Homeಕರ್ನಾಟಕಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

- Advertisement -
- Advertisement -

ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿ ಬಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಜನರ ಗುಂಪು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಯೊ ವೈರಲ್ ಆಗಿದೆ. ಮಾಜಿ ಗೆಳತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಅವರ ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಯುವಕರ ಗುಂಪು ಕುಶಾಲ್‌ನನ್ನು ವಿವಸ್ತ್ರಗೊಳಿಸಿ, ರಾಡ್‌ ಮತ್ತು ದೊಣ್ಣೆ ಬಳಸಿ ಆತನ ಖಾಸಗಿ ಭಾಗಗಳಿಗೆ ಹೊಡೆದು, ಸಂಪೂರ್ಣ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ.

ಮಾಜಿ ಪ್ರೇಯಸಿಗೆ ಸಂದೇಶ ಕಳುಹಿಸಿದ ವಿವಾದದಿಂದಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಂಬಂಧದಲ್ಲಿದ್ದ ಕುಶಾಲ್‌ನ ಗೆಳತಿ ಇತ್ತೀಚೆಗೆ ಆತನಿಂದ ಬೇರ್ಪಟ್ಟಿ, ಇನ್ನೊಬ್ಬ ಹುಡುಗನೊಂದಿಗೆ ಹತ್ತಿರವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡಿದ್ದ ಕುಶಾಲ್ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.

ಪೊಲೀಸರ ಪ್ರಕಾರ, ಈ ಹಲ್ಲೆಯನ್ನು ಮಹಿಳೆಯ ಹಾಲಿ ಗೆಳೆಯ ಮತ್ತು ಅವನ ಸಹಚರರು ಸಂಚು ರೂಪಿಸಿ ನಡೆಸಿದ್ದಾರೆ. ಕುಶಾಲ್‌ನ ಸಂದೇಶ ಕಳುಹಿಸಿದ ನಂತರ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ವಿವಾದವನ್ನು ಪರಿಹರಿಸುವ ನೆಪದಲ್ಲಿ ಆತನನ್ನು ಕರೆಸಿ, ಕಾರಿನಲ್ಲಿ ಅಪಹರಿಸಿ, ಕೆರೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಆತನ ಖಾಸಗಿ ಭಾಗಗಳನ್ನು ಗುರಿಯಾಗಿಸಿಕೊಂಡು ಆತನನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ; ಘಟನೆಯನ್ನು ಚಿತ್ರೀಕರಿಸಿದ್ದಾರೆ.

ಹಲ್ಲೆಯ ವೀಡಿಯೊದಲ್ಲಿ, ಆರೋಪಿಗಯೋರ್ವ ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಉಲ್ಲೇಖಿಸಿದ್ದಾನೆ. “ಇದು ಆ ಪ್ರಕರಣದಂತೆಯೇ ಆಗುತ್ತದೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಾವಳಿಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಸೋಲದೇವನಹಳ್ಳಿ ಪೊಲೀಸರು ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾದ ನಾಲ್ವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯು ಕನ್ನಡ ನಟ ದರ್ಶನ್ ಒಳಗೊಂಡ 2024 ರ ಹೈ ಪ್ರೊಫೈಲ್ ಕೊಲೆ ಪ್ರಕರಣಕ್ಕೆ ಹೋಲಿಕೆಯಾಗಿದೆ. ಚಿತ್ರದುರ್ಗದ 33 ವರ್ಷದ ರೇಣುಕಸ್ವಾಮಿ ಬೆಂಗಳೂರಿನ ಸುಮನಹಳ್ಳಿಯ ಚರಂಡಿ ಬಳಿ ಬಹು ಗಾಯಗಳೊಂದಿಗೆ ಮೃತಪಟ್ಟಿರುವುದು ಪತ್ತೆಯಾಗಿತ್ತು. ದರ್ಶನ್ ಜೊತೆ ಸಂಪರ್ಕ ಹೊಂದಿರುವ ನಟಿ ಪವಿತ್ರಾ ಗೌಡಗೆ ಆತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ಇದು ಆತನ ಅಪಹರಣ, ಚಿತ್ರಹಿಂಸೆ ಮತ್ತು ಕೊಲೆಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ.

ಹಣಕಾಸಿನ ವಿವಾದವನ್ನು ಉಲ್ಲೇಖಿಸಿ ನಾಲ್ವರು ಆರಂಭದಲ್ಲಿ ಪೊಲೀಸರಿಗೆ ಶರಣಾದರು. ಆದರೆ, ಅವರ ಹೇಳಿಕೆಗಳಲ್ಲಿನ ಭೀನ್ನತಯು ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರನ್ನು ಒಳಗೊಂಡ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಿತು. ಕೊಲೆಯಲ್ಲಿ ಪಾತ್ರ ವಹಿಸಿದ್ದಕ್ಕಾಗಿ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಯಿತು. ಇದೀಗ ಜಾಮೀನಿನ ಮೇಲೆ ಆರೋಪಿಗಳೆಲ್ಲರೂ ಹೊರಗಿದ್ದಾರೆ.

ಒಬಿಸಿ ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: ಸಿಎಂ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...