Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...