Homeಮುಖಪುಟಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

- Advertisement -
- Advertisement -

ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರ ಪ್ಯಾನೆಲ್ ಚರ್ಚೆಯಲ್ಲಿ ಬಂದಿದ್ದ ಅತಿಥಿಯೊಬ್ಬರು ಚರ್ಚೆ ನಡೆಯುತ್ತಿರುವ ಹೊತ್ತಿಗೆ ತಿನ್ನಲು ಪ್ರಾರಂಭಿಸಿದ್ದಾರೆ. ಇದೀಗ ವಿಡಿಯೋ ವೈರಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಅರ್ನಾಬ್ ಅವರನ್ನು ಟ್ರೋಲ್ ಮಾಡಿದ್ದಾರೆ.

ಅರ್ನಾಬ್ ಅವರ ಚಾನೆಲ್ ನಲ್ಲಿ ನಡೆದ ಪ್ಯಾನೆಲ್ ಚರ್ಚೆಯಲ್ಲಿ ಭಾಗವಹಿಸಿದ್ದ ದಕ್ಷಿಣ ಭಾರತದ ನಟಿ ಕಸ್ತೂರಿ ಶಂಕರ್ ಚರ್ಚೆಯ ನಡುವೆ ಆಹಾರ ಸೇವಿಸಿದ್ದರು. ಈ ಬಗ್ಗೆ ನಂತರ ಪ್ರತಿಕ್ರಿಯೆ ನೀಡಿದ ನಟಿ “ನಾನು ಅರ್ನಾಬ್‌ ಮಾತುಗಳನ್ನು 60 ನಿಮಿಷ ಕೇಳಿದೆ, ಆದರೂ ಅವರು ನನ್ನನ್ನು ಮಾತನಾಡಲು ಬಿಡಲಿಲ್ಲ, ಹಾಗಾಗಿ ನಾನು ಅಲ್ಲಿಂದ ಹೊರಟು ಊಟ ಮಾಡಿದೆ. ಆದರೆ ಸ್ಕೈಪ್ ಅನ್ನು ಸೈನ್ ಆಫ್ ಮಾಡಲು ಮರೆತಿದ್ದೆ. ಪ್ರಮಾಧಕ್ಕಾಗಿ ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ! ಯಾರನ್ನೂ ಅವನಾನಿಸುವ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಅರ್ನಾಬ್ ಗೋಸ್ವಾಮಿಯವರನ್ನು ಕಾಲೆಳೆದು ವ್ಯಂಗ್ಯವಾಡಿದ್ದಾರೆ. ಕವಿ ಶಂಕರ್ ಎನ್ ಕೆಂಚನೂರು “ಡಿಬೇಟಲ್ಲಿ ಹೇಗಿರ್ಬೇಕು ಅನ್ನೋದನ್ನ ಈ ಯಮ್ಮ ಚೆನ್ನಾಗಿ ತಿಳ್ಕೊಂಡಿದೆ. ಸುಮ್ನೆ ಟೈಮ್ ವೇಸ್ಟ್ ಮಾಡೋ ಬದಲು ಈ ರೀತಿ ಯೂಸ್ ಮಾಡ್ಕೊಬೇಕು” ಎಂದು ಹೇಳಿದ್ದಾರೆ.

ಗೊಬ್ಬರದ ಡಿಬೇಟಲ್ಲಿ ಹೇಗಿರ್ಬೇಕು ಅನ್ನೋದನ್ನ ಈ ಯಮ್ಮ ಚೆನ್ನಾಗಿ ತಿಳ್ಕೊಂಡಿದೆ ಸುಮ್ನೆ ಟೈಮ್ ವೇಸ್ಟ್ ಮಾಡೋ ಬದಲು ಈ ರೀತಿ ಯೂಸ್ ಮಾಡ್ಕೊಬೇಕು

Posted by Shankar N Kenchanuru on Sunday, July 19, 2020

ನಿಮ್ಮೋ ತಾಯಿ ಎಂಬ ಟ್ರೋಲ್ ಪೇಜ್, ‘ಅರ್ನಾಬ್‌ನ ಕಾರ್ಯಕ್ರಮದಲ್ಲಿ ಏನಾದರೂ ಉಪಯುಕ್ತವಾದದ್ದು ಮಾಡಿದ್ದರೆ ಅದು ಇವರು ಮಾತ್ರ ಎಂದು ವ್ಯಂಗ್ಯವಾಡಿದೆ.


ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...