HomeಮುಖಪುಟAaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

Aaj Takನ ಸುಧೀರ್ ಚೌಧರಿ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಇದೆ ಎಂದ ಹೈಕೋರ್ಟ್

- Advertisement -
- Advertisement -

Aaj Takನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು ತಮ್ಮ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಾಹನ ಸಬ್ಸಿಡಿ ಕಾರ್ಯಕ್ರಮದ ಬಗ್ಗೆ ತಪ್ಪು ಮಾಹಿತಿ ರವಾನಿಸಿದ್ದು, ಇದೀಗ ಅವರ ವಿರುದ್ಧ ಕರ್ನಾಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಅವರ ವಿರುದ್ಧ ತನಿಖೆ ನಡೆಸುವ ಅಗತ್ಯತೆ ಹೊರನೋಟಕ್ಕೆ ಗೋಚರಿಸುತ್ತದೆ ಎಂದು ಹೈಕೋರ್ಟ್‌ ಇಂದು ಮೌಖಿಕವಾಗಿ ಹೇಳಿದೆ.

”ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳಿ ಶೋ ಒಂದನ್ನು ಸುಧೀರ್‌ ಚೌಧರಿ ಇತ್ತೀಚೆಗೆ ನಡೆಸಿದ್ದು ಅದರಲ್ಲಿ ಅವರು ಸುಳ್ಳು ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಕುಮಾರ್‌ ಎಸ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ಶುಕ್ರವಾರದ ವಿಚಾರಣೆ ವೇಳೆ ಜಸ್ಟಿಸ್‌ ಹೇಮಂತ್‌ ಚಂದನ್‌ಗೌಡರ್‌ ಹೇಳಿದರು.

”ಮಾಹಿತಿ ಒದಗಿಸುವುದು ಮಾಧ್ಯಮದ ಜವಾಬ್ದಾರಿ ಆದರೆ ಇದು ನೀಡಬೇಕಾದ ಮಾಹಿತಿಯಲ್ಲ. ಪ್ರಯೋಜನಗಳನ್ನು ಅಲ್ಪಸಂಖ್ಯಾತರಿಗೆ ಮಾತ್ರವೇ ನೀಡಲಾಗುತ್ತದೆ ಎಂದೇನಿಲ್ಲ, ಕಾರ್ಪೊರೇಟ್‌ ಸಂಸ್ಥೆಗಳಿಗೂ ನೀಡಲಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು ಇಂತಹುದೇ ಯೋಜನೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಇತ್ತು. ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆ ಒದಗಿಸುತ್ತಿದೆ ಹಿಂದೂಗಳನ್ನು ವಂಚಿತರನ್ನಾಗಿಸುತ್ತದೆ ಎಂಬ ಆರೋಪವನ್ನು ಚಾನೆಲ್‌ ಹೊರಿಸಿದೆ.

ಈ ಪ್ರಕರಣದಲ್ಲಿ ತನಿಖೆ ನಡೆಸಲು ಸೂಕ್ತ ಕಾರಣಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಸೆಪ್ಟೆಂಬರ್‌ 11ರಂದು ಚೌಧುರಿ ಪ್ರಸ್ತುತ ಪಡಿಸಿದ ಕಾರ್ಯಕ್ರಮವೊಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಾಹೀರಾತೊಂದರತ್ತ ಬೆಳಕು ಚೆಲ್ಲಿತ್ತು. ವಾಣಿಜ್ಯ ವಾಹನಗಳ ಖರೀದಿಗಾಗಿ ವಾರ್ಷಿಕ ರೂ. 4.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಜನರಿಗೆ ರೂ 3 ಲಕ್ಷದ ತನಕ ಶೇ50 ಸಬ್ಸಿಡಿ ನೀಡುವ ಯೋಜನೆಯ ಕುರಿತ ಜಾಹೀರಾತು ಅದಾಗಿತ್ತು.

ಆದರೆ ಈ ಯೋಜನೆ ತಾರತಮ್ಯಕಾರಿ ಮತ್ತು ಈ ಯೋಜನೆ ಹಿಂದುಗಳಿಗೆ ಲಭ್ಯವಿಲ್ಲ ಎಂದು ಸುಧೀರ್‌ ಚೌಧರಿ ಅವರು ತಮ್ಮ ಶೋದಲ್ಲಿ ಹೇಳಿಕೊಂಡಿದ್ದರು.

ಆದರೆ ಇದೇ ಪ್ರಯೋಜನವನ್ನು ಪರಿಶಿಷ್ಟ ಜಾತಿ ಪಂಗಡಗಳ ಸದಸ್ಯರು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಪಡೆಯಬಹುದು ಮತ್ತು ಹಿಂದುಳಿದ ವರ್ಗಗಳು ರಾಜ್ಯ ಸರ್ಕಾರದಿಂದ ಪಡೆಯಬಹುದು ಎಂಬುದನ್ನು ಈ ಶೋ ಹೇಳಿಲ್ಲ.

ಈ ಮೂರೂ ಯೋಜನೆಗಳು ಜುಲೈ 2023ರ ಕರ್ನಾಟಕ ಬಜೆಟಿನಲ್ಲಿ ಉಲ್ಲೇಖಿಸಲಾಗಿತ್ತು. ಸ್ವಾವಲಂಬಿ ಸಾರಥಿ ಎಂಬ ವಾಹನ ಸಬ್ಸಿಡಿ ಯೋಜನೆಯಡಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ವರ್ಗದವರು ಮತ್ತು ಹಿಂದುಳಿದ ವರ್ಗಗಳವರು ಪ್ರಯೋಜನ ಪಡೆಯಬಹುದು ಎಂದು ಬಜೆಟ್‌ ಹೇಳಿತ್ತು.

”ಈ ಯೋಜನೆ ಹಿಂದೂಗಳಿಗಲ್ಲ” ಎಂದು ಹೇಳುವ ಮೂಲಕ ಚೌಧರಿ ಅವರು ಯೋಜನೆಗೆ ಮತೀಯ ಬಣ್ಣ ನೀಡಲು ಚೌಧರಿ ಯತ್ನಿಸಿದ್ದರು.

”ನೀವು ತುಂಬಾ ಬಡವರಾಗಿದ್ದರೆ, ನಿಮ್ಮಲ್ಲಿ ಹಣವಿಲ್ಲದೇ ಇದ್ದರೆ, ಆದರೆ ನೀವು ಹಿಂದು ಆಗಿದ್ದರೆ, ವಾಹನ ಖರೀದಿಸಲು ನಿಮಗೆ ಸಬ್ಸಿಡಿ ದೊರೆಯುವುದಿಲ್ಲ ಎಂದು ಹೇಳುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡುತ್ತಿದೆ. ಆದರೆ ಮುಸ್ಲಿಮರು, ಸಿಖರು, ಬೌದ್ಧರು ವಾಹನ ಖರೀದಿಗೆ ಸಬ್ಸಿಡಿ ಪಡೆಯಬಹುದು” ಎಂದು ಚೌಧರಿ ತಮ್ಮ ಶೋದಲ್ಲಿ ಹೇಳಿದ್ದರು.

ಇದನ್ನೂ ಓದಿ: ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಳ್ಳು ಸುದ್ದಿಯ ವಿಡಿಯೋ ಡಿಲಿಟ್‌ ಮಾಡಿದ Aaj Tak

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...