HomeಮುಖಪುಟPMಕಚೇರಿಯ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಝಡ್‌ಪ್ಲಸ್ ಸೆಕ್ಯೂರಿಟಿ ಪಡೆದಿದ್ದ ವ್ಯಕ್ತಿ ಅರೆಸ್ಟ್

PMಕಚೇರಿಯ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಝಡ್‌ಪ್ಲಸ್ ಸೆಕ್ಯೂರಿಟಿ ಪಡೆದಿದ್ದ ವ್ಯಕ್ತಿ ಅರೆಸ್ಟ್

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಾಗಿದ್ದೇನೆ ಎಂದು ಹೇಳಿಕೊಂಡು ಕೇಂದ್ರಾಡಳಿತ ಪ್ರದೇಶದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಭಾಯ್ ಪಟೇಲ್ ಎಂದು ಗುರುತಿಸಲಾದ ಆರೋಪಿ ತನ್ನನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದಾನೆ. ಕಳೆದ ವರ್ಷ ಅಕ್ಟೋಬರ್‌ನಿಂದ ಕಿರಣ್ ಪಟೇಲ್ ಕಾಶ್ಮೀರ ಕಣಿವೆಗೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಅವರು ಬಂಧನಕ್ಕೊಳಗಾಗುವ ಮೊದಲು ಅವರು ಉರಿಯ ಕಮಾನ್ ಪೋಸ್ಟ್ ಮೂಲಕ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಹತ್ತಿರ ಲಾಲ್ ಚೌಕ್‌ಗೆ ತೆರಳಿದ್ದರು.

ಶ್ರೀನಗರದ ನಿಶಾತ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ಎಫ್‌ಐಆರ್ ಪ್ರಕಾರ, ಕಿರಣ್ ಪಟೇಲ್ “ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮತ್ತು ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ”. ಅವರು ಸರ್ಕಾರಿ ಆತಿಥ್ಯವನ್ನು ಆನಂದಿಸಿದರು, ಝಡ್‌ಪ್ಲಸ್ ಸೆಕ್ಯೂರಿಟಿ ಮತ್ತು ಐಷಾರಾಮಿ ಹೋಟೆಲ್‌ನಲ್ಲಿ ಕೊಠಡಿಯನ್ನು ನೀಡಲಾಗಿತ್ತು.

ಸಧ್ಯ ಕಿರಣ್ ಪಟೇಲ್ ವಿರುದ್ಧ ಐಪಿಸಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಮಯಕ್ಕೆ ಸರಿಯಾಗಿ ಏಕೆ ಹಿಡಿಯಲಿಲ್ಲ ಎಂದು ಪುಲ್ವಾಮಾದ ಡೆಪ್ಯುಟಿ ಕಮಿಷನರ್ (ಡಿಸಿ) ಬಶೀರ್ ಉಲ್ ಹಕ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜುಲ್ಫ್ಕರ್ ಆಜಾದ್ ಅವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಶ್ನೆ ಮಾಡಿದ್ದಾರೆ.

ಇದೀಗ ಗುಜರಾತ್ ಪೊಲೀಸರ ತಂಡವೂ ಈ ತನಿಖೆಗೆ ಸೇರಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಇಲ್ಲಿಯವರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘಟನೆಯ ಬಗ್ಗೆ ಬಾಯಿ ಮುಚ್ಚಿದ್ದಾರೆ. ಆದರೆ ಸಿಐಡಿ ಶಾಖೆಯ ತಂಡವು ಆರೋಪಿಯನ್ನು ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...