Homeಮುಖಪುಟದೆಹಲಿ, ಹರಿಯಾಣದ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ

ದೆಹಲಿ, ಹರಿಯಾಣದ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ

- Advertisement -
- Advertisement -

ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದ ಅಂತಿಮವಾದ ಕೆಲವೇ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಹರಿಯಾಣಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೇಲೆ ಕೇಂದ್ರೀಕರಿಸಿದೆ.

ಪಕ್ಷದ ಹಿರಿಯ ನಾಯಕ ಸೋಮನಾಥ್ ಭಾರ್ತಿ (ನವದೆಹಲಿ), ಸಾಹಿರಾಮ್ ಪೆಹಲ್ವಾನ್ (ದಕ್ಷಿಣ ದೆಹಲಿ), ಮಹಾಬಲ್ ಮಿಶ್ರಾ (ಪಶ್ಚಿಮ ದೆಹಲಿ) ಮತ್ತು ಕುಲದೀಪ್ ಕುಮಾರ್ (ಪೂರ್ವ ದೆಹಲಿ) ಅವರು ದೆಹಲಿ ಎಎಪಿ ಅಭ್ಯರ್ಥಿಗಳಾಗಿದ್ದಾರೆ. ಹರಿಯಾಣದ ಕುರುಕ್ಷೇತ್ರಕ್ಕೆ ಸುಶೀಲ್ ಗುಪ್ತಾ ಅಭ್ಯರ್ಥೀಯಾಗಿದ್ದಾರೆ.

ಎಎಪಿಯ ಹಿರಿಯ ನಾಯಕ ಸಂದೀಪ್ ಪಾಠಕ್ ಮಾತನಾಡಿ, ‘ನಾವು ಐದು ರಾಜ್ಯಗಳಲ್ಲಿ ಹೋರಾಡುತ್ತೇವೆ ಮತ್ತು ಒಟ್ಟು 29 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದರು.

ಹಲವು ಸಭೆಗಳು ಮತ್ತು ಲೆಕ್ಕಾಚಾರಗಳ ನಂತರ ಈ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರತಿಯೊಂದು ಸ್ಥಾನವನ್ನು ನಾವು ಗೆಲ್ಲಬೇಕು ಎಂದು ಪಕ್ಷದ ಹಿರಿಯ ನಾಯಕ ಗೋಪಾಲ್ ರೈ ಹೇಳಿದರು.

‘ಎಎಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ದೊಡ್ಡ ಮಾನದಂಡವೆಂದರೆ ಗೆಲ್ಲುವುದು… ಬಿಜೆಪಿ ಸಂಸದರು ಕೆಲಸ ಮಾಡುವುದಿಲ್ಲ; ಸಾರ್ವಜನಿಕರ ನಡುವೆ ವಾಸಿಸುವುದಿಲ್ಲ. ಆದರೆ, ಎಎಪಿ ಸಂಸದರು ಕೆಲಸ ಮಾಡುತ್ತಾರೆ ಮತ್ತು ಸಾರ್ವಜನಿಕರಿಗೆ ಹಗಲು ರಾತ್ರಿ ಲಭ್ಯವಿರುತ್ತಾರೆ’ ಎಂದು ಅವರು ಹೇಳಿದರು.

ಸಾಮಾನ್ಯ ಸ್ಥಾನವಾಗಿರುವ ಪೂರ್ವ ದೆಹಲಿ ಕ್ಷೇತ್ರದಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಪಕ್ಷವು “ಐತಿಹಾಸಿಕ ನಿರ್ಧಾರ” ತೆಗೆದುಕೊಂಡಿದೆ. ಕುಲದೀಪ್ ಕುಮಾರ್ ಅವರು ಪರಿಶಿಷ್ಟ ಜಾತಿಯಿಂದ ಬಂದಿದ್ದು, ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಮೀಸಲು ವರ್ಗದ ಅಭ್ಯರ್ಥಿ ಸಾಮಾನ್ಯ ಸ್ಥಾನದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಜಾತಿ ಆಧಾರಿತ ರಾಜಕೀಯವನ್ನು ಕೊನೆಗಾಣಿಸುವ ಉದ್ದೇಶದಿಂದ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವೆ ಅತಿಶಿ ಹೇಳಿದರು. ‘ಎಎಪಿ ಸಾರ್ವಜನಿಕರಿಗಾಗಿ ಯಾರು ಕೆಲಸ ಮಾಡುತ್ತಾರೆ ಮತ್ತು ಸಾರ್ವಜನಿಕರೊಂದಿಗೆ ಬದುಕುತ್ತಾರೆ ಎಂಬುದನ್ನು ಮಾತ್ರ ನೋಡುತ್ತಾರೆ. ಅವರ ಕೆಲಸ ಮತ್ತು ಸಾರ್ವಜನಿಕ ಸೇವೆಯಿಂದಾಗಿ ನಾವು ಅವರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...