Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಆಪ್‌ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಬಿಜೆಪಿ ಸಹವಾಸ, ಜನಸಾಮಾನ್ಯರಿಗೆ ಉಪವಾಸ.. ಕಾರು, ಬೈಕು ಮ್ಯೂಸಿಯಂನಲ್ಲಿ, ಸೈಕಲ್‌ ಬಂಡಿ ರೋಡಿನಲ್ಲಿ, ಬಿಜೆಪಿ ನಿನ್ನ ಕಾಲದಲ್ಲಿ” ಎಂಬಂತಹ ಬ್ಯಾನರ್‌ ಫ್ಲೆಕಾರ್ಡುಗಳನ್ನಿಡಿದು, ಸೈಕಲ್‌ ಮತ್ತು ಕುದುರೆ ಬಂಡಿ ಮೇಲೆ ಸವಾರಿ ಮಾಡುವ ಮೂಲಕ ಆಪ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕ್ರಮವಾಗಿ ₹ 1.59 ಹಾಗೂ 1.60 ಕ್ಕೆ ಏರಿಸಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದರು.

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.


ಈ ಹಿಂದಿನ ಸಮ್ಮಿಶ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕೇವಲ 10 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಆಕಾಶ ಭೂಮಿ ಒಂದಾಗುವಂತೆ ಕೂಗಾಡಿದ್ದ ಇದೇ ಬಿಜೆಪಿ ಮಂದಿ ಇಂದು ಬಾಯಿಗೆ ಕಡುಬು ತುರುಕಿ ಕೊಂಡಿರುವುದನ್ನು ನೋಡಿದರೆ, ‘ತಾನು ಕಳ್ಳ ಪರರನ್ನು ನಂಬ’ ಎನ್ನುವ ಸ್ಥಿತಿಯನ್ನು ಬಿಜೆಪಿಯವರು ತಲುಪಿದ್ದಾರೆ ಎನ್ನಬಹುದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಕಿಡಿಕಾರಿದರು.

15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರುವ ಪಾಲು ಕಡಿತ ಆಗಿದೆ. ಜಿಎಸ್‌ಟಿ ಪರಿಹಾರವೂ ಸಹ ಕಡಿಮೆ ಆಗಿದ್ದು ಇದರಿಂದ ರಾಜ್ಯಕ್ಕೆ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ. ಇದರ ಪರಿಣಾಮ, ಸಾರ್ವಜನಿಕರು ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಮೇಲೆ ಸಾಗಾಣೆ ವೆಚ್ಚ ಹೆಚ್ಚಾಗಿ, ಇವುಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿಯೂ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ‘ಸ್ವರ್ಗ’ ಮಾಡಲಾಗುವುದು, ‘ಸಿಂಗಾಪುರ’ ಮಾಡಲಾಗುವುದು ಎನ್ನುತ್ತಿದ್ದ ಜನ ಪ್ರತಿನಿಧಿಗಳ ಗಾಢ ನಿದ್ದೆಯಿಂದ ಇನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ ಎಂದು ಟೀಕಿಸಿದರು.

ನೀ ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎನ್ನುವ ಒಪ್ಪಂದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಬಂದಂತೆ ಕಾಣುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಇದುವರೆಗೂ ಸಹ ಈ ಎರಡೂ ಪಕ್ಷಗಳು ದಿವ್ಯ ಮೌನವಹಿಸಿರುವುದು ನೋಡಿದರೆ ಯಾರಿಗೂ ಜನರ ಹಿತಾಸಕ್ತಿ ಇಲ್ಲವೇ ಇಲ್ಲ ಎನ್ನಬಹುದು ಎಂದರು.

ಪ್ರಪಂಚದ 4ನೇ ಅತೀದೊಡ್ಡ ಗುಜುರಾತಿನ ತೈಲ ಘಟಕವನ್ನು ಸಂಪೂರ್ಣವಾಗಿ ರಿಲಯನ್ಸ್ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಿರುವ ಮೋದಿ ಸರ್ಕಾರ, ದೇಶದ ಬಡ ಜನರ ಬೆನ್ನಿನ ಮೇಲೆ ಬಾರ ಹಾಕಿ, ಹಾಕಿ ಗೂನಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಹೆಚ್ಚಳದ ಮೂಲಕ ತೈಲ ಕಂಪನಿಗಳ ಒಡೆಯರ ಜೇಬು ತುಂಬಿಸುತ್ತಿರುವ ಈ ಕ್ರಮವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ಈ ಬಜೆಟ್‌ಗೆ ಅನುಮೋದನೆ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಪಕ್ಷದ ಸ್ಥಳಿಯ ಮುಖಂಡರಾದ ಸೀತಾರಂ ಗುಂಡಪ್ಪ, ಆಯೂಬ್‌ ಖಾನ್, ಜಗದೀಶ್ ಚಂದ್ರ, ಲಕ್ಷ್ಮಿಕಾಂತ್ ರಾವ್, ಶರತ್ ಖಾದ್ರಿ, ಚನ್ನಪ್ಪ ಗೌಡ, ರವಿಚಂದ್ತ, ಫೀರೋಜ್ ಖಾನ್ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...