Homeಮುಖಪುಟಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಬಿಜೆಪಿಯು ಜನಾಶೀರ್ವಾದ ಬದಲು ಹೆಣಾಶೀರ್ವಾದ ಯಾತ್ರೆ ಮಾಡಲಿ: ಆಪ್ ಆಕ್ರೋಶ

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳು, ಬಿಜೆಪಿಗರಿಗೆ ಏಕಿಲ್ಲ?

- Advertisement -
- Advertisement -

ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೇ ಅವಿತು ಕುಳಿತು ಈಗ ದಿಢೀರ್‌ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನಾಶೀರ್ವಾದ ಯಾತ್ರೆಯ ಬದಲು ಹೆಣಾಶೀರ್ವಾದ ಯಾತ್ರೆ ಮಾಡುವುದು ಸೂಕ್ತ ಎಂದು ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೋವಿಡ್‌ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್‌, ಆಕ್ಸಿಜನ್‌ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತು. ಪರಿಣಾಮವಾಗಿ, ಸಮೀಕ್ಷೆ ನಡೆಸಿದಾಗ ಹಾಗೂ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಜನಾಶೀರ್ವಾದ ಹೆಸರಿನಲ್ಲಿ ಸುಳ್ಳುಗಳನ್ನು ಪ್ರಚಾರ ಮಾಡುವ ಬದಲು ಹೆಣಾಶೀರ್ವಾದ ಹೆಸರಿನಲ್ಲಿ ಸ್ಮಶಾನಕ್ಕೆ ಹೋಗಿ, ನಿಜಕ್ಕೂ ಕೋವಿಡ್‌ನಿಂದ ಮೃತಪಟ್ಟ ಎಷ್ಟು ಶವಗಳು ಅಲ್ಲಿಗೆ ಬಂದಿವೆ ಎಂದು ವಿಚಾರಿಸಲಿ” ಎಂದು ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್‌, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್‌ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್‌ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ದೇಶಪ್ರೇಮ, ಹಿಂದುತ್ವ ಕೇವಲ ಭಾಷಣಕ್ಕೆ ಹಾಗೂ ಗಲಭೆ ಸೃಷ್ಟಿಸುವುದಕ್ಕೆ ಸೀಮಿತ. “ಹಿಂದೂ ರಾಷ್ಟ್ರ” ಮಾಡುತ್ತೇವೆ ಎಂದು ಹೇಳಿದವರು “ಹಿಂದುಳಿದ ರಾಷ್ಟ್ರ” ಮಾಡುತ್ತಿದ್ದಾರೆ. ಕೃಷಿ ಕಾಯಿದೆ, ಸಿಎಎ, ಎನ್‌ಆರ್‌ಸಿ ಮುಂತಾದವುಗಳಿಗೆ ತಿದ್ದುಪಡಿ ತಂದು ದೇಶದಲ್ಲಿ ಅಶಾಂತಿ ಸೃಷ್ಟಿಸಿದ್ದೇ ಕೇಂದ್ರ ಸರ್ಕಾರದ ಸಾಧನೆ ಎಂದು ಜಗದೀಶ್ ಸದಂ ವ್ಯಂಗ್ಯವಾಡಿದ್ದಾರೆ.

ಆಪ್ ಕಚೇರಿ ಕಾರ್ಯದರ್ಶಿ ವೀಣಾ ಸೆರ್ರಾವ್‌ರವರು ಮಾತನಾಡಿ, “ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಲಾಗುತ್ತಿದೆ. ಜನರಿಗೆ ಮಾತ್ರ ಬಿಗಿ ನಿಯಮಗಳನ್ನು ಜಾರಿಗೆ ತಂದು, ಸಚಿವರು ಮಾತ್ರ ಸ್ವೇಚ್ಛಾಚಾರದಿಂದ ಸಾವಿರಾರು ಬೆಂಬಲಿಗರನ್ನು ಸೇರಿಸುವುದು ಎಷ್ಟು ಸರಿ? ರಾಜ್ಯದಲ್ಲಿ ಬಿಜೆಪಿ ಸಚಿವರಿಗೇ ಒಂದು ಕಾನೂನು, ಸಾಮಾನ್ಯ ಜನರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಈ ಬಗ್ಗೆ ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದರೂ ಸಚಿವರುಗಳು ತಮ್ಮ ನಡೆಯನ್ನು ಬದಲಿಸಿಕೊಳ್ಳದಿರುವುದು ದುರಂತ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರು ಸಂಭ್ರಮಿಸಿದಂತೆ ಯಾದಗಿರಿಯಲ್ಲಿ ಕೇಂದ್ರ ಸಚಿವ ಖೂಬಾ ಅಭಿಮಾನಿಗಳು ಬಂದೂಕಿನಿಂದ ಗುಂಡುಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ” ಎಂದು ಆಗ್ರಹಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ಕೂಡ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಖಂಡಿಸಿದೆ. ರಾಜ್ಯದಲ್ಲಿ ಕರೋನಾ ಉಲ್ಬಣವಾಗುತ್ತಿದೆ, ಲಸಿಕಾಕರಣ ಹಳ್ಳ ಹಿಡಿದಿದೆ, ಲಸಿಕೆ ಕೊಡಲಾಗದೆ ಟಫ್ ರೂಲ್ಸ್ ಹೆಸರಲ್ಲಿ ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದೆ ಸರ್ಕಾರ. ಜನಸಾಮಾನ್ಯರಿಗೆ ರೂಲ್ಸ್ ಹೇರಿ ಬಿಜೆಪಿ ಮಾತ್ರ ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಬಹುದಂತೆ, ಇವರೇನು ಒಲಂಪಿಕ್ಸ್ ಪದಕ ಗೆದ್ದು ಬಂದವರೇ? ಇದು ಕರೋನಾಶಿರ್ವಾದಯಾತ್ರೆ ಎಂದು ಕಿಡಿಕಾರಿದೆ.


ಇದನ್ನೂ ಓದಿ: ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ಬರುವುದಿಲ್ಲವೆ?: ಕಾಂಗ್ರೆಸ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...