Homeಮುಖಪುಟತಪ್ಪು ಮಾಹಿತಿ ಹರಡಿದ ಆರೋಪ: Aaj Takನ ಸುಧೀರ್ ಚೌಧರಿ ವಿರುದ್ಧ ಪ್ರಕರಣ ದಾಖಲು

ತಪ್ಪು ಮಾಹಿತಿ ಹರಡಿದ ಆರೋಪ: Aaj Takನ ಸುಧೀರ್ ಚೌಧರಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೋಮವಾರ, ಚೌಧರಿ ಅವರು ಹಿಂದಿ ಸುದ್ದಿ ವಾಹಿನಿ Aaj takನ ಕಾರ್ಯಕ್ರಮದಲ್ಲಿ ”ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಸಬ್ಸಿಡಿ ನೀಡಿದ್ದು, ಹಿಂದೂಗಳಿಗೆ ಇಲ್ಲ” ಎಂದು ವರದಿ ಬಿತ್ತರಿಸಿದ್ದರು. ಅಲ್ಲಿ ಅವರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯನ್ನು ಹಿಂದೂಗಳಿಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ಯೋಜನೆಯು ವಾಣಿಜ್ಯ ವಾಹನಗಳನ್ನು ಖರೀದಿಸಲು 4.5 ಲಕ್ಷಕ್ಕಿಂತ ಕಡಿಮೆ ಕುಟುಂಬದ ಆದಾಯ ಹೊಂದಿರುವ ಧಾರ್ಮಿಕ ಅಲ್ಪಸಂಖ್ಯಾತರ ಜನರಿಗೆ 50% ಅಥವಾ 3 ಲಕ್ಷದವರೆಗೆ ಸಬ್ಸಿಡಿ ಹಣ ನೀಡುತ್ತದೆ.

ಕರ್ನಾಟಕವು ಮುಸ್ಲಿಮರು, ಕ್ರಿಶ್ಚಿಯನ್ನರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿಗಳನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂದು ವರ್ಗೀಕರಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈ ಯೋಜನೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ ಇದುವರೆಗೆ ಅಂತಹ ಯಾವುದೇ ಅಧಿಸೂಚನೆಯನ್ನು ಬಿಡುಗಡೆ ಮಾಡಿಲ್ಲ ಎಂದು ಚೌಧರಿ ಹೇಳಿದರು. ಆದಾಗ್ಯೂ, ಪ್ರಸ್ತುತ ಕರ್ನಾಟಕದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾಗರಿಕರು ಐರಾವತ ಯೋಜನೆಯ ಮೂಲಕ ಇದೇ ರೀತಿಯ ಪ್ರಯೋಜನಗಳನ್ನು ಪಡೆಯಬಹುದು, ಅದರ ಅಡಿಯಲ್ಲಿ ಕ್ಯಾಬ್ ಅಗ್ರಿಗೇಟರ್‌ಗಳೊಂದಿಗೆ ಕೆಲಸವನ್ನು ಕೈಗೊಳ್ಳಲು ಸರ್ಕಾರ ಅವರಿಗೆ ಸಹಾಯ ಮಾಡುತ್ತದೆ. ಈ ಯೋಜನೆಯು ಲಘು ಮೋಟಾರು ವಾಹನವನ್ನು ಖರೀದಿಸಲು 5 ಲಕ್ಷ ರೂ.ಗಳ ಸಹಾಯಧನವನ್ನು ಒದಗಿಸುತ್ತದೆ.

ಚೌಧರಿ ಅವರ ಕಾರ್ಯಕ್ರಮದ ನಂತರ, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕರ್ನಾಟಕ ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿರುವ Aaj Tak ವಾಹಿನಿ ಮತ್ತು ನಿರೂಪಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡಿದ್ದರು.

ಬಿಜೆಪಿ ಸಂಸದರು ಮೊದಲು ಈ ರೀತಿ ಸುಳ್ಳು ಹೇಳುವುದನ್ನು ಪ್ರಾರಂಭಿಸಿದ್ದರು. ಇದೀಗ ಮಾಧ್ಯಮಗಳು ಸರ್ಕಾರದ ಯೋಜನೆಗಳ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದೆ. ಇದು ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತವಾಗಿದ್ದು, ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಐಪಿಸಿ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಸುದ್ದಿ ನಿರೂಪಕರನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಯೋಜನೆಯ ಬಗ್ಗೆ ಸುಳ್ಳು ವರದಿ: ವಾಹಿನಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹೇಳಿದ ಪ್ರಿಯಾಂಕ್‌ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read