Homeಮುಖಪುಟ‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು...

- Advertisement -
- Advertisement -

ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಝಾ ಅವರ ‘ಆಶ್ರಮ್‌-3’ ವೆಬ್‌ ಸೀರೀಸ್‌ ಚಿತ್ರೀಕರಣದ ವೇಳೆ ದಾಳಿ ಪ್ರಕರಣದಲ್ಲಿನ ಪ್ರಮುಖ ಆರೋಪಿ ಕೊಲೆ ಪ್ರಕರಣದ ಅಪರಾಧಿಯೂ ಆಗಿದ್ದು, ಆತ ಬಿಜೆಪಿ ನಾಯಕರ ಒಡನಾಡಿಯಾಗಿದ್ದಾನೆ ಎಂದು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 24ರಂದು ಭೋಪಾಲ್‌ನಲ್ಲಿ ಆಶ್ರಮ್‌ ಚಿತ್ರೀಕರಣದ ವೇಳೆ ಬಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದರು. ದಾಳಿ ಕೃತ್ಯದ ಪ್ರಮುಖ ಆರೋಪಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿದೆ.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ.

ಇದನ್ನೂ ಓದಿರಿ: ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ.

ಭೋಪಾಲ್‌ನ ಅರೇರಾ ಹಿಲ್ಸ್ ಪೊಲೀಸ್ ಠಾಣೆಯ ಪಟ್ಟಣ ನಿರೀಕ್ಷಕ ಆರ್.ಕೆ.ಸಿಂಗ್‌ ಪ್ರಕರಣ ದಾಖಲಿಸಿರುವ ಸಂಬಂಧ ತಿಳಿಸಿದ್ದು, “ಆಶ್ರಮದ ಮೂರನೇ ಸೀಸನ್ ಚಿತ್ರೀಕರಣದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಸುದೇಲೆ ಸೇರಿದಂತೆ ಏಳು ಮಂದಿ ಬಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಘಟನೆಯ ಒಂದು ದಿನದ ನಂತರ ಐಪಿಸಿಯ ಆರು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಯಾರನ್ನಾದರೂ ಬಂಧಿಸಲಾಗಿದೆಯೇ ಎಂದು ಕೇಳಿದಾಗ, “ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಸಮನ್ಸ್‌ ಬಂದಾಗ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ” ಎಂದು ಇನ್‌ಸ್ಪೆಕ್ಟರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಮರುದಿನ ಆರೋಪಿಗಳು ಭೋಪಾಲ್ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಪಡೆದರು.

ಇದರ ನಡುವೆ ಪೊಲೀಸ್ ಭದ್ರತೆಯ ನಡುವೆ ವೆಬ್ ಸರಣಿಯ ಶೂಟಿಂಗ್ ಮುಂದುವರೆದಿದೆ ಎಂದು ಭೋಪಾಲ್‌ ಡಿಐಜಿ ಇರ್ಷಾದ್‌ ವಾಲಿ ತಿಳಿಸಿದ್ದಾರೆ. “ನಾವು ಪ್ರಕಾಶ್ ಝಾ ಮತ್ತು ಆಶ್ರಮ್‌ ವೆಬ್‌ ಸೀರೀಸ್‌ ಸಿಬ್ಬಂದಿಗೆ ರಕ್ಷಣೆಯ ಭರವಸೆ ನೀಡಿದ್ದೇವೆ. ಯಾವುದೇ ಘಟನೆಗಳು ನಡೆಯದಂತೆ ಶೂಟಿಂಗ್ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ” ಎಂದು ವಾಲಿ ಸ್ಪಷ್ಟಪಡಿಸಿದ್ದಾರೆ.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿರಿ: ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.

‘ದಿ ವೈರ್‌’ ಜಾಲತಾಣವು ಸುದೇಲೆ ಅವರ ಹಲವಾರು ಫೋಟೋಗಳನ್ನು ಕಲೆ ಹಾಕಿದೆ. ಸುದೇಲೆ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧಿಕೃತ ನಿವಾಸದಲ್ಲಿ ಗೃಹ ಸಚಿವ ನರೋತ್ತಮ್ ಮಿಶ್ರಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಬಿಜೆಪಿ, ಆರ್‌ಎಸ್‌ಎಸ್ ನಾಯಕರೊಂದಿಗೆ ಇರುವುದನ್ನು ಫೋಟೋಗಳಲ್ಲಿ ಕಾಣಬಹುದು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (ಬಲ ತುದಿ) ಅವರೊಂದಿಗೆ ಸುಶೀಲ್ ಸುದೇಲೆ (ಎಡ ತುದಿ)  ಇದ್ದಾರೆ. (ಚಿತ್ರ ಕೃಪೆ: The Wire)

ಇದನ್ನೂ ಓದಿರಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...