Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯದಿದ್ದರೆ ಕೇಜ್ರಿವಾಲ್‌ರನ್ನು ಬಂಧಿಸುವ ಬೆದರಿಕೆ: ಬಿಜೆಪಿ ವಿರುದ್ಧ ಆಪ್ ಆರೋಪ

ಇಂಡಿಯಾ ಮೈತ್ರಿಕೂಟ ತೊರೆಯದಿದ್ದರೆ ಕೇಜ್ರಿವಾಲ್‌ರನ್ನು ಬಂಧಿಸುವ ಬೆದರಿಕೆ: ಬಿಜೆಪಿ ವಿರುದ್ಧ ಆಪ್ ಆರೋಪ

- Advertisement -
- Advertisement -

ಇಂಡಿಯಾ ಮೈತ್ರಿಕೂಟವನ್ನು ತೊರೆಯಿರಿ. ಇಲ್ಲವಾದಲ್ಲಿ ಬಂಧನವಾಗುತ್ತೀರಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆದರಿಕೆ ಹಾಕುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ, “ಅರವಿಂದ್ ಕೇಜ್ರಿವಾಲ್ ಅವರು ಇಂಡಿಯಾ ಮೈತ್ರಿಕೂಟ ತೊರೆಯದಿದ್ದರೆ ಇನ್ನೆರಡು ದಿನಗಳಲ್ಲಿ ಅವರ ಬಂಧನವಾಗಲಿದೆ. ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಮತ್ತು ಸಿಬಿಐ ಬಂಧಿಸಲಿದೆ ಎಂದು ನಮಗೆ ಬೆದರಿಕೆ ಬಂದಿದೆ” ಎಂದು ಆರೋಪಿಸಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರಾಗಲಿ, ನಾವಾಗಲಿ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಬಿಜೆಪಿಗೆ ಹೇಳಲು ಬಯಸುತ್ತೇನೆ. ಬಿಜೆಪಿಯವರು ಎಲ್ಲಾ ಎಎಪಿ ನಾಯಕರು ಮತ್ತು ಶಾಸಕರನ್ನು ಜೈಲಿಗಟ್ಟಿದರೂ, ಪ್ರತಿಯೊಬ್ಬ ಎಎಪಿ ಕಾರ್ಯಕರ್ತ ನಾಯಕನಾಗಿ ನಿಲ್ಲಲಿದ್ದಾನೆ ಮತ್ತು ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶವನ್ನು ರಕ್ಷಿಸಲಿದ್ದಾನೆ” ಎಂದು ಅತಿಶಿ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಏಳನೇ ಬಾರಿ ಸಮನ್ಸ್ ನೀಡಿದೆ. ಇದುವರೆಗೆ ಆರು ಸಮನ್ಸ್‌ಗಳನ್ನು ಕೇಜ್ರಿವಾಲ್ ತಿರಸ್ಕರಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಸೀಟ್ ಹಂಚಿಕೆ ಮಾಡಿಕೊಂಡಿದೆ. ವರದಿಗಳ ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಇದನ್ನೂ ಓದಿ: ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

0
ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ. ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್...