Homeರಾಜಕೀಯಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

ಪಕ್ಷದ ಮಹಿಳಾ ನಾಯಕಿಗೆ ಅಶ್ಲೀಲ ನಿಂದನೆ, ಕೊಲೆ ಬೆದರಿಕೆ ಹಾಕಿದ ತಮಿಳುನಾಡು ಬಿಜೆಪಿ ನಾಯಕ

- Advertisement -
- Advertisement -

ತಮ್ಮದೇ ಪಕ್ಷದ ಅಲ್ಪಸಂಖ್ಯಾತ ವಿಭಾಗದ ನಾಯಕಿಗೆ ತಮಿಳುನಾಡು ಬಿಜೆಪಿಯ ಒಬಿಸಿ ಮೋರ್ಚಾ ನಾಯಕ ಸೂರ್ಯ ಶಿವ ಅವರು ಫೋನ್‌ ಮೂಲಕ ಅಶ್ಲೀಲ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆದರಿಸುವ ಆಡಿಯೊ ವೈರಲ್‌ ಆಗುತ್ತಿದ್ದಂತೆ ರಾಜ್ಯ ಬಿಜೆಪಿ ಅವರನ್ನು ಪಕ್ಷದ ಕಾರ್ಯಕ್ರಮಗಳಿಂದ ನಿಷೇಧಿಸಿದೆ.

ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥೆ ಡೈಸಿ ಸರನ್ ನಡುವೆ ನಡೆದ ಮಾತುಕತೆಯ ಆಡಿಯೊದಲ್ಲಿ, ಸೂರ್ಯ ಶಿವ ಅವರು ಡೈಸಿ ಅವರಿಗೆ ಜೀವ ಬೆದರಿಕೆ ಹಾಕುವುದು ಮತ್ತು ಅವರ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುವುದು ದಾಖಲಾಗಿದೆ. ಡಿಎಂಕೆ ರಾಜ್ಯಸಭಾ ಸಂಸದ ತಿರುಚಿ ಶಿವ ಅವರ ಮಗನಾಗಿರುವ ಸೂರ್ಯ ಶಿವ ಈ ವರ್ಷದ ಆರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು, ನಂತರ ರಾಜ್ಯದ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೂರ್ಯ ಶಿವ ಅವರು ಡೈಸಿ ಅವರ ವಿರುದ್ಧ ಹಲವಾರು ಲೈಂಗಿಕ ನಿಂದನೆಗಳನ್ನು ಮಾಡಿದ್ದು ಆಡಿಯೊದಲ್ಲಿ ದಾಖಲಾಗಿದೆ. ಡೈಸಿ ಅವರನ್ನು ಚೆನ್ನೈನಲ್ಲಿ ವಾಸಿಸಲು ಬಿಡುವುದಿಲ್ಲ, ‘ಇದನ್ನು ಒಂದು ತಿಂಗಳಲ್ಲಿ ಮಾಡಿ ತೋರಿಸುತ್ತೇನೆ’ ಎಂದು ಬೆದರಿಸುವುದು ಕೇಳುತ್ತದೆ. ತನ್ನ ಜಾತಿಯ ಗುಂಪಿನ ಬೆಂಬಲವನ್ನು ಬಳಸಿ ಇದನ್ನು ಮಾಡುತ್ತೇನೆ ಎಂದು ಅವರು ಎಚ್ಚರಿಸಿದ್ದು ಆಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

“ಈ ಬಗ್ಗೆ ನೀವು ಪಕ್ಷದ ಯಾರಿಗಾದರೂ ದೂರು ನೀಡಬಹುದು. ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಥವಾ ಅಮಿತ್ ಶಾ ಅಥವಾ ಮೋದಿಗೆ ದೂರು ನೀಡುತ್ತೀರಾ? ನಿಮಗೆ ಇಷ್ಟ ಬಂದವರಿಗೆ ದೂರು ನೀಡಿ” ಎಂದು ಹೇಳುವುದು ಆಡಿಯೊದಲ್ಲಿ ದಾಖಲಾಗಿದೆ.

ಆಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿಕೆ ನೀಡಿ, “ಏಳು ದಿನಗಳೊಳಗೆ ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲು ಏಕವ್ಯಕ್ತಿ ಶಿಸ್ತು ಸಮಿತಿಯನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ. ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ಸೂರ್ಯ ಶಿವ ಅವರಿಗೆ ಸಲಹೆ ನೀಡಿದ್ದಾರೆ.

ಈ ನಡುವೆ ನವೆಂಬರ್ 22 ರಂದು ನೀಡಿದ್ದ ಪ್ರತ್ಯೇಕ ಹೇಳಿಕೆಯಲ್ಲಿ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿಯ ಕಲೆ ಮತ್ತು ಸಂಸ್ಕೃತಿ ವಿಭಾಗದ ಮಾಜಿ ಅಧ್ಯಕ್ಷೆ ನಟಿ ಗಾಯತ್ರಿ ರಘುರಾಮ್ ಅವರನ್ನು ಅಮಾನತುಗೊಳಿಸಿದ್ದಾಗಿ ಘೋಷಿಸಿದ್ದಾರೆ. “ಪದೇ ಪದೇ ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷಕ್ಕೆ ಅಪಖ್ಯಾತಿ ತಂದ ಆಧಾರದ ಮೇಲೆ ಗಾಯತ್ರಿ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಅವರ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲಲು ಬಂದೂಕು ಬಳಸಬೇಕು: ಬಿಜೆಪಿ ಯುವ ಮುಖಂಡನ ವಿಡಿಯೊ ವೈರಲ್‌

ಅಮಾನತುಗೊಂಡ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗಾಯತ್ರಿ, ತಮಿಳುನಾಡು ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದು, “ಸತ್ಯವನ್ನು ಮಾತನಾಡಿದ್ದಕ್ಕಾಗಿ ನನ್ನನ್ನು ಅಮಾನತುಗೊಳಿಸಲಾಗಿದೆಯೆ ಹೊರತು ಬೇರೇನೂ ಇಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...