Homeಮುಖಪುಟಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ)ದ ಮೂರನೇ ಸಮನ್ಸ್ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್‌ ಆದ್ಮಿ ಪಕ್ಷದ ನಾಯಕರೇ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕೇಜ್ರಿವಾಲ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕೇಜ್ರಿವಾಲ್ ಅವರಿಗೆ ಇಡಿ ನಿನ್ನೆ(ಡಿ.3) ಮೂರನೇ ಸಮನ್ಸ್ ನೀಡಿದೆ. ಈ ಹಿಂದೆ ನವೆಂಬರ್ 2 ಮತ್ತು ಡಿಸೆಂಬರ್ 21ರಂದು ಎರಡು ಸಮನ್ಸ್ ನೀಡಲಾಗಿತ್ತು. ಆದರೆ, ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ. ಮೂರನೇ ಸಮನ್ಸ್ ಬಳಿಕವೂ ಅವರು ವಿಚಾರಣೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಬೆನ್ನಲ್ಲೇ ದೆಹಲಿ ಸರ್ಕಾರದ ಸಚಿವೆ, ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕಿ ಅತಿಶಿ ಸಿಂಗ್ ಸೇರಿದಂತೆ ಎಎಪಿಯ ಅನೇಕರು ನಾಯಕರು, ‘ಇಡಿ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿ ಅವರನ್ನು ಬಂಧಿಸುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಆಮ್ ಆದ್ಮಿಯ ನಾಯಕರು ಕೇಜ್ರಿವಾಲ್ ಬಂಧನದ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಕೇಜ್ರಿವಾಲ್ ಅವರ ಮನೆಯ ಭದ್ರತೆ ಹೆಚ್ಚಿಸಿದ್ದಾರೆ. ಹೆಚ್ಚಿನ ಸಿಬ್ಬಂದಿಯನ್ನು ಅವರ ನಿವಾಸದ ಗೇಟ್ ಬಳಿ ನಿಯೋಜಿಸಲಾಗಿದೆ.

ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರನ್ನು ಆರೋಪಿ ಮಾಡಲಾಗಿದೆಯಾ? ಸಾಕ್ಷಿಯಾಗಿ ಪರಿಗಣಿಸಲಾಗಿದೆಯಾ? ಗೊತ್ತಿಲ್ಲ. ಆದರೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಅವರನ್ನು ಬಂಧಿಸಿ ಚುನಾವಣಾ ಕಣದಿಂದ ದೂರ ಇಡುವ ಸಂಚನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಇಂದು ಮಧ್ಯಾಹ್ನ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇದುವರೆಗೆ ಆಮ್ ಆದ್ಮಿಯ ಮೂವರು ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಬಂಧನವಾಗಿದೆ. ಇವರೆಲ್ಲರೂ ಪ್ರಸ್ತುತ ಜೈಲಿನಲ್ಲಿದ್ದಾರೆ. ಮುಂದೆ ಕೇಜ್ರಿವಾಲ್ ಅವರನ್ನು ಬಂಧಿಸುವುದು ಖಚಿತ ಎಂದು ಆಮ್ ಆದ್ಮಿ ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟ ಮಾಡುತ್ತಿದ್ದ ಯುವಕನಿಗೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...