Homeಮುಖಪುಟಗರ್ಭೀಣಿಯನ್ನು ಕೋಲಿನಲ್ಲಿ ಹೆಗಲಮೇಲ ಹೊತ್ತು ಆಸ್ಪತ್ರೆಗೆ ದಾಖಲು: ಚತ್ತೀಸ್‌ಘಡದಲ್ಲಿ ಮನಕಲಕುವ ವಿಡಿಯೋ..

ಗರ್ಭೀಣಿಯನ್ನು ಕೋಲಿನಲ್ಲಿ ಹೆಗಲಮೇಲ ಹೊತ್ತು ಆಸ್ಪತ್ರೆಗೆ ದಾಖಲು: ಚತ್ತೀಸ್‌ಘಡದಲ್ಲಿ ಮನಕಲಕುವ ವಿಡಿಯೋ..

- Advertisement -
- Advertisement -

ಚತ್ತೀಸ್‌ಘಡದ ಕೊಂಡಗಾಂವ್‌ನ ಮೋಹನ್‌ಬೆಡಾ ಗ್ರಾಮದ ಆರೋಗ್ಯ ಕಾರ್ಯಕರ್ತರು ಗರ್ಭಿಣಿ ಮಹಿಳೆಯೊಬ್ಬಳನ್ನು ಕೋಲಿನಲ್ಲಿ ಹೆಗಲಮೇಲ ಹೊತ್ತು ಆಸ್ಪತ್ರೆಗೆ ದಾಖಲು ಮಾಡಿರುವ ಮನಕಲಕುವ ಘಟನೆ ಜರುಗಿದೆ.

ರಸ್ತೆ ಸರಿಯಿಲ್ಲದ ನೆಪ ಹೇಳಿ ಆಂಬುಲೆನ್ಸ್ ಬಾರದ  ಹಿನ್ನೆಲೆಯಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿ ಮೂವರು ಗರ್ಭೀಣಿ ಮಹಿಳೆಯನ್ನು ಕೋಲಿನ ಚೋಲಿ ಕಟ್ಟುವ ಮೂಲಕ ಹೆಗಲ ಮೇಲೆ ಹೊತ್ತು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅವರು 102 ನಂಬರ್‌ಗೆ ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಅದು ದೂರದ ಪ್ರದೇಶವಾಗಿದ್ದು, ರಸ್ತೆ ಸರಿಯಿಲ್ಲದ ಕಾರಣ ಆಂಬುಲೆನ್ಸ್ ಅಲ್ಲಿಗೆ ತಲುಪಲು ಸಾಧ್ಯವಾಗಲಿಲ್ಲ. ಹಾಗಾಗಿ ಹೆಗಲ ಮೇಲೆ ಹೊತ್ತು ತರುವ ಪರಿಸ್ಥಿತಿ ಬಂದಿದೆ. ಸದ್ಯಕ್ಕೆ ಆಕೆಗೆ ಹೆರಿಗೆಯಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ ಮತ್ತು ಮಗು ಸುರಕ್ಷಿತವಾಗಿದೆ ಎಂದು ಕೊಂಡಗಾಂವ್‌ನ ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ (ಸಿಎಮ್‌ಹೆಚ್‌ಒ) ಟಿ.ಆರ್ ಕನ್ವಾರ್ ತಿಳಿಸಿದ್ದಾರೆ.

ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಆ ಹಳ್ಳಿಗಳಿಗೆ ಒಂದು ರಸ್ತೆ ಮಾಡಿಸಿಲ್ಲವಾದರೆ ಆಳುವವರು ಏಕೆ ಬದುಕಿದ್ದೀರಿ ಎಂದು ಸಾಮಾಜಿಕ ಜಾಲತಾಣಿಗರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...