Homeಕರ್ನಾಟಕಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡ ತಾಯಿ; ಕಲಬುರಗಿಯಲ್ಲಿ ಮತ್ತೊಂದು ಘಟನೆ

ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡ ತಾಯಿ; ಕಲಬುರಗಿಯಲ್ಲಿ ಮತ್ತೊಂದು ಘಟನೆ

- Advertisement -
- Advertisement -

ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿಡುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ಸೋಮವಾರ ನಡೆದಿದೆ. ಶನಿವಾರವಷ್ಟೇ ಜಿಲ್ಲೆಯ ಮಾಡಿಯಾಳ ಗ್ರಾಮದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಗೃಹಣಿಯೊಬ್ಬರು ಬಾವಿಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು 27 ವರ್ಷದ ದೀಕ್ಷಾ ಶರ್ಮಾ ಎಂದು ಗುರುತಿಸಲಾಗಿದೆ. ಅವರು ತನ್ನ ಇಬ್ಬರು ಮಕ್ಕಳಾದ 4 ವರ್ಷದ ದನಂಜಯ್ ಮತ್ತು 2 ವರ್ಷದ ಮಗಳು ಸಿಂಚನಾ ಅವರನ್ನು ಹಗ್ಗದಲ್ಲಿ ಕಟ್ಟಿ ಹಾಕಿ ಬೆಂಕಿ ಹಚ್ಚಿಕೊಂಡಿದ್ದಾರೆ.

ಘಟನೆಯಲ್ಲಿ ಮಗಳು ಸಿಂಚನಾ ಅವರು ತನ್ನ ತಾಯಿ ದೀಕ್ಷಾ ಶರ್ಮಾ ಜೊತೆಗೆ ಮೃತಪಟ್ಟಿದ್ದರೆ, ಮಗ ದನಂಜಯ್ ಗಂಭೀರ ಸುಟ್ಟ ಗಾಯಗೊಳೊಂದಿಗೆ ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ; ಒಂದು ಮಗುವಿನ ರಕ್ಷಣೆ

ಮೂಲತಃ ಕಾಳಗಿ ತಾಲೂಕಿನ ದೀಕ್ಷಾ ಅವರು ಪಂಚಶೀಲ ನಗರದ ವಸಂತರಾವ್ ಶರ್ಮಾ ಎಂಬವರನ್ನು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು‌ ಮನೆಗೆ ಕಳುಹಿಸುತ್ತಿರಲಿಲ್ಲ ಎಂದು ದೂರಲಾಗಿದೆ.

ಕೆಲವು ಮಾಧ್ಯಮಗಳು ಪತಿಗೆ ಇರುವ ಅಕ್ರಮ ಸಂಬಂಧದಿಂದ ಅವರು ಬೇಸೆತ್ತಿದ್ದರು ಎಂದು ವರದಿ ಮಾಡಿದೆ.

ವಸಂತ ಶರ್ಮಾ ಇತ್ತೀಚೆಗೆ ತವರು ಮನೆಯಿಂದ ಹಣ ತರುವ ವಿಚಾರದಲ್ಲಿ ದೀಕ್ಷಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪ್ರಜಾವಾಣಿ ವರದಿ ಮಾಡಿದೆ. “ಈ ಸಂಬಂಧ ಮಹಿಳೆಯರ ಪೋಷಕರು ನೀಡಿದ ದೂರಿನ ಮೇರೆಗೆ ಗಂಡ ವಸಂತ, ಅತ್ತೆ ನೀಲಮ್ಮ, ವಿಠ್ಠಲ ಎಂಬುವವರು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸ್ಟೇಶನ್‌ ಬಜಾರ್ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಸಿದ್ದರಾಮೇಶ ಗಡೇದ ತಿಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

“ಗಂಡನ ಮನೆಯವರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ದೀಕ್ಷಾ ಕುಟುಂಬದವರು ಆರೋಪಿಸಿದ್ದಾರೆ‌” ಎಂದು ಈಟಿವಿ ವರದಿ ಮಾಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರೀಶಿಲನೆ ನಡೆಸಿದ್ದಾರೆ. ಈ ಕುರಿತು ಸ್ಪೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸತ್ತಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಶನಿವಾರವಷ್ಟೇ ಜಿಲ್ಲೆಯ ಮಾಡಿಯಾಳ ಗ್ರಾಮದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಗೃಹಣಿಯೊಬ್ಬರು ಬಾವಿಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೆ ಜಿಲ್ಲೆಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ಸಂಭವಿಸಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೊಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...