Homeಮುಖಪುಟಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು ತೀವ್ರ ಹೆರಿಗೆ ನೋವಿನ ಕಾರಣಕ್ಕೆ ಸಂಬಂಧಿಕರು ಭಿಂಡ್ ಜಿಲ್ಲೆಯ ರಾಜುಪುರ ಗ್ರಾಮದಿಂದ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ಸಿಬ್ಬಂದಿ ಲಂಚ ಕೇಳಿ, ಅದನ್ನು ಪಾವತಿಸಲು ಸಾಧ್ಯವಿರದ ಬಡ ಮಹಿಳೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಹೊರ ಹಾಕಿದ್ದರು. ಅಲ್ಲಿಂದ ಹೊರಗೆ ಬಂದ ಮೇಲೆ ಗರ್ಭಿಣಿ ರಸ್ತೆಯಲ್ಲೇ ಕುಸಿದು ಬಿದ್ದು, ಆರು ತಿಂಗಳ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

“ನಾವು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿರುವ ನರ್ಸಿಂಗ್ ಸಿಬ್ಬಂದಿ, ನನ್ನ ಸೊಸೆಗೆ ಚಿಕಿತ್ಸೆ ನೀಡುವ ಬದಲು, ಚಿಕಿತ್ಸೆ ಪ್ರಾರಂಭಿಸುವ ಮೊದಲು ನಮ್ಮಿಂದ 5000 ರೂಪಾಯಿ ಲಂಚ ಕೇಳಿದರು. ನಾವು ತೀರಾ ಬಡವರಾಗಿದ್ದರಿಂದ ಅದನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಹೀಗಾಗಿ ಶುಶ್ರೂಷಕ ಸಿಬ್ಬಂದಿ ನನ್ನ ಸೊಸೆ ಮತ್ತು ನಮ್ಮೆಲ್ಲರನ್ನೂ ಆಸ್ಪತ್ರೆಯಿಂದ ಹೊರದಬ್ಬಿ, ಆಸ್ಪತ್ರೆಯ ಹೊರಗೆ ಅಲ್ಟ್ರಾಸೌಂಡ್ ಪರೀಕ್ಷೆಯನ್ನು ಮಾಡುವಂತೆ ಹೇಳಿದ್ದಾರೆ” ಎಂದು ಮಹಿಳೆಯ ಅತ್ತೆ ಮಿಥಿಲೇಶ್ ಮಿರ್ಧಾ ಆರೋಪಿಸಿದ್ದಾರೆ.

“ಆಸ್ಪತ್ರೆಯಿಂದ ಬಲವಂತವಾಗಿ ಹೊರಗೆ ಹಾಕಿಸಿಕೊಂಡ ನಾವು ರಸ್ತೆಗೆ ಬಂದೆವು. ಈ ವೇಳೆ ನನ್ನ ಸೊಸೆ ರಸ್ತೆಯಲ್ಲಿ ಕುಸಿದು ಬಿದ್ದು, ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೆ ನಮ್ಮ ಬಳಿ ಸ್ವಚ್ಛವಾದ ಬಟ್ಟೆ ಇರಲಿಲ್ಲ, ಇದರಿಂದಾಗಿ ನನ್ನ ಮಗನ ಟವೆಲ್ ಅನ್ನು ಮುಚ್ಚಲು ಬಳಸಿದ್ದೇವೆ. ನವಜಾತ ಶಿಶು, ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಸಾವನ್ನಪ್ಪಿದೆ” ಎಂದು ಮಿಥಿಲೇಶ್ ಹೇಳಿದ್ದಾರೆ.

ಸಂತ್ರಸ್ತರ ಆರೋಪವನ್ನು ಭಿಂಡ್ ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ಶುಶ್ರೂಷಾ ಸಿಬ್ಬಂದಿ ನಿರಾಕರಿಸಿದ್ದಾರೆ. “ಮಿರ್ಧಾ ಕುಟುಂಬವು ತಾವಾಗಿಯೇ ಆಸ್ಪತ್ರೆಯನ್ನು ತೊರೆದಿದ್ದಾರೆ” ಎಂದು ನರ್ಸ್ ಹೇಳಿದ್ದಾರೆ. ಜೊತೆಗೆ ಆರು ತಿಂಗಳ ಅಕಾಲಿಕ ಹೆರಿಯಾದ ಶಿಶುಗಳು ಬದುಕುಳಿಯುವುದಿಲ್ಲ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ಭಿಂಡ್ ಜಿಲ್ಲಾ ಆಸ್ಪತ್ರೆಯ ಆಡಳಿತವು ಇಡೀ ಪ್ರಕರಣದ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಿದೆ.

“ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಭ್ರೂಣವು ಗರ್ಭಾಶಯದೊಳಗೆ ಸಾವನ್ನಪ್ಪಿದೆ. ರೋಗಿಯ ಸಂಬಂಧಿಕರಿಗೆ ಕರ್ತವ್ಯ ನಿರತ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದರು, ಆದರೆ ರೋಗಿಯ ಸಂಬಂಧಿಕರು ನಿರಾಕರಿಸಿದರು. ಈ ಮಾಹಿತಿ ಪಡೆದು ಅವರು ಆಸ್ಪತ್ರೆಯಿಂದ ಹೊರನಡೆದರು. ಯಾರೂ ಅವರನ್ನು ಆಸ್ಪತ್ರೆಯಿಂದ ಹೊರಹಾಕಲಿಲ್ಲ” ಎಂದು ಭಿಂಡ್‌ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಗೋಯಲ್ ಅವರು ಹೇಳಿದ್ದಾರೆ.

“ಇಡೀ ಘಟನೆಯ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ. ತನಿಖಾ ಸಮಿತಿಯ ವರದಿಯ ಆಧಾರದ ಮೇಲೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...