Homeಮುಖಪುಟ‘ಭಾರತ ಮತ್ತು ಕಾಂಗ್ರೆಸ್ ನಡುವೆ ಬಿರುಕು ಮೂಡಿದೆ’: ಪಕ್ಷದ ಬಿಕ್ಕಟ್ಟಿನ ಕುರಿತು ಮನೀಶ್‌ ತಿವಾರಿ

‘ಭಾರತ ಮತ್ತು ಕಾಂಗ್ರೆಸ್ ನಡುವೆ ಬಿರುಕು ಮೂಡಿದೆ’: ಪಕ್ಷದ ಬಿಕ್ಕಟ್ಟಿನ ಕುರಿತು ಮನೀಶ್‌ ತಿವಾರಿ

- Advertisement -
- Advertisement -

ಹಿರಿಯ ನಾಯಕರ ರಾಜೀನಾಮೆಯಿಂದ ಕಾಂಗ್ರೆಸ್‌‌ ತತ್ತರಿಸಿರುವ ನಡುವೆಯೆ ಪಕ್ಷದ ಸಂಸದ ಮನೀಶ್ ತಿವಾರಿ ಅವರು ಪಕ್ಷಕ್ಕೆ ‘ಸ್ವಯಂ ಆತ್ಮಾವಲೋಕನ’ ಅಗತ್ಯವಿದ್ದು, ಭಾರತ ಮತ್ತು ಕಾಂಗ್ರೆಸ್ ನಡುವೆ ‘ಬಿರುಕು’ ಕಾಣಿಸಿಕೊಂಡಿದೆ ಎಂದು ಶನಿವಾರ ಹೇಳಿದ್ದಾರೆ.

ಸಾಂಸ್ಥಿಕ ಬದಲಾವಣೆಗಳನ್ನು ಕೋರಿ ಎರಡು ವರ್ಷಗಳ ಹಿಂದೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ಪ್ರಮುಖ ಕಾಂಗ್ರೆಸ್ ನಾಯಕರಲ್ಲಿ ತಿವಾರಿ ಕೂಡ ಒಬ್ಬರಾಗಿದ್ದಾರೆ. ಜಿ-23 ಎಂದು ಕರೆಯಲ್ಪಡುವ ಬಂಡಾಯ ನಾಯಕರಲ್ಲಿ ಇಬ್ಬರು ಕಳೆದ ವಾರ ಪಕ್ಷದ ನಾಯಕತ್ವದ ವಿರುದ್ಧ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ರಾಹುಲ್ ಗಾಂಧಿಯ ಬಗ್ಗೆ ತೀವ್ರ ಟೀಕಾಪ್ರಹಾರ ನಡೆಸಿ ಪಕ್ಷವನ್ನು ತೊರೆದಿದ್ದು, ಮತ್ತೊಬ್ಬ ಹಿರಿಯ ಕಾಂಗ್ರೆಸ್ಸಿಗ ಆನಂದ್ ಶರ್ಮಾ ‘ಸ್ವಾಭಿಮಾನ’ವನ್ನು ಉಲ್ಲೇಖಿಸಿ ಪಕ್ಷದ ಸಮಿತಿಗೆ ರಾಜೀನಾಮೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ANI ಯೊಂದಿಗೆ ಮಾತನಾಡಿದ ತಿವಾರಿ,“ಎರಡು ವರ್ಷಗಳ ಹಿಂದೆ, ನಮ್ಮಲ್ಲಿ 23 ಜನರು ಪಕ್ಷದ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅದರನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದೇವೆ. ಆ ಪತ್ರದ ನಂತರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದೆ. ಕಾಂಗ್ರೆಸ್ ಮತ್ತು ಭಾರತ ಒಂದೇ ರೀತಿ ಯೋಚಿಸುತ್ತಿಲ್ಲ, ವಿಭಿನ್ನವಾಗಿ ಯೋಚಿಸಲು ಪ್ರಾರಂಭಿಸಿದೆ ಎಂದು ತೋರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸಲಿರುವ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್

ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಭೆಯನ್ನು ಉಲ್ಲೇಖಿಸಿ ಮಾತನಾಡಿದ ತಿವಾರಿ ಅವರು,“1885 ರಿಂದ ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪಕಕ್ಕೆ ಆತ್ಮಾವಲೋಕನದ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. 2020ರ ಡಿಸೆಂಬರ್ 20 ರಂದು ಸೋನಿಯಾ ಗಾಂಧಿಯವರ ನಿವಾಸದಲ್ಲಿ ನಡೆದ ಸಭೆಯ ಒಮ್ಮತವನ್ನು ಕಾರ್ಯಗತಗೊಳಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Do Gattbhandhan all together join hands against nationalists and jump in river Ganga and come back fresh living all party past Karmas u hv done to nation since u born..
    No God’s can save u now..
    Truth takes bit time to revolt…
    Better take America trip as relief

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...