Homeಮುಖಪುಟವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

ವಿಡಿಯೋ| ಈ ದುರಂತ‌ ಚಿತ್ರದ ಹಿಂದಿದೆ ಹೃದಯಹಿಂಡುವ ನೋವು

- Advertisement -
- Advertisement -

ಇದೊಂದು ದುರಂತ ಚಿತ್ರ. ಈಗಾಗಲೇ ಟ್ರಕ್‌ ಒಂದು ಮೂಟೆಗಳಿಂದ ಅರ್ಧ ತುಂಬಿದೆ. ಅದರ ಮೇಲೆ ಒಂದಷ್ಟು ಜನ ಹತ್ತಿ ನಿಂತಿದ್ದಾರೆ. ಇನ್ನು ಜನ ಹತ್ತುತ್ತಿದ್ದಾರೆ. ಯುವಕನೊಬ್ಬ ಟ್ರಕ್‌ನ ಅರ್ಧಭಾಗದಲ್ಲಿ ನಿಂತು ಒಂದು ಕೈಯಲ್ಲಿ ಟ್ರಕ್‌ಗೆ ಕಟ್ಟಿರುವ ಹಗ್ಗ ಹಿಡಿದುಕೊಂಡು ಇನ್ನೊಂದು ಕೈಯಿಂದ ಮಗುವೊಂದನ್ನು ಎತ್ತಿ ಟ್ರಕ್‌ ಮೇಲಿಡುತ್ತಿರುವ ಚಿತ್ರ ಎಂತವರ ಮನಸ್ಸನು ಕದಲಿಸುಬಿಡುತ್ತದೆ. ನಿನ್ನೆ ಇಂಟರ್ನೆಟ್‌ ತುಂಬೆಲ್ಲಾ ಈ ಚಿತ್ರ ಹರಿದಾಡಿದ್ದು ವಲಸೆ ಕಾರ್ಮಿಕರ ಬವಣೆಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿತ್ತು.

ಈ ಚಿತ್ರವು ಕೆಲಸವಿಲ್ಲದೇ, ಊಟವಿಲ್ಲದೇ ವಾಪಸ್‌ ತಮ್ಮೂರಿಗೆ ಹೊರಟ ವಲಸೆ ಕಾರ್ಮಿಕರ ಕರಾಳ ಸ್ಥಿತಿಯನ್ನು ನೆನಪಿಸುತ್ತದೆ. ಈ ಚಿತ್ರವನ್ನು ಚತ್ತೀಸ್‌ಘಡದಲ್ಲಿ ತೆಗೆಯಲಾಗಿದೆ. ಅದರ ವಿಡಿಯೋ ನೋಡಿದ್ದಲ್ಲಿ ಮತ್ತಷ್ಟು ದುರಂತ ನಮಗೆ ಕಾಣುತ್ತದೆ.

ಸುಮಾರು 20 ಸೆಕೆಂಡುಗಳ ಕ್ಲಿಪ್‌ನಲ್ಲಿ, ಆ ವ್ಯಕ್ತಿ ಮಗುವನ್ನು ಟ್ರಕ್‌ನಲ್ಲಿರುವ ಮತ್ತೊಬ್ಬ ಕಾರ್ಮಿಕನಿಗೆ ಹಸ್ತಾಂತರಿಸುತ್ತಾನೆ. ಆನಂತರ ಆತನು ಟ್ರಕ್‌ ಏರುತ್ತಾನೆ. ಅದೇ ಸಂದರ್ಭದಲ್ಲಿ ಹಲವಾರು ಮಹಿಳೆಯರು ಸಹ ಟ್ರಕ್‌ ಏರುತ್ತಾರೆ. ಸೀರೆ ತೊಟ್ಟಿರುವ ಮಹಿಳೆಯೊಬ್ಬಳು ಟ್ರಕ್‌ ಏರಲು ಹರಸಾಹಸಪಡುತ್ತಾಳೆ. ಕೊನೆಯಲ್ಲಿ ಆರು ತಿಂಗಳಿಗೂ ಕಡಿಮೆ ವಯಸ್ಸಿನ ಪುಟ್ಟ ಮಗುವನ್ನು ಸಹ ಒಂದೇ ಕೈಯಲ್ಲಿ ಎತ್ತಿ ಟ್ರಕ್‌ನಲ್ಲಿಡುವ ದುರಂತ ದೃಶ್ಯ ಮನಕಲಕುತ್ತದೆ.

ಅವರೆಲ್ಲರೂ ಜಾರ್ಖಂಡ್‌ ರಾಜ್ಯದ ವಲಸೆ ಕಾರ್ಮಿಕರಾಗಿದ್ದು ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದವರು. ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಅವರು ತಮ್ಮ ಸ್ವಂತ ಊರು ತಲುಪಲು ಹೆಣಗಾಡಿದ್ದಾರೆ. ತೆಲಂಗಾಣದಿಂದ ಕಾಲ್ನಡಿಗೆಯಲ್ಲಿ ಹೊರಟ ಅವರು ಚತ್ತೀಸ್‌ಘಡದಲ್ಲಿದ್ದಾಗ ಈ ಟ್ರಕ್‌ ಸಿಕ್ಕಿದೆ. ಈ ಕುರಿತು ಅವರು ಹೇಳಿದಿಷ್ಟು.. “ನಾವು ಏನು ಮಾಡಲು ಸಾಧ್ಯವಿಲ್ಲ … ನಾವು ಅಸಹಾಯಕರಾಗಿದ್ದೇವೆ. ನಾವು ಜಾರ್ಖಂಡ್‌ಗೆ ಹೋಗಬೇಕಾಗಿದೆ. ಬೇರೆ ದಾರಿಯಿಲ್ಲ” ಎಂದು ವೃದ್ಧೆಯೊಬ್ಬರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ ವಿಶೇಷ ರೈಲುಗಳ ಬಗ್ಗೆ ಅವರಲ್ಲಿ ಕೇಳಿದಾಗ, “ಆ ಬಗ್ಗೆ ಯಾವುದೇ ಮಾಹಿತಿ ನಮಗೆ ಸಿಗಲಿಲ್ಲ” ಎಂದಿದ್ದಾರೆ.

ಈ ಗೊಂದಲವನ್ನು ಗಮನಿಸುತ್ತಾ ಟ್ರಕ್ ಹತ್ತಿರ ನಿಂತಿದ್ದ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಯೊಬ್ಬರು “ಬೇರೆ ಯಾವುದೇ ಸಾರಿಗೆ ಮಾರ್ಗಗಳಿಲ್ಲ. ನಾನು ಸಾರಿಗೆ ಇಲಾಖೆಯಿಂದ ಬಂದಿದ್ದೇನೆ ಆದರೆ ನಾನು ಬಸ್‌ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಆಡಳಿತವು ಅವರಿಗೆ ವಿಶೇಷ ಬಸ್ಸುಗಳನ್ನು ಒದಗಿಸಬೇಕಿದೆ” ಎಂದಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿದಾಗಿನಿಂದ ವಲಸಿಗರು ತಮ್ಮ ಹಳ್ಳಿಗಳಿಗೆ ಹಿಂತಿರುಗಲು ದೊಡ್ಡ ನಗರಗಳನ್ನು ತೊರೆಯುತ್ತಿದ್ದಾರೆ. ಅವರಲ್ಲಿ ಹಲವರು ನೂರಾರು-ಸಾವಿರಾರು ಕಿಲೋಮೀಟರ್ ನಡೆದು ಹೋಗಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಯಾಣವನ್ನು ಪೂರ್ಣಗೊಳಿಸುವ ಮೊದಲೇ ಸಾವನ್ನಪ್ಪಿದ್ದಾರೆ.

ಕಳೆದ ವಾರ, 20 ಜನರ ಗುಂಪಿನಲ್ಲಿ 16 ವಲಸಿಗರು ಮಹಾರಾಷ್ಟ್ರದಲ್ಲಿ ಸರಕು ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಹರಿದು ಮೃತಪಟ್ಟಿದ್ದಾರೆ. ಭಾನುವಾರ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸಿಗರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪುವಂತೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದು ಕಾರ್ಮಿಕರ ಬವಣೆಯನ್ನು ಹೆಚ್ಚಿಸಿದ್ದು, ಎಲ್ಲೆಲ್ಲಿಯೂ ಅವರ ನೋವಿನ ಚಿತ್ರಗಳು ಹರಿದಾಡುತ್ತಿವೆ.

ಕೃಪೆ: ಎನ್‌ಡಿಟಿವಿ


ಇದನ್ನೂ ಓದಿ:  ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...