Homeಚಳವಳಿಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

ಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

- Advertisement -
- Advertisement -

ನಾಲ್ಕು ಬಾರಿ ಶಾಸಕರು, ಮಾಜಿ ಸಚಿವರಾಗಿದ್ದ ಎ. ನಾರಾಯಣಸ್ವಾಮಿ 2019ರಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಚಿತ್ರದುರ್ಗದ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದವರು ಅವರಿಗೆ ದೇವಾಲಯಕ್ಕೆ ಪ್ರವೇಶ ನೀಡದೇ ಅವಮಾನಿಸಿದ್ದರು. ಅದು 2019 ರಲ್ಲಿ ರಾಷ್ಟ್ರೀಯ ಸುದ್ದಿಯಾಗಿತ್ತು. ಅದೇ ನಾರಾಯಣಸ್ವಾಮಿಯವರಿಗೆ ಈಗ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಖಾತೆ ದಕ್ಕಿದೆ. ಕೇಂದ್ರ ಸಚಿವರಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರವೂ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಜನರ ಜಾತಿ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರನ್ನು ಅವರು ಸಚಿವರಾಗಿರುವುದರ ಕುರಿತು ಮತ್ತು ಗ್ರಾಮದ ದೇವಸ್ಥಾನ ಪ್ರವೇಶಿದ ಕುರಿತು ಪ್ರಶ್ನಿಸಿದಾಗ ಕೆಲ ಗ್ರಾಮಸ್ಥರು ನೀಡಿದ ಉತ್ತರ ಆಘಾತವನ್ನುಂಟು ಮಾಡಿದೆ. ಏನೇ ಆದರೂ ಜಾತಿ ಜಾಢ್ಯವನ್ನು ಅಲ್ಲಿನ ಜನರು ಬಿಡದಿರುವುದು ಭಾರತದ ದುರಂತ.

ಸ್ವತಃ ಪ್ರಧಾನ ಮಂತ್ರಿಯೇ ಗೌರವಿಸಿ ಮಂತ್ರಿ ಮಾಡಿರುವಾಗ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ “ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಅಜ್ಜನ ದಿನಗಳಿಂದ ನಾವು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಹಾಗಾಗಿ ಅವರಿಗೆ ಈಗಲೂ ಪ್ರವೇಶವಿಲ್ಲ. ಅದರಲ್ಲಿ ವಿಶೇಷವೇನಿದೆ?” ಎಂದು ವ್ಯಕ್ತಿಯೊಬ್ಬರು ಉತ್ತರಿಸಿದ್ದಾರೆ.

“ಈ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ತಿಮ್ಮರಾಯಪ್ಪ ಅವರು ಎಂದಿಗೂ ಗ್ರಾಮಕ್ಕೆ ಕಾಲಿಡುವುದಿಲ್ಲ. ಅವರು ಸ್ವಲ್ಪ ದೂರದಲ್ಲಿಯೇ ನಿಂತು ಸಮಸ್ಯಗಳ ಕುರಿತು ಚರ್ಚೆ ಮಾಡುತ್ತಾರೆ” ಎಂದು ಮತ್ತೊಬ್ಬ ವ್ಯಕ್ತಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಎ.ನಾರಾಯಣಸ್ವಾಮಿಯವರಿಗೆ ದೇವಸ್ಥಾನದ ಬಳಿ ಸನ್ಮಾನ ಮಾಡುವುದಕ್ಕೆ ನಮ್ಮ ವಿರೋಧವಿದೆ. ಊರಿನ ಹೊರಗೆ ಅವರಿಗೆ ಸನ್ಮಾನ ಕಾರ್ಯಕ್ರಮ ಮಾಡಲಿ. ಅದಕ್ಕೆ 2 ಲಕ್ಷ ಖರ್ಚಾದರೂ ಪರವಾಗಿಲ್ಲ. ನಮ್ಮ ಸಂಪ್ರದಾಯಗಳು ಮುಖ್ಯ. ಹಾಗಾಗಿ ದೇವಸ್ಥಾನದ ಬಳಿ ಕಾರ್ಯಕ್ರಮ ನಡೆಯಲು ನಾವು ಬಿಡುವುದಿಲ್ಲ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಪೆಮ್ಮನಹಳ್ಳಿ ಗೊಲ್ಲರಹಟ್ಟಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗ್ರಾಮವಾಗಿದ್ದು ಸುಮಾರು ಸಾವಿರದಷ್ಟು ಜನಸಂಖ್ಯೆ ಹೊಂದಿದೆ. ಇಲ್ಲಿನ ಬಹುಸಂಖ್ಯಾತರು ಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದು, ಇತ್ತೀಚಿನವರೆಗೂ, ಮುಟ್ಟಿನ ದಿನಗಳು ಮತ್ತು ಗರ್ಭಾವಸ್ಥೆಯಲ್ಲಿರುವ ಮಹಿಳೆಯರನ್ನು ತಮ್ಮ ಮನೆಯ ಹೊರಗೆ ಇರಿಸುವ ಆಚರಣೆಗಳು ಇಲ್ಲಿವೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಸಂಸದ ನಾರಾಯಣಸ್ವಾಮಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಬಗ್ಗೆ ನಮಗೆ ಮಾಹಿತಿಯಿಲ್ಲ. ಹಾಗೂ ನಮಗೆ ಅದರಲ್ಲಿ ಆಸಕ್ತಿ ಕೂಡ ಇಲ್ಲ. ಆದರೆ ಜಾತಿಗೆ ಸಂಬಂಧಿಸಿದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಯುವತಿಯೊಬ್ಬರು ಹೇಳಿದ್ದಾರೆ.

ಪರಿಶಿಷ್ಟ ಜಾತಿಯ ಜನರು ಸಹ ಇತರ ಸಮುದಾಯಗಳ ಜನರನ್ನು ಮನೆಯೊಳಗಾಗಲಿ, ದೇವಸ್ಥಾನದ ಒಳಗಾಗಲಿ ಬಿಟ್ಟುಕೊಳ್ಳುವುದಿಲ್ಲ ಎಂದು ಕೆಲ ಯುವಕರು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ ಮತ್ತಷ್ಟು ಜನರು ಈ ಪದ್ದತಿ ಬದಲಾಗಬೇಕು, ಎಲ್ಲರಿಗೂ ಅವಕಾಶವಿರಬೇಕು ಎಂಬ ಮಾತುಗಳನ್ನಾಡಿದ್ದಾರೆ. ಗ್ರಾಮದ ಮುಖ್ಯಸ್ಥ ಮುದ್ದಪ್ಪ, 2019 ರ ಘಟನೆಯ ನಂತರ ಗ್ರಾಮಸ್ಥರು ನಾರಾಯಣಸ್ವಾಮಿಯವರನ್ನು ಹೂವು ಹಾಕುವ ಮೂಲಕ ಸ್ವಾಗತಿಸಲಾಯಿತು ಮತ್ತು ದೇವಸ್ಥಾನಕ್ಕೆ ಕರೆದುಕೊಂಡು ಹೋಗಲಾಯಿತು ಎಂದಿದ್ದಾರೆ.

‘ನಾರಾಯಣಸ್ವಾಮಿಯವರು ಗ್ರಾಮ ಪ್ರವೇಶಿಸಬಾರದೆಂದು ಪಟ್ಟು ಹಿಡಿದಿದ್ದ ವೃದ್ಧ ಸಾವನಪ್ಪಿದ್ದಾರೆ. ಮತ್ತೊಬ್ಬ ಯುವಕ ಬೆಂಗಳೂರು ಸೇರಿದ್ದಾನೆ. ಸಂಸದರು ಗ್ರಾಮದ ಮೂಲಭೂತ ಅಗತ್ಯಗಳನ್ನು ಪೂರೈಸಿದರೆ ನಾನು ಗ್ರಾಮಸ್ಥರಿಗೆ ಮನವರಿಕೆ ಮಾಡಬಹುದು. ಜನರು ಕುಡಿಯುವ ನೀರಿನ ಸೌಲಭ್ಯ, ಶಾಲೆಯ ನಿರ್ಮಾಣ ಮತ್ತು ಮುಖ್ಯವಾಗಿ ತಮ್ಮ ಭೂಮಿಯನ್ನು ಆದಾಯ ಭೂಮಿ ಎಂದು ಗುರುತಿಸಲಿ ಎಂದು ಜನರು ಎದುರು ನೋಡುತ್ತಿದ್ದಾರೆ. ಇಲ್ಲಿ ಜಾತಿಯ ಯಾವುದೇ ಸಮಸ್ಯೆ ಇಲ್ಲ, ಅಭಿವೃದ್ಧಿಯ ಕುರಿತು ಇರುವ ಸಮಸ್ಯೆ’ ಎಂದು ಊರಿನ ಮುಖ್ಯಸ್ಥ ವಿವರಿಸಿದರು.

ಇಡೀ ಗ್ರಾಮದ ಆಸ್ತಿ ಹಕ್ಕುಗಳು ನಾಲ್ಕು ಜನರ ಹೆಸರಿನಲ್ಲಿದೆ. ಇದನ್ನು ಆದಾಯದ ಭೂಮಿಯಾಗಿ ಪರಿವರ್ತಿಸಿದರೆ, ಪ್ರತಿಯೊಬ್ಬರಿಗೂ ಆಸ್ತಿ ಹಕ್ಕು ದೊರೆಯುವುದರಿಂದ ಹೆಚ್ಚಿನ ಸಮಸ್ಯೆಗಳು ಬಗೆಹರಿಯುತ್ತವೆ. ನಾರಾಯಣಸ್ವಾಮಿಯವರು ಇದರ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಈ ಕುರಿತ ಪ್ರತಿಕ್ರಿಯೆಗಾಗಿ ಐಎಎನ್‌ಎಸ್ ಸಚಿವ ಎ ನಾರಾಯಣಸ್ವಾಮಿ ಅವರನ್ನು ಸಂಪರ್ಕಿಸಿದಾಗ, “ಗ್ರಾಮದ ಅರ್ಧದಷ್ಟು ಜನರು ದೇವಸ್ಥಾನ ಮತ್ತು ಹಳ್ಳಿಗೆ ಪ್ರವೇಶಿಸದಂತೆ ಯೋಚಿಸುತ್ತಿರುವುದರ ಬಗ್ಗೆ ನನಗೆ ಯಾವುದೇ ರೀತಿಯ ಕೋಪ ಇಲ್ಲ. ಬದಲಿಗೆ ಜನರ ಮನಸ್ಥಿತಿ ಬದಲಾಯಿಸುವ ಅವಶ್ಯಕತೆಯಿದೆ. ಜನರಲ್ಲಿ ಕುರುಡು ನಂಬಿಕೆಗಳನ್ನು ನಿರ್ಮೂಲನೆ ಮಾಡುವತ್ತ ನಾವು ಗಮನ ಹರಿಸಬೇಕು. ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಬೇಕು. ಗ್ರಾಮ ಮತ್ತು ಇಡೀ ತಾಲೂಕು ಎಲ್ಲಾ ಅಭಿವೃದ್ದಿಗಾಗಿ ನಾನು ಸ್ಥಳೀಯ ಶಾಸಕರು ಮತ್ತು ಇತರ ಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸುತ್ತೇನೆ” ಎಂದಿದ್ದಾರೆ.

ಜಾತಿ ಪದ್ದತಿಯ ಆಚರಣೆ ದೇಶಕ್ಕೆ ಅಂಟಿದ ದೊಡ್ಡ ಶಾಪ. ಅಶ್ಪೃಷ್ಯತೆ ಆಚರಣೆ ಅಪರಾಧವೆಂದು ಸಂವಿಧಾನ ಘೋಷಿಸಿದೆ. ಇವೆಲ್ಲವನ್ನು ಒಂದೇ ದಿನಕ್ಕೆ ತೊಡೆದುಹಾಕಲು ಸಾಧ್ಯವಿಲ್ಲದಿದ್ದರೂ ಅದಕ್ಕೆ ಪ್ರತಿ ದಿನ, ಪ್ರತಿ ಕ್ಷಣ ಪ್ರಯತ್ನಿಸಬೇಕಿದೆ. ಸರ್ಕಾರ ಇಚ್ಛಾಶಕ್ತಿಯಿಂದ ಈ ಕುರಿತು ಕೆಲಸ ಮಾಡಬೇಕಿದೆ. ಕಾನೂನಿನ ಅನ್ವಯ ಮತ್ತು ಜನಜಾಗೃತಿ ಒಟ್ಟೊಟ್ಟಿಗೆ ಸಾಗಬೇಕಿದೆ ಎಂಬುದನ್ನು ನಾರಾಯಣಸ್ವಾಮಿಯವರ ಪ್ರಕರಣ ಒತ್ತಿ ಹೇಳುತ್ತಿದೆ.


ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. If all these dalith converted to some other community can they enter in the temple and that area. I think if these continues Our people themselves indirectly promote and push them to convert to some other attractive community. In America all our friends who consume Beef, or Pork and many other meet. But they are all allowed to temple what is wrong with them. In India.

  2. ಜಾತೀಯತೆ ಇರುವುದು ಸಣ್ಣ ಸಣ್ಣ ಕಿರು ಜಾತಿಗಳಲ್ಲೇ. ಸುಮ್ಮನೆ ಬ್ರಾಹ್ಮಣರನ್ನು ನಿಂದಿಸುವ ನಿಮ್ಮ ಮನೋಸ್ಥಿತಿಗೆ ಏನನ್ನಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...