Homeಕರ್ನಾಟಕಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

- Advertisement -
- Advertisement -

ಕಳ್ಳರು ಜನರ ಗಮನವನ್ನು ಬೇರೆಡೆಗೆ ಸೆಳೆದು ಜೇಬಿಗೆ ಕತ್ತರಿ ಹಾಕುವಂತೆ ಬಿಜೆಪಿಯವರು ಜನರ ಗಮನವನ್ನು ದೇವಸ್ಥಾನ, ಪಾಕಿಸ್ತಾನದತ್ತ ಜನರ ಗಮನ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ. ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಎಎಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಲಿಂಡರ್‌ನ ಅಣಕು ಶವಯಾತ್ರೆ ನಡೆಸಲಾಗಿದೆ.

“ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಶೇ. 50 ರಷ್ಟು ಸಬ್ಸಿಡಿಯೊಂದಿಗೆ ಕೇವಲ 400 ರೂಪಾಯಿಗೆ ಅಡುಗೆ ಅನಿಲ ಸಿಲಿಂಡರ್‌ ಸಿಗುತ್ತಿತ್ತು. ಜನರು ಖರೀದಿಸುವಾಗಲೇ ಸಬ್ಸಿಡಿ ಮೊತ್ತವನ್ನು ಕಳೆದು ಮಾರಾಟ ಮಾಡಿದರೆ ಸಬ್ಸಿಡಿ ಕಡಿತಗೊಳಿಸುವುದು ಜನರ ಗಮನಕ್ಕೆ ಬರುತ್ತದೆ ಎಂದು ಯೋಚಿಸಿ ಮೋದಿ ಸರ್ಕಾರ, ಬ್ಯಾಂಕ್‌ ಖಾತೆಗೆ ಸಬ್ಸಿಡಿ ಮೊತ್ತವನ್ನು ಹಾಕಲು ಆರಂಭಿಸಿತು. ನಂತರ ಹಂತಹಂತವಾಗಿ ಸಬ್ಸಿಡಿ ಮೊತ್ತವನ್ನು 400 ರಿಂದ ಸೊನ್ನೆಗೆ ಇಳಿಸಿತು. ಈಗ ಪದೇ ಪದೇ ಸಿಲಿಂಡರ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆಯಲಾಗುತ್ತಿದೆ” ಎಂದು ಎಎಪಿ ನಾಯಕ ಜಗದೀಶ್‌ ವಿ. ಸದಂ ಬೇಸರ ವ್ಯಕ್ತಪಡಿಸಿದರು.

“ಬಡ ಹಾಗೂ ಮಧ್ಯಮ ವರ್ಗದವರು ಸಾಯುವಂತೆ ಮಾಡಿ, ಭಾರತದಲ್ಲಿ ಶ್ರೀಮಂತರನ್ನಷ್ಟೇ ಉಳಿಸಿಕೊಂಡು ಭಾರತವನ್ನು ವಿಶ್ವಗುರು ಮಾಡಲು ಬಿಜೆಪಿ ನಿರ್ಧರಿಸಿದಂತಿದೆ. ಆದ್ದರಿಂದಲೇ ಬೆಲೆ ಏರಿಕೆ ಮಾಡಿ ಸಾಮಾನ್ಯ ಜನರ ಬದುಕನ್ನು ಹೈರಾಣಾಗಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ ಸಿಲಿಂಡರ್‌ ದರವನ್ನು ಬರೋಬ್ಬರಿ 265 ರೂಪಾಯಿ ಏರಿಕೆ ಮಾಡಲಾಗಿದೆ” ಎಂದರು.

ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಹಲವು ತಿಂಗಳುಗಳ ಕಾಲ ದುಡಿಮೆಯಿಲ್ಲದೇ ಜನರು ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ಸಬ್ಸಿಡಿ ನೀಡಿ ಅವರಿಗೆ ನೆರವಾಗಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಈಗ ಬೆಲೆ ಏರಿಕೆ ಮಾಡಿ ಅವರ ಜೀವನದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಜಗದೀಶ್‌ ವಿ. ಸದಂ ಹೇಳಿದರು.

ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

’ಗ್ರಾಮೀಣ ಭಾಗದ ಬಡ ಜನರು ಕಟ್ಟಿಗೆ ಒಲೆ, ಇದ್ದಿಲು ಒಲೆ ಬಳಸಿ ಆರಾಮಾಗಿ ಜೀವನ ಸಾಗಿಸುತ್ತಿದ್ದರು. ಮೋದಿ ಸರ್ಕಾರ ಉಜ್ವಲ ಯೋಜನೆ ಹೆಸರಿನಲ್ಲಿ ಉಚಿತ ಗ್ಯಾಸ್‌ ಸಂಪರ್ಕ ನೀಡಿತು. ಸರ್ಕಾರವನ್ನು ನಂಬಿ ಅವರು ಕಟ್ಟಿಗೆ, ಇದ್ದಿಲು ಒಲೆಗಳಿಗೆ ವಿದಾಯ ಹೇಳಿದರು. ಈಗ ಗ್ಯಾಸ್‌ ಬೆಲೆಯನ್ನು ವಿಪರೀತ ಏರಿಕೆ ಮಾಡಿದರೆ ಅವರ ಗತಿ ಏನು?’ ಎಂದು ಪ್ರಶ್ನಿಸಿದ್ದಾರೆ.

“ಬೇರೆ ಪಕ್ಷಗಳ ಸರ್ಕಾರವಿದ್ದಾಗ ಎಲ್‌ಪಿಜಿ ಸಿಲಿಂಡರ್‌ ಬೆಲೆ ಒಂದು ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ಬೀದಿಗಿಳಿದು ಬಾಯಿ ಬಡಿದುಕೊಂಡು ಪ್ರತಿಭಟನೆ ಮಾಡುತ್ತಿದ್ದರು. ಈಗ ನೂರಾರು ರೂಪಾಯಿ ಏರಿಕೆಯಾಗಿದ್ದರೂ ಅವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಅಧಿಕಾರದಲ್ಲಿ ಇಲ್ಲದಿದ್ದಾಗ ಒಂದು ನಿಲುವು, ಅಧಿಕಾರ ಸಿಕ್ಕಾಗ ಮತ್ತೊಂದು ನಿಲುವು ತಳೆಯುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು’ ಎಂದು ಜಗದೀಶ್‌ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...