Homeಮುಖಪುಟಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

- Advertisement -
- Advertisement -

ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.

ಅಲ್ಲದೇ, “ನಾನೇನು ಅವಳನ್ನು ರೇಪ್‌ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.

ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.

ಇದನ್ನೂ ಓದಿರಿ: ‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....