Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...