Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...