Homeಮುಖಪುಟಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

- Advertisement -
- Advertisement -

ಮಹಿಳೆಯರಿಗೆ ಮಾಸಿಕ 2,000 ರೂ ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಆಗಸ್ಟ್‌ನಿಂದ ಹಣ ನೀಡಲು ಸರ್ಕಾರ ತೀರ್ಮಾನಿಸಿದೆ. ಶೀಘ್ರದಲ್ಲೇ ಈ ಯೋಜನೆಗೆ ಆಪ್ ಮೂಲಕ ನೋಂದಣಿ ಆರಂಭವಾಗಲಿದೆ ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ನೋಂದಣಿ ಆರಂಭದ ದಿನಾಂಕ ಪ್ರಕಟಿಸಲಿದ್ದಾರೆ. ಎಷ್ಟು ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಯೋಜನೆ ಜಾರಿ ಮಾಡಲು ಸಾಧ್ಯವೋ ಅಷ್ಟು ಪಾರದರ್ಶಕವಾಗಿ ಮಾಡಲಾಗುವುದು” ಎಂದರು.

“ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎಂದು ಗೃಹಲಕ್ಷ್ಮಿ ಯೋಜನೆಯನ್ನು ಕಾಲಾವಕಾಶ ಪಡೆದು ಜಾರಿ ಮಾಡಲಾಗುವುದು. ಬಾಪು ಕೇಂದ್ರ, ಪಂಚಾಯ್ತಿ ಕೇಂದ್ರ ಹಾಗೂ ಸ್ವಂತ ಮೊಬೈಲ್ ನಲ್ಲಿ ಅರ್ಜಿ ತುಂಬಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮನೆ ಮನೆಗೆ ಹೋಗಿ ಪಕ್ಷಭೇದ ಮರೆತು ಈ ಯೋಜನೆಯ ಅರ್ಜಿ ತುಂಬಬೇಕು” ಎಂದು ಕರೆ ನೀಡಿದರು.

“ಪ್ರತಿ ಬೂತ್ ಮಟ್ಟದಲ್ಲಿ ಓರ್ವ ವಿದ್ಯಾವಂತ ಮಹಿಳೆ ಹಾಗೂ ಪುರುಷ ಪ್ರತಿ ಮನೆಗೆ ಹೋಗಿ ಅರ್ಜಿ ತುಂಬಲಿದ್ದಾರೆ. ಯಾರೂ ಅರ್ಜಿ ತುಂಬಲು ಲಂಚ ಪಡೆಯಬಾರದು. ಲಂಚ ಪಡೆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

“ಪಕ್ಷ ನೀಡಿದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಶಕ್ತಿ ಯೋಜನೆ ಜಾರಿ ಆಗಿದೆ. ಶಕ್ತಿ ಯೋಜನೆ ಜಾರಿಯಾದ ಒಂದು ವಾರದಲ್ಲಿ 3.30 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ಜನ ತೀರ್ಥಯಾತ್ರೆ ಮಾಡುತ್ತಿದ್ದಾರೆ. ಆ ಮೂಲಕ ಧರ್ಮ ಉಳಿಸುವ ಕೆಲಸ ಆಗುತ್ತಿದೆ” ಎಂದು ಹೇಳಿದರು.

“ಇನ್ನು ಗೃಹಜ್ಯೋತಿ ಯೋಜನೆ ನೋಂದಣಿ ಆರಂಭವಾಗಿದೆ. ನೀವೆಲ್ಲರೂ ತಾಳ್ಮೆಯಿಂದ ನೋಂದಣಿ ಮಾಡಿಕೊಳ್ಳಿ, ಆತುರ, ಗಾಬರಿ ಬೇಡ. ಎಲ್ಲರಿಗೂ ಈ ಯೋಜನೆ ಸಿಗಲಿದೆ”ಎಂದರು.

ಇದನ್ನೂ ಓದಿ: ಇದ್ರೀಸ್ ಪಾಶ ಹತ್ಯೆ ಸಮರ್ಥಿಸಿಕೊಂಡ ಕೊಲೆ ಆರೋಪಿಗಳು: ಆಡಿಯೋ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

23 COMMENTS

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣರನ್ನು ವಿದೇಶದಿಂದ ಕರೆತನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

0
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ...