ಬೆಂಗಳೂರಿನಲ್ಲಿ ಭೀಕರ ಅಪಘಾತ: ಡಿಎಂಕೆ ಶಾಸಕನ ಪುತ್ರ, ಸೊಸೆ ಸೇರಿ 7 ಮಂದಿ ಬಲಿ | Naanu gauri

ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್‌ ಅವರ ಪುತ್ರ ಮತ್ತು ಸೊಸೆ ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮುಂಜಾನೆ 1.45ರ ಸುಮಾರಿಗೆ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಬೆಂಗಳೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು, ಫುಟ್‌ಪಾತ್ ಮೇಲೆ ಹತ್ತಿ ಕಂಬಕ್ಕೆ ಡಿಕ್ಕಿಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

“ಕಾರಿನಲ್ಲಿದ್ದ ಯಾರೂ ಕೂಡ ಸೀಟ್‌‌ ಬೆಲ್ಟ್‌ ಧರಿಸಿರಲಿಲ್ಲ. ಕಾರು ಅಪಘಾತಗೊಂಡಾಗ ಏರ್ ಬ್ಯಾಗ್ ಸಹ ಓಪನ್ ಆಗಿಲ್ಲ. ಇದು ಅವರ ಸಾವಿಗೆ ಕಾರಣವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಮೃತಪಟ್ಟವರನ್ನು ಹೊಸೂರು ಮೂಲದ ಕರುಣಾಸಾಗರ್, ಅವರ ಪತ್ನಿ ಬಿಂದು, ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ, ಡಾ.ಧನುಶಾ, ಹುಬ್ಬಳ್ಳಿಯ ರೋಹಿತ್ ಮತ್ತು ಹರ್ಯಾಣದ ಉತ್ಸವ್ ಎಂದು ಗುರುತಿಸಲಾಗಿದೆ.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದರೆಯೇ? ಎಂಬುದು ಪರೀಕ್ಷೆ ಬಳಿಕ ತಿಳಿಯಲಿದೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಬೆಂಗಳೂರಿನ ಆಡುಗೋಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

LEAVE A REPLY

Please enter your comment!
Please enter your name here