Homeಮುಖಪುಟಸುನಾಮಿ ಬರಲಿದೆ: ಕೊರೋನ ವೈರಸ್, ಆರ್ಥಿಕತೆಯ ಬಗ್ಗೆ ರಾಹುಲ್ ಗಾಂಧಿ ಎಚ್ಚರಿಕೆ

ಸುನಾಮಿ ಬರಲಿದೆ: ಕೊರೋನ ವೈರಸ್, ಆರ್ಥಿಕತೆಯ ಬಗ್ಗೆ ರಾಹುಲ್ ಗಾಂಧಿ ಎಚ್ಚರಿಕೆ

- Advertisement -
- Advertisement -

“ಸುನಾಮಿ ಬರಲಿದೆ, ಭಾರತವು ಕೊರೋನ ವೈರಸ್ ಗಾಗಿ ಮಾತ್ರವಲ್ಲದೆ ಆರ್ಥಿಕ ವಿನಾಶಕ್ಕೂ ತನ್ನನ್ನು ಸಿದ್ಧಪಡಿಸಿಕೊಳ್ಳಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಕೊರೊನ ವೈರಸ್‌ಗೆ ಭಾರತದಲ್ಲಿ 126 ಜನರು ಒಳಗಾಗಿದ್ದಾರೆ ಹಾಗೂ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ರಾಹುಲ್‌ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

“ಭಾರತೀಯ ಆರ್ಥಿಕತೆಯು ಧ್ವಂಸವಾಗಲಿದೆ. ದೇಶವು ಅನುಭವಿಸುವ ಕಷ್ಟದ ಬಗ್ಗೆ ನಿಮಗೇನೂ ಗೊತ್ತಿಲ್ಲ, ಅದು ಸುನಾಮಿಯಂತೆ ಬರಲಿದೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಅಂಡಮಾನ್ ನಿಕೋಬಾರ್ ದ್ವೀಪಗಳಿಗೆ ಸುನಾಮಿ ಬಂದದ್ದನ್ನು ಉದಾಹರಣೆ ನೀಡಿದ ರಾಹುಲ್ ಗಾಂಧಿ “ನಾನು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ… ಆದರೆ ಅವರು ಮೂರ್ಖರಾಗಿದ್ದಾರೆ, ಏನು ಮಾಡಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟತೆಯೇ ಇಲ್ಲ. ಭಾರತವು ಕೊರೋನಾ ವೈರಸ್ ಗಾಗಿ ಮಾತ್ರ ಅಲ್ಲ, ಬರಲಿರುವ ಆರ್ಥಿಕ ವಿನಾಶಕ್ಕೂ ತನ್ನನ್ನು ತಾನು ಸಿದ್ಧಪಡಿಸಿಕೊಳ್ಳಬೇಕು”ಎಂದು ಹೇಳಿದರು.

“ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ … ವಿಷಾದದಿಂದ ಹೇಳುತ್ತಿದ್ದೇನೆ ಮುಂದಿನ ಆರು ತಿಂಗಳಲ್ಲಿ ನಮ್ಮ ಜನರು ಸಹಿಸಲಾಗದ ನೋವನ್ನು ಅನುಭವಿಸಲಿದ್ದಾರೆ” ಎಂದು ಹೇಳಿದರು.

ಕಳೆದ ವಾರ ಭಾರತದ ಮಾರುಕಟ್ಟೆ ತೀವ್ರ ಹಿನ್ನಡೆ ಅನುಭವಿಸಿದಾಗ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿ “ಮೂರ್ಖತನದಲ್ಲಿರುವ ಸರಕಾರ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...