Homeಮುಖಪುಟಪ್ರಿಯಾಂಕ ಗಾಂಧಿ ಭಾಷಣದ ನಡುವೆ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಘೋಷಣೆ: ಮುಂದೇನಾಯಿತು?

ಪ್ರಿಯಾಂಕ ಗಾಂಧಿ ಭಾಷಣದ ನಡುವೆ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಘೋಷಣೆ: ಮುಂದೇನಾಯಿತು?

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ರೈತ ಸಮಾವೇಶವನ್ನು ಉದ್ದೇಶಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮಂಗಳವಾರ ಭಾಷಣ ಮಾಡುತ್ತಿದ್ದರು. ಇದರ ನಡುವೆಯೆ ಅತ್ಯಾಚಾರಕ್ಕೊಳಗಾದ ರಾಜಸ್ಥಾನದ ಯುವತಿಯ ತಾಯಿಯೊಬ್ಬರು ನ್ಯಾಯ ಕೋರಿ ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರಿಯಾಂಕ ಗಾಂಧಿ ತಮ್ಮ ಭಾಷಣವನ್ನು ನಿಲ್ಲಿಸಿದ್ದಾರೆ.

ಉತ್ತರ ಪ್ರದೇಶ-ರಾಜಸ್ಥಾನದ ಗಡಿಯಾದ ಭಾರತ್‌ಪುಟ್‌ನಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆಯು ಆರೋಪಿಸಿದ್ದಾರೆ. ಮಹಿಳೆಯು ಮಥುರಾದಲ್ಲಿ ಸಂಬಂಧಿಕರೊಂದಿಗೆ ವಾಸಿಸುತ್ತಿದ್ದು, ಪ್ರಿಯಾಂಕ ಗಾಂಧಿ ಇಲ್ಲಿಗೆ ಆಗಮಿಸುತ್ತಾರೆ ಎಂದು ತಿಳಿದ ನಂತರ ಅವರು ಕಾಂಗ್ರೆಸ್‌‌ನ ರೈತ ರ್‍ಯಾಲಿಯಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಾವಿನ ಸೊಪ್ಪು ಕಿತ್ತ ದಲಿತ ಯುವಕನ ಮೇಲೆ ಹಲ್ಲೆ: ಅಸಹಜ ಸಾವು

ಮಹಿಳೆಯು ಘೋಷಣೆ ಕೂಗಿದ ಸಂದರ್ಭ ವೇದಿಕೆಯಲ್ಲಿ ಪ್ರಿಯಾಂಕ ಗಾಂಧಿ ಉದ್ದೇಶಿಸಿ ಮಾತನಾಡುತ್ತಿದ್ದರು. ಇದರ ನಂತರ ಭಾಷಣ ನಿಲ್ಲಿಸಿ, ಆ ಮಹಿಳೆಯನ್ನು ಪಕ್ಕಕ್ಕೆ ಕರೆದು ಪ್ರಿಯಾಂಕ ಗಾಂಧಿ ಮಾತನಾಡಿಸಿದ್ದಾರೆ. ವಿಷಯ ತಿಳಿದಾಗ ಸ್ಥಳದಲ್ಲೇ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌‌ಗೆ ಕರೆ ಮಾಡಿ ಅತ್ಯಾಚಾರ ಸಂತ್ರಸ್ಥೆಗೆ ನ್ಯಾಯ ಸಿಗಲು ಸಹಾಯ ಮಾಡುವಂತೆ ಒತ್ತಾಯಿಸಿದ್ದಾರೆ. ಅಶೋಕ್ ಗೆಹ್ಲೋಟ್ ತಕ್ಷಣವೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಟ್ವೀಟ್ ಮಾಡಿದ್ದು, ಪ್ರಿಯಾಂಕಾ ಗಾಂಧಿ ಡಬಲ್ ಸ್ಟ್ಯಾಂಡರ್ಡ್ ವ್ಯಕ್ತಿ ಎಂದು ಆರೋಪಿಸಿದ್ದಾರೆ.

“ಈ ಕಣ್ಣೀರು ಮಾಧ್ಯಮಗಳು ಅಥವಾ ಪ್ರಿಯಾಂಕಾ ಅವರಿಗೆ ಕಾಣುವುದಿಲ್ಲ. ಇದಕ್ಕಾಗಿ ಈ ತಾಯಿಯ ಮುಗ್ಧ ಮಗು ರಾಜಸ್ಥಾನದಲ್ಲಿ ಅತ್ಯಾಚಾರಕ್ಕೊಳಗಾಗಿದ್ದು, ದೂರು ನೀಡಲು ಅವರು ಉತ್ತರ ಪ್ರದೇಶದ ಪ್ರಿಯಾಂಕಾ ಗಾಂಧಿಯವರ ರ್‍ಯಾಲಿಗೆ ಬರಬೇಕಾಯಿತು. ರಾಜಸ್ಥಾನದಲ್ಲಿ ಗರಿಷ್ಠ ಅತ್ಯಾಚಾರಗಳಾಗುತ್ತಿದೆ ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನ್ಯಾಯಕ್ಕಾಗಿ ಅಲ್ಲಿಗೆ ಹೋಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಉಸ್ತುವಾರಿಯು ಆಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಾಗ್ಗೆ ಯುಪಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚಿನ ವಾರಗಳಲ್ಲಿ ಅಲ್ಲಿ ಹಲವು ರೈತ ಮಹಾಪಂಚಾಯತ್‌ಗಳನ್ನು ಸಂಘಟಿಸುತ್ತಿದ್ದಾರೆ.

ಅವರು ಯುಪಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಬಗ್ಗೆ ಆದಿತ್ಯನಾಥ್‌ ಸರ್ಕಾರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ಧಾಳಿ ನಡೆಸುತ್ತಲೆ ಇದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...