Homeಕರ್ನಾಟಕತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; 'ರೋಹಿತ್ ವೇಮುಲ ಮಸೂದೆ'ಗೆ ಸಚಿವ ಸಂಪುಟ ಅನುಮೋದನೆ

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ರೋಹಿತ್ ವೇಮುಲ ಅವರ ಸಾವಿನ ನಂತರ, ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ತಡೆಗಟ್ಟಲು ‘ರೋಹಿತ್ ಕಾಯ್ದೆ’ (Rohith Act) ಜಾರಿಗೆ ತರಬೇಕೆಂಬ ಬೇಡಿಕೆ ಬಲವಾಗಿ ಕೇಳಿಬಂತು. ಮುಖ್ಯವಾಗಿ, ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಹಲವು ಜನಪರ ಸಂಘಟನೆಗಳು ಈ ಕುರಿತು ಅಭಿಯಾನ ನಡೆಸಿದ್ದವು.

ರೋಹಿತ್ ಕಾಯ್ದೆ ಮೂಲಕ ‘ತಾರತಮ್ಯ ಮುಕ್ತ’ ಕ್ಯಾಂಪಸ್ ನಿರ್ಮಾಣ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಕಿರುಕುಳ ಮತ್ತು ತಾರತಮ್ಯವನ್ನು ಕಾನೂನುಬದ್ಧವಾಗಿ ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಲೇ ಇದ್ದಾರೆ.

ಇದರಿಂದ, ಉನ್ನತ ಶಿಕ್ಷಣ ಪಡೆಯಬೇಕೆಂಬ ಅಂಚಿನಲ್ಲಿರುವ ಸಮುದಾಯಗಳ (ಎಸ್‌ಸಿ/ಎಸ್‌ಟಿ/ಒಬಿಸಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆವರಣದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಜೊತೆಗೆ, ವಿದ್ಯಾರ್ಥಿಗಳ ವಿರುದ್ಧ ಪೂರ್ವಾಗ್ರಹ ಪೀಡಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಿಕ್ಷಕರು ಮತ್ತು ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಬೇಕೆಂಬ ಬೇಡಿಕೆಯು ರೋಹಿತ್ ಸಾವಿನ ಬಳಿಕ ಬಲವಾಗಿ ಕೇಳಿಬಂದಿತ್ತು.

ರೋಹಿತ್ ಕುರಿತು:

ರೋಹಿತ್ ಚಕ್ರವರ್ತಿ ವೇಮುಲ (1989-2016) ಅವರು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಅವರ ಸಾವು ಭಾರತದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಚರ್ಚೆಗಳನ್ನು ಹುಟ್ಟುಹಾಕಿತು.

ಜನವರಿ 30, 1989 ರಂದು ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನಿಸಿದ ರೋಹಿತ್ ಅವರು ರಾಧಿಕಾ ವೇಮುಲ ಮತ್ತು ಮಣಿಕುಮಾರ್ ಅವರ ಪುತ್ರ. ಇವರ ತಾಯಿ ರಾಧಿಕಾ ಅವರು ದಲಿತ ಸಮುದಾಯದವರಾಗಿದ್ದು, ತೀವ್ರ ಬಡತನ ಮತ್ತು ಕಷ್ಟದ ನಡುವೆ ರೋಹಿತ್‌ನನ್ನು ಬೆಳೆಸಿದರು.

ಗುಂಟೂರಿನ ಹಿಂದೂ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಇವರು, ನಂತರ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ (ಪಿಎಚ್‌ಡಿ) ಸಂಶೋಧನೆ ಮಾಡುತ್ತಿದ್ದರು.

ವಿದ್ಯಾರ್ಥಿ ಚಳವಳಿ ಮತ್ತು ಹೋರಾಟ

ಪಿಚ್‌ಎಚ್‌ಡಿ ಮಾಡುತ್ತಲೇ ರೋಹಿತ್ ವಿಶ್ವವಿದ್ಯಾಲಯದಲ್ಲಿ ‘ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ’ (ASA)ಯ ಸಕ್ರಿಯ ಸದಸ್ಯರಾಗಿದ್ದರು. ಅಂಬೇಡ್ಕರ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದ ಇವರು, ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದ ಜಾತಿ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದರು.

ರೋಹಿತ್‌ಗೆ ವಿಜ್ಞಾನ ಮತ್ತು ನಕ್ಷತ್ರಗಳ ಬಗ್ಗೆ ಅಪಾರ ಆಸಕ್ತಿ ಇತ್ತು. ಕಾರ್ಲ್ ಸಗಾನ್ ಅವರಂತೆ ವಿಜ್ಞಾನ ಬರಹಗಾರರಾಗಬೇಕೆಂಬ ಹಂಬಲ ಹೊಂದಿದ್ದರು. ಈ ಬಗ್ಗೆ ಅವರು ಇಂಗ್ಷಿಷ್‌ನಲ್ಲಿ ಬರೆದಿದ್ದ ತಮ್ಮ ಮರಣ ಪತ್ರದಲ್ಲಿ ಉಲ್ಲೇಖಿಸಿದ್ದರು.

ವಿವಾದ ಮತ್ತು ಸಾವು

2015 ರಲ್ಲಿ ಇವರು ಮತ್ತು ಇತರ ನಾಲ್ವರು ದಲಿತ ವಿದ್ಯಾರ್ಥಿಗಳನ್ನು ರಾಜಕೀಯ ಕಾರಣಗಳಿಗಾಗಿ ವಿಶ್ವವಿದ್ಯಾಲಯದಿಂದ ಅಮಾನತುಗೊಳಿಸಿ ಹಾಸ್ಟೆಲ್‌ನಿಂದ ಹೊರಹಾಕಲಾಯಿತು. ದೀರ್ಘಕಾಲದ ಹೋರಾಟ ಮತ್ತು ಮಾನಸಿಕ ಒತ್ತಡದ ನಂತರ, ಜನವರಿ 17, 2016 ರಂದು ರೋಹಿತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು.

ಅವರ ಆತ್ಮಹತ್ಯೆ ಪತ್ರದಲ್ಲಿ “ನನ್ನ ಹುಟ್ಟು ಒಂದು ಅಪಘಾತ” (My birth is a fatal accident) ಎಂದು ಬರೆದಿದ್ದು, ಸಮಾಜದಲ್ಲಿ ವ್ಯಕ್ತಿಯನ್ನು ಕೇವಲ ಒಂದು ಗುರುತಿಗೆ ಸೀಮಿತಗೊಳಿಸುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.

ದೇಶದಾದ್ಯಂತ ರೋಹಿತ್ ಕಾಯ್ದೆಗೆ ಹೆಚ್ಚಿದ ಒತ್ತಡ

ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ವಿರುದ್ಧದ ತಾರತಮ್ಯ ತಡೆಯಲು ‘ರೋಹಿತ್ ಕಾಯ್ದೆ’ ಜಾರಿಗೆ ತರಬೇಕೆಂದು ದೊಡ್ಡ ಚಳವಳಿ ನಡೆಯುತ್ತಿದೆ. ಅವರ ಸಾವು ಭಾರತದ ಇತಿಹಾಸದಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಡೆದ ಅತಿದೊಡ್ಡ ಹೋರಾಟಗಳಲ್ಲಿ ಒಂದಕ್ಕೆ ಕಾರಣವಾಯಿತು.

ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಬೇಕು ಎಂದು ‘ರೋಹಿತ್ ಕಾಯ್ದೆ’ಗಾಗಿ ಅಭಿಯಾನದ ಸದಸ್ಯರು ಕರ್ನಾಟಕ ಸರ್ಕಾರಕ್ಕೆ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ 2025’ ಕರಡು ಸಲ್ಲಿಸಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು ರೋಹಿತ್ ಕಾಯ್ದೆ ಜಾರಿ ಮಾಡುವಂತೆ ಮನವಿ ಮಾಡಿದ್ದರು.

ಕರ್ನಾಟಕದ ರೋಹಿತ್ ವೇಮುಲ ಕಾಯ್ದೆ 2025: ಸಂಕ್ಷಿಪ್ತ ನೋಟ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ/ಎಸ್‌ಟಿ  ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ಮೇಲೆ ನಡೆಯುವ ಜಾತಿ ತಾರತಮ್ಯವನ್ನು ತಡೆಗಟ್ಟಲು ‘ಕರ್ನಾಟಕ ರೋಹಿತ್ ವೇಮುಲ ಕಾಯ್ದೆ-2025’ ಅನ್ನು ‘ರೋಹಿತ್ ಕಾಯ್ದೆಗಾಗಿ ಅಭಿಯಾನ’ ಗುಂಪಿನ ಸದಸ್ಯರು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಮತ್ತು ಘನತೆಯನ್ನು ಎತ್ತಿಹಿಡಿಯುವ ಉದ್ದೇಶವನ್ನು ಹೊಂದಿದೆ.

ಈ ಕಾನೂನು ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಇದರಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಬೋಧಕರು ಮತ್ತು ಗುತ್ತಿಗೆ ಆಧಾರಿತ ಸಿಬ್ಬಂದಿಗಳೂ ಸೇರಿದ್ದಾರೆ.

ನೇರ ಮತ್ತು ಪರೋಕ್ಷ ತಾರತಮ್ಯಗಳನ್ನು ಈ ಕಾಯ್ದೆ ಗುರುತಿಸುತ್ತದೆ. ಉದಾಹರಣೆಗೆ, ಹಾಸ್ಟೆಲ್‌ಗಳಲ್ಲಿ ಆಹಾರದ ಆಧಾರದ ಮೇಲೆ ಪ್ರತ್ಯೇಕಿಸುವುದು, ಉಪನಾಮ ಕೇಳಿ ತಾರತಮ್ಯ ಮಾಡುವುದು ಮತ್ತು ಮೀಸಲಾತಿ ಬಗ್ಗೆ ಅವಹೇಳನಕಾರಿ ಕಾಮೆಂಟ್‌ ಮಾಡುವುದನ್ನು ಇದು ಅಪರಾಧವೆಂದು ಪರಿಗಣಿಸುತ್ತದೆ.

ಪ್ರತಿ ಶಿಕ್ಷಣ ಸಂಸ್ಥೆಯು ತಾರತಮ್ಯದ ದೂರುಗಳನ್ನು ವಿಚಾರಿಸಲು ಆಂತರಿಕ ಸಮಿತಿಯನ್ನು ಹೊಂದಿರಬೇಕು.

ಸಾಂಸ್ಥಿಕ ಮಟ್ಟದಲ್ಲಿ ತಾರತಮ್ಯ ನಡೆದಾಗ ಸಂತ್ರಸ್ತರು ನೇರವಾಗಿ ಹೈಕೋರ್ಟ್ ಅಥವಾ ಜಿಲ್ಲಾ ನ್ಯಾಯಾಲಯಗಳನ್ನು ಸಂಪರ್ಕಿಸಬಹುದು.

ದಂಡ ಮತ್ತು ಶಿಕ್ಷೆ: ತಾರತಮ್ಯ ಎಸಗಿದ ವ್ಯಕ್ತಿಗಳಿಗೆ ಎಚ್ಚರಿಕೆ ನೀಡುವಿಕೆ, ದಂಡ ವಿಧಿಸುವುದು, ಅಮಾನತು ಅಥವಾ ವಜಾಗೊಳಿಸುವಂತಹ ಕ್ರಮಗಳನ್ನು ಕೈಗೊಳ್ಳಬಹುದು. ನಿಯಮ ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರವು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಬಹುದು ಅಥವಾ ಅನುದಾನವನ್ನು ತಡೆಹಿಡಿಯಬಹುದು.

ಕಾಯ್ದೆ ಪ್ರಕಾರ, ವಿದ್ಯಾರ್ಥಿಗಳು ಜಾತಿ ಆಧಾರಿತ ಪೂರ್ವಾಗ್ರಹಗಳನ್ನು ವಿರೋಧಿಸಲು ಸಂಘಟನೆಗಳನ್ನು ಮಾಡಿಕೊಳ್ಳುವ ಮತ್ತು ತಮ್ಮ ಗುರುತಿನ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ.

ಈ ಕಾಯ್ದೆಯು ಶಿಕ್ಷಣ ಸಂಸ್ಥೆಗಳನ್ನು ಕೇವಲ ಕಲಿಕೆಯ ಕೇಂದ್ರಗಳನ್ನಾಗಿ ಮಾತ್ರವಲ್ಲದೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಪೋಷಿಸುವ ಸ್ಥಳಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...