Homeಮುಖಪುಟನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

ನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

- Advertisement -
- Advertisement -

ಸಂವಿಧಾನದ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಂಸಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಮಾರ್ಚ್ 28 ಹಾಗೂ 29ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಸಿಐಟಿಯು (ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌) ಮುಷ್ಕರಕ್ಕೆ ಕರೆ ನೀಡಿದೆ.

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಗಾಗಿ ಆಗ್ರಹಿಸಲಾಗಿದ್ದು, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬೇಡಿಕೆಗಳು

  • ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ ರೂ. 7500 ನೇರ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೋರೇಟ್‌ ಬಂಡವಾಳ ಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.
  • ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಬೇಕು. ಕೋವಿಡ್‌ ಲಾಕ್‌ಡೌನ್‌ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರ ಒದಗಿಸಬೇಕು.
  • ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನ ಅನುದಾನ ಬಜೆಟ್‌ನಲ್ಲಿ ನೀಡಬೇಕು.
  • ಕೋವಿಡ್‌ ಎದುರಿಸಲು ಕೆಲಸ ಮಾಡುತ್ತಿರುವ ಮಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ  ಮತ್ತು ವಿಮಾ ಸೌಲಭ್ಯ ಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು.
  • ರಾಷ್ಟ್ರೀಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಇತರೆ ನಿರ್ಣಾಯಕ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  • ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್‌ ಸ್ಥಾಪಿಸಬೇಕು.
  • ರೂ. 26 ಸಾವಿರ ಸಮಾನ ಕನಿಷ್ಠ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.

ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...