Homeಕರ್ನಾಟಕಭಾರತ ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿದ್ದರಾಮಯ್ಯ

ಭಾರತ ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿದ್ದರಾಮಯ್ಯ

- Advertisement -
- Advertisement -

ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ್ದ, ಭಾರತ್ ಜೋಡೋ ಯಾತ್ರೆ ಒಂದನೇ ವಾರ್ಷಿಕೋತ್ಸವದ ಅಂಗವಾಗಿ ಎಕ್ಸ್ ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಅವರು, ”ದೇಶ ಉಳಿಸುವ ಕರೆಗೆ ನಾವೆಲ್ಲಾ ಓಗೊಡಬೆಕಾಗಿದೆ” ಎಂದಿದ್ದಾರೆ.

”ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಎಕತೆ, ಸಮಗ್ರತಿಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು ನಮ್ಮ ಹಿರಿಯರು ತ್ಯಾಗ ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ” ಎಂದು ಹೇಳಿದ್ದಾರೆ.

”ಈ ಹೋರಾಟಕ್ಕೆ, ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಪಂಡಿತ ಜವಾಹರಲಾಲ ನೆಹರೂ ಮೌಲಾನ ಅಬುಲ್ ಕಲಮ್ ಆಜಾದ್‌, ವಲ್ಲಭಭಾಯಿ ಪಟೇಲ್, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಹಿರಿಯ ಚೇತನಗಳು ನಡೆಸಿದ ಹೋರಾಟ ಸ್ಫೂರ್ತಿಯಾಗಬೇಕು” ಎಂದು ಅವರು ಹೇಳಿದ್ದಾರೆ.

”ಬನ್ನಿ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲ ತುಂಬೋಣ ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ” ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಜಾತಿ ದೌರ್ಜನ್ಯ ಪ್ರಕರಣ: 120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಿಸಿಲ್ಲ?; ಅಧಿಕಾರಿಗಳಿಗೆ ಸಿಎಂ ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...