Homeಮುಖಪುಟಪೊಲೀಸ್‌ ಲಾಠಿಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಶಾಸಕ

ಪೊಲೀಸ್‌ ಲಾಠಿಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಶಾಸಕ

- Advertisement -
- Advertisement -

ಇತ್ತೀಚೆಗಷ್ಟೇ ಹುಲಿಯನ್ನು ಹೊಡೆದು ಕೊಂದಿರುವುದಾಗಿ ಹೇಳಿಕೊಂಡಿದ್ದ ಬುಲ್ಧಾನಾದ ಶಿವಸೇನೆಯ ಶಾಸಕ ಸಂಜಯ್ ಗಾಯಕ್ವಾಡ್ ಅವರು ಇದೀಗ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದು, ಪೊಲೀಸರ ಲಾಠಿಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಕುರಿತು ವೈರಲ್‌ ವಿಡಿಯೋದಲ್ಲಿ ಶಿವಸೇನೆಯ ಶಾಸಕ ಸಂಜಯ್ ಗಾಯಕ್ವಾಡ್ ಯುವಕನ ಮೇಲೆ ಲಾಠಿಯಿಂದ ಹಲ್ಲೆ ನಡೆಸಿರುವುದು ಸೆರೆಯಾಗಿದೆ. ಮೊದಲು ಯುವಕನನ್ನು ಎಳೆದೊಯ್ದು ಪೊಲೀಸ್‌ ಓರ್ವ ಸಾರ್ವಜನಿಕವಾಗಿ ಲಾಠಿಯಿಂದ ಹಲ್ಲೆ ನಡೆಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸ್‌ ಅಧಿಕಾರಿಯಿಂದ ಲಾಠಿ ಕಸಿದುಕೊಂಡು ಶಾಸಕ ಸಂಜಯ್ ಗಾಯಕ್ವಾಡ್ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂರಾರು ಜನರು ಕೂಡ ಜಮಾಯಿಸಿದ್ದು, ಘಟನೆಯ ವಿಡಿಯೋವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಂಜಯ್ ಗಾಯಕ್ವಾಡ್, ಆ ವಿಡಿಯೊದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸುತ್ತಿರುವುದು ನಾನೇ, ಅನುಚಿತವಾಗಿ ವರ್ತಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸುವ ಪರಿಸ್ಥಿತಿ ಎದುರಾಯಿತು. ಘಟನೆ ನಡೆದಿರುವುದು ನಿಜ ಎಂದು ಶಾಸಕರು ಒಪ್ಪಿಕೊಂಡಿದ್ದಾರೆ. ಆದರೆ ಸಾರ್ವಜನಿಕವಾಗಿ ಯುವಕನಿಗೆ ಲಾಠಿಯಿಂದ ಅಮಾನುಷವಾಗಿ ಥಳಿಸುವ ಅಧಿಕಾರ ಶಾಸಕರಿಗೆ ಇದೆಯಾ ಎಂಬ ಪ್ರಶ್ನೆ ಮೂಡಿದೆ.

ಘಟನೆ ಶಿವ ಜಯಂತಿಯ ದಿನದಂದು ಸಂಭವಿಸಿದೆ. ಮದ್ಯಪಾನ ಮಾಡಿದ್ದ ಹಾಗೂ ಗಾಂಜಾ ಸೇವಿಸಿದ್ದ ಇಬ್ಬರು ವ್ಯಕ್ತಿಗಳು ಮಹಿಳೆಯೊಬ್ಬರ ಮೇಲೆ ರೇಜರ್‌ನಿಂದ ಹಲ್ಲೆ ನಡೆಸಲು ಯತ್ನಿಸುತ್ತಿದ್ದಾರೆ. ಈ ಸಂದರ್ಭ ಮಧ್ಯಪ್ರವೇಶಿಸಿದ ನಾನು ಅವರು ಹಾಗೆ ಮಾಡದಂತೆ ತಡೆಯಲು ಅವರ ಮೇಲೆ ಹಲ್ಲೆ ನಡೆಸಬೇಕಾಯಿತು ಎಂದು ಗಾಯಕ್ವಾಡ್ ಸ್ಪಷ್ಟನೆ ನೀಡಿದ್ದಾರೆ.

ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಪದೇ ಪದೇ ವಿವಾದಗಳಿಗೆ ಸಿಲುಕುತ್ತಿದ್ದು, ಇತ್ತೀಚೆಗೆ, ಬೇಟೆಯಾಡಿದ ಹುಲಿ ಉಗುರನ್ನು ತಮ್ಮ ಕುತ್ತಿಗೆಗೆ ಹಾಕಿಕೊಂಡು, ನಾನು 1987ರಲ್ಲಿ ಹುಲಿಯೊಂದನ್ನು ಬೇಟೆಯಾಡಿದ್ದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು, ನಂತರ ಅರಣ್ಯ ಇಲಾಖೆ ಅವರಲ್ಲಿದ್ದ ಹುಲಿ ಉಗುರನ್ನು ವಶಪಡಿಸಿಕೊಂಡು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಇದನ್ನು ಓದಿ: ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...