎಂದು ಗುಮ್ಲಾ ಎಸ್‌ಪಿ ಹೇಳಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ತರ್ನ್ ತಾರನ್ ನಕಲಿ ಎನ್‌ಕೌಂಟರ್‌ಗೆ 32 ವರ್ಷ: ಐವರು ಮಾಜಿ ಪೊಲೀಸ್ ಅಧಿಕಾರಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...