Homeಕರ್ನಾಟಕಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋಮುಗಲಭೆಗೆ ಸಂಬಂಧಿಸಿದಂತೆ 112 ಮಂದಿ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೇಸ್ತಾ (19) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದನು. ಡಿಸೆಂಬರ್ 8 ರಂದು ಹೊನ್ನಾವರದ ಶೆಟ್ಟಿಕೆರೆಯ ಕೆರೆಯಲ್ಲಿ ಅವರ ಮೃತದೇಹ ಕಂಡುಬಂದಿತ್ತು. ಇದಕ್ಕೆ ಕೋಮು ಬಣ್ಣ ಕಟ್ಟಿದ್ದರಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಇದೊಂದು ಕೊಲೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಬಜರಂಗದಳ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಬಲಪಂಥೀಯ ಸಂಘಟನೆಗಳು ಮೇಸ್ತಾ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಶಾಸಕ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಇದೀಗ, ಗಲಭೆಗೆ ಸಂಬಂಧಿಸಿದ ಎಲ್ಲಾ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ.

ಮೆಸ್ತಾ ಸಾವಿನ ಪ್ರಕರಣ

ಕಳೆದ ವರ್ಷ, ಕೇಂದ್ರೀಯ ತನಿಖಾ ದಳ (ಸಿಬಿಐ) ಮೆಸ್ತಾ ಪ್ರಕರಣದ ಕುರಿತು ‘ಬಿ’ ರಿಪೋರ್ಟ್ ಸಲ್ಲಿಸಿತು. ಮೇಸ್ತಾ ಸಾವು ಆಕಸ್ಮಿಕ ಎಂದು ಘೋಷಿಸಿದೆ.

ಮೆಸ್ತಾ ಅವರ ದೇಹದಲ್ಲಿ ಯಾವುದೇ ಬಾಹ್ಯ ಗಾಯಗಳು ಅಥವಾ ಹಲ್ಲೆಯ ಗುರುತುಗಳಿಲ್ಲ ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬುದು ಸುಳ್ಳು ಎಂದಿತ್ತು ಸಿಬಿಐ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾಲ್ ಆಜಾದ್, ಆಶಿಫ್ ರಫೀಕ್, ಫೈಝಲ್, ಸಲೀಂ ಮತ್ತು ಇಮ್ತಿಯಾಜ್ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ, ಬಲಪಂಥೀಯ ಸಂಘಟನೆಗಳಾದ ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿಯು ಸಿಬಿಐ ವರದಿಯನ್ನು ಒಪ್ಪಿಕೊಂಡಿಲ್ಲ. ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಮೇಸ್ತಾ ಸಾವು ರಾಜಕೀಯಕ್ಕೆ ಬಳಕೆ

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿತ್ತು.

 ಇದನ್ನೂ ಓದಿರಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ತರಹೇವಾರಿ ಹೇಳಿಕೆಗಳನ್ನು ನೀಡಿದ್ದರು. “ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಜಿಹಾದಿಗಳ ಪರವಾಗಿ ಸರ್ಕಾರ ಹಾಗೂ ಪೊಲೀಸರೇ ನಿಂತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ಘಟನೆಗಳಿಗೆ ರಾಜ್ಯ ಸರ್ಕಾರವೇ ಪ್ರಮುಖವಾದ ಕಾರಣ. ಪ್ರಕರಣವನ್ನು ಮುಚ್ಚಿಹಾಕುವ ಗುಮಾನಿ ಆ ಭಾಗದ ಜನರಿಗೆ ಬರುತ್ತಿದೆ” ಎಂದು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

ಇಡೀ ದೇಶದ ಶೋಷಿತ ಹಾಗೂ ಅಲಕ್ಷಿತ ಸಮುದಾಯಗಳನ್ನು ರಕ್ಷಿಸುತ್ತಿರುವ ಸಂವಿಧಾನವನ್ನೇ ಬದಲಿಸುವುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ, “ಮೇಸ್ತಾನ ಪ್ರತಿ ಹನಿ ರಕ್ತಕ್ಕೂ ನ್ಯಾಯ ದೊರಕಿಸದೆ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...