Homeಮುಖಪುಟಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜರುಗಿದೆ. ಆರೋಪಿಯು ಹಲ್ಲೆ ನಡೆಸುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದು ವೈರಲ್ ಆಗಿದೆ.

ಅಲ್ಲದೇ ಹಿಂದುಏಕ್ತಾಸಂಘ್ ಎಂಬ ಇನ್ಸ್ಟಗ್ರಾಮ್ ಖಾತೆಯಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ ಎಂದು ಹಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಪತ್ರಕರ್ತ ಮೊಹಮ್ಮದ್ ಜುಬೇರ್ “ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಆತನನ್ನು ನಪುಂಸಕನಾಗಿ ಮಾಡಬೇಕೆಂದು ಇನ್ಸ್ಟಗ್ರಾಮ್ ಖಾತೆಯಲ್ಲಿ ಬರೆಯಲಾಗಿದೆ. ಈ ಹಿಂದೆಯೂ ಹಲವು ಬಾಲಕರ ಮೇಲೆ ಹಲ್ಲೆ ನಡೆಸಿರುವ ದಾಖಲೆಗಳಿವೆ. ಈ ಕುರಿತು ಗಾಜಿಯಾಬಾದ್ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ಆರೋಪಿ ಶೃಂಗಿ ಯಾದವ್‌ನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶೃಂಗಿ ನಂದನ್ ಯಾದವ್ ಬಿಹಾರದ ಭಾಗಲ್ಪುರ ನಿವಾಸಿಯಾಗಿದ್ದು ಪೊಲೀಸರು ಯಾದವ್‌ನನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೇ ವ್ಯಕ್ತಿಯು ಕೆಲದಿನಗಳ ಹಿಂದೆ ಮತ್ತೊಬ್ಬ ಮುಸ್ಲಿಂ ಬಾಲಕನಿಗೆ ಹಲ್ಲೆ ನಡೆಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ನೆಟ್ಟಿಗರು ವಿಡಿಯೋ ಷೇರ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದರ್ಮಗಳು ಮನುಷ್ಯನಲ್ಲಿ ಇರುವ ಮೃಗತ್ವವನ್ನು ಕೊನೆಗಾಣಿಸಬೇಕು. ಆದರೆ ಇಲ್ಲಿ ದರ್ಮದ ಹೆಸರಿನಲ್ಲಿ ಮೃಗತ್ವ ವಿಜೃಂಬಿಸುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...